• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ವಿಶೇಷ ಸಂತಾಪ

|

ನವದೆಹಲಿ, ಅಕ್ಟೋಬರ್.09: ದೇಶಾದ್ಯಂತ ಕೇಂದ್ರ ಆಹಾರ ಹಾಗೂ ಪಡಿತರ ಸರಬರಾಜು ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ಸಂತಾಪ ಸೂಚಿಸಲಾಗುತ್ತಿದೆ. ರಾಷ್ಟ್ರಪತಿ ಭವನ ಮತ್ತು ಸಂಸತ್ ಮೇಲಿನ ರಾಷ್ಟ್ರಧ್ವಜವನ್ನು ಅರ್ಧದಷ್ಟು ಇಳಿಸಲಾಗಿದೆ. ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಾಡಲು ಬಿಡುವ ಮೂಲಕ ಕೇಂದ್ರ ಸಚಿವರ ನಿಧನಕ್ಕೆ ಸಂತಾಪ ಸೂಚಿಸಲಾಗುತ್ತಿದೆ.

ನವದೆಹಲಿಯ ರಾಮ್ ವಿಲಾಸ್ ಪಾಸ್ವಾನ್ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಶುಕ್ರವಾರ ಬೆಳಗ್ಗೆ ಪಾರ್ಥಿವ ಶರೀರವನ್ನು ಇರಿಸಿದ ನಿವಾಸಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದರು. ಪುಷ್ಪ ನಮನ ಸಲ್ಲಿಸಿ ಅಂತಿಮ ದರ್ಶನ ಪಡೆದರು.

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ಗಣ್ಯರ ಕಂಬನಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಕೂಡಾ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ದರ್ಶನವನ್ನು ಪಡೆದುಕೊಂಡರು. ಗುರುವಾರ ರಾತ್ರಿ ವಿಧಿವಶರಾದ ರಾಮ್ ವಿಲಾಸ್ ಪಾಸ್ವಾನ್ ಅವರ ಸಾವಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಗುರುವಾರ ರಾಮ್ ವಿಲಾಸ್ ಪಾಸ್ವಾನ್ ವಿಧಿವಶ:

ಕಳೆದ ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ರನ್ನು ಸಪ್ಟೆಂಬರ್.11ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನವದೆಹಲಿ ಖಾಸಗಿ ಆಸ್ಪತ್ರೆಯಲ್ಲಿ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು ಎಂದು ಪುತ್ರ ಚಿರಾಗ್ ಪಾಸ್ವಾನ್ ತಿಳಿಸಿದ್ದಾರೆ.

ಗುರುವಾರ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪುತ್ರ ಚಿರಾಗ್ ಪಾಸ್ವಾನ್ ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಭಾವನಾತ್ಮಕ ಪೋಸ್ಟ್ ಮೂಲಕ ಹೇಳಿಕೊಂಡಿದ್ದಾರೆ. ಸರಳ, ಸಜ್ಜನ ವ್ಯಕ್ತಿತ್ವದ ರಾಜಕಾರಣಿ ಎನಿಸಿಕೊಂಡಿದ್ದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಸಾವಿಗೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.

English summary
Flags At Rashtrapati Bhavan And Parliament Fly At Half-Mast To Condole The Demise Of Minister Ram Vilas Paswan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X