ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ರೈಲ್ವೆ ಕೋವಿಡ್‌ ಕೇರ್‌ ಸೆಂಟರ್‌ಗೆ ಮೊದಲ ರೋಗಿ ಆಗಮನ

|
Google Oneindia Kannada News

ನವದೆಹಲಿ, ಜೂನ್ 24 : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಾಗ ಭಾರತೀಯ ರೈಲ್ವೆ ಸ್ಲೀಪರ್ ಕೋಚ್‌ಗಳನ್ನು ಐಸೋಲೇಷನ್ ವಾರ್ಡ್‌ಗಳಾಗಿ ಪರಿವರ್ತನೆ ಮಾಡಿತ್ತು. ಮೊದಲ ಬಾರಿಗೆ ರೋಗಿಗಳು ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯಲು ಆಗಮಿಸಿದ್ದಾರೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಆದ್ದರಿಂದ ಕೇಂದ್ರ ಸರ್ಕಾರ ರಾಜ್ಯಕ್ಕೆ 503 ರೈಲ್ವೆ ವಾರ್ಡ್‌ಗಳನ್ನು ನೀಡಿದೆ. ಕೋವಿಡ್ ಕೇರ್ ಸೆಂಟರ್‌ಗಳಾಗಿ ಇವುಗಳನ್ನು ಬಳಕೆ ಮಾಡಲಾಗುತ್ತದೆ.

ಡಾಕ್ಟರ್‌, ನರ್ಸ್ ನಿಯೋಜನೆ ಮಾಡಿ; ಅರವಿಂದ ಕೇಜ್ರಿವಾಲ್ ಪತ್ರಡಾಕ್ಟರ್‌, ನರ್ಸ್ ನಿಯೋಜನೆ ಮಾಡಿ; ಅರವಿಂದ ಕೇಜ್ರಿವಾಲ್ ಪತ್ರ

ಬುಧವಾರ ಮೊದಲ ರೋಗಿಯನ್ನು ಕೋವಿಡ್ ಕೇರ್‌ ಸೆಂಟರ್‌ಗೆ ದಾಖಲು ಮಾಡಲಾಗಿದೆ. ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ಸಾಕಾರ್ ಬಸ್ತಿ ರೈಲು ನಿಲ್ದಾಣದಲ್ಲಿ ಕೇರ್ ಸೆಂಟರ್‌ಗೆ ಮೊದಲ ರೋಗಿಯನ್ನು ದಾಖಲಿಸಲಾಗಿದೆ.

ಕೋವಿಡ್ - 19 ಸೋಂಕು; ದೇಶದಲ್ಲಿ 2ನೇ ಸ್ಥಾನಕ್ಕೆ ಬಂದ ದೆಹಲಿ ಕೋವಿಡ್ - 19 ಸೋಂಕು; ದೇಶದಲ್ಲಿ 2ನೇ ಸ್ಥಾನಕ್ಕೆ ಬಂದ ದೆಹಲಿ

First Patient Arrives At Shakur Basti COVID Care Center Of Railways

"ನಾವು ಕೋವಿಡ್ -19 ವಿರುದ್ಧದ ಹೋರಾಟಕ್ಕೆ ಸಹಕಾರ ನೀಡಲು ಬದ್ಧರಾಗಿದ್ದೇವೆ. ಅಗತ್ಯವಾದ ಸಹಕಾರವನ್ನು ನಾವು ನೀಡಲಿದ್ದೇವೆ" ಎಂದು ಕೇಂದ್ರ ರೈಲ್ವೆ ಸಚಿವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮೈಸೂರು: ಜನಮನ ಸೆಳೆಯುತ್ತಿದೆ ರೈಲ್ವೆ ವಸ್ತು ಸಂಗ್ರಹಾಲಯದ ಕೆಫೆಟೇರಿಯ ಮೈಸೂರು: ಜನಮನ ಸೆಳೆಯುತ್ತಿದೆ ರೈಲ್ವೆ ವಸ್ತು ಸಂಗ್ರಹಾಲಯದ ಕೆಫೆಟೇರಿಯ

ನವದೆಹಲಿ ದೇಶದಲ್ಲಿಯೇ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 66,602ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ತರಲು ಕೇಂದ್ರ ಸರ್ಕಾರವೂ ಕೈ ಜೋಡಿಸಿದೆ.

ದೆಹಲಿ ಸರ್ಕಾರ ಸೋಂಕಿತರಿಗೆ ಚಿಕಿತ್ಸೆ ನೀಡಲು ದಕ್ಷಿಣ ದೆಹಲಿಯ ರಾಧಾ ಸೋಮಿ ಸತ್ಸಂಗ್ ಬಿಯಾಸ್ ಕ್ಯಾಂಪಸ್‌ನಲ್ಲಿ ತಾತ್ಕಾಲಿಕ ಆಸ್ಪತ್ರೆಯನ್ನು ನಿರ್ಮಾಣ ಮಾಡಿದೆ. ಇಲ್ಲಿ 10 ಸಾವಿರ ಹಾಸಿಗೆಗಳ ವ್ಯವಸ್ಥೆ ಇದೆ.

English summary
Union railway minister Piyush Goyal tweeted that first patient arrived at Shakur Basti COVID - 19 care center of railways in New Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X