ರೋಹಿಣಿ ಕೋರ್ಟ್ ಆವರಣದಲ್ಲಿ ಶೂಟೌಟ್, ಓರ್ವ ಸಾವು

Posted By:
Subscribe to Oneindia Kannada

ನವದೆಹಲಿ, ನವೆಂಬರ್ 13: ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಕೆಲವರಿಗೆ ಗಾಯಗಳಾಗಿವೆ ಎಂದು ಟೈಮ್ಸ್ ನೌ ವರದಿ ಮಾಡಿದೆ.

ಗುಂಡಿನ ದಾಳಿಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಗ್ಯಾಂಗ್ ವಾರ್ ನಿಂದ ನಡೆದ ಶೂಟೌಟ್ ಎಂದು ಶಂಕಿಸಲಾಗಿದೆ. ಇದು ಈ ವರ್ಷದಲ್ಲಿ ಇದೇ ಕೋರ್ಟ್ ಆವರಣದಲ್ಲಿ ನಡೆದ ಎರಡನೇ ಗುಂಡಿನ ದಾಳಿ ಪ್ರಕರಣವಾಗಿದೆ.

Firing Inside Rohini Court, One Killed

ಏಪ್ರಿಲ್ ತಿಂಗಳಿನಲ್ಲಿ ಕೊಲೆ ಪ್ರಕರಣವೊಂದರ ವಿಚಾರಣಾಧೀನ ಕೈದಿಯನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
An incident of firing has been reported from New Delhi’s Rohini court. One person is reported dead in the firing, as per Times Now. The reasons for the firing are not yet known.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ