ದೆಹಲಿ ರೈಲ್ವೆ ಕೋವಿಡ್ ಕೇರ್ ಸೆಂಟರ್‌ಗೆ ಮೊದಲ ರೋಗಿ ಆಗಮನ
ನವದೆಹಲಿ, ಜೂನ್ 24 : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಾಗ ಭಾರತೀಯ ರೈಲ್ವೆ ಸ್ಲೀಪರ್ ಕೋಚ್‌ಗಳನ್ನು ಐಸೋಲೇಷನ್ ವಾರ್ಡ್‌ಗಳಾಗಿ ಪರಿವರ್ತನೆ ಮಾಡಿತ್ತು. ಮೊದಲ ಬಾರಿಗೆ ರೋಗಿಗಳು ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯಲು ಆಗಮಿಸಿದ್ದಾರೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಆದ್ದರಿಂದ ಕೇಂದ್ರ ಸರ್ಕಾರ ರಾಜ್ಯಕ್ಕೆ 503 ರೈಲ್ವೆ ವಾರ್ಡ್‌ಗಳನ್ನು ನೀಡಿದೆ. ಕೋವಿಡ್ ಕೇರ್ ಸೆಂಟರ್‌ಗಳಾಗಿ ಇವುಗಳನ್ನು ಬಳಕೆ ಮಾಡಲಾಗುತ್ತದೆ.
ಬುಧವಾರ ಮೊದಲ ರೋಗಿಯನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲು ಮಾಡಲಾಗಿದೆ. ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ಸಾಕಾರ್ ಬಸ್ತಿ ರೈಲು ನಿಲ್ದಾಣದಲ್ಲಿ ಕೇರ್ ಸೆಂಟರ್‌ಗೆ ಮೊದಲ ರೋಗಿಯನ್ನು ದಾಖಲಿಸಲಾಗಿದೆ.

"ನಾವು ಕೋವಿಡ್ -19 ವಿರುದ್ಧದ ಹೋರಾಟಕ್ಕೆ ಸಹಕಾರ ನೀಡಲು ಬದ್ಧರಾಗಿದ್ದೇವೆ. ಅಗತ್ಯವಾದ ಸಹಕಾರವನ್ನು ನಾವು ನೀಡಲಿದ್ದೇವೆ" ಎಂದು ಕೇಂದ್ರ ರೈಲ್ವೆ ಸಚಿವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ನವದೆಹಲಿ ದೇಶದಲ್ಲಿಯೇ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 66,602ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ತರಲು ಕೇಂದ್ರ ಸರ್ಕಾರವೂ ಕೈ ಜೋಡಿಸಿದೆ.
First patient arrived at Shakur Basti COVID Care Center of Railways in New Delhi.
— Piyush Goyal (@PiyushGoyal) June 24, 2020
We are committed to provide all necessary help in this fight against COVID-19. pic.twitter.com/JJoTxYt00U
ದೆಹಲಿ ಸರ್ಕಾರ ಸೋಂಕಿತರಿಗೆ ಚಿಕಿತ್ಸೆ ನೀಡಲು ದಕ್ಷಿಣ ದೆಹಲಿಯ ರಾಧಾ ಸೋಮಿ ಸತ್ಸಂಗ್ ಬಿಯಾಸ್ ಕ್ಯಾಂಪಸ್‌ನಲ್ಲಿ ತಾತ್ಕಾಲಿಕ ಆಸ್ಪತ್ರೆಯನ್ನು ನಿರ್ಮಾಣ ಮಾಡಿದೆ. ಇಲ್ಲಿ 10 ಸಾವಿರ ಹಾಸಿಗೆಗಳ ವ್ಯವಸ್ಥೆ ಇದೆ.












Click it and Unblock the Notifications