ಜೂನಿಯರ್ ಅಧಿಕಾರಿ ಜೊತೆ ಚೆಲ್ಲಾಟ ನ್ಯಾಯಾಧೀಶರಿಗೆ ಒಪ್ಪಿತ ನಡೆಯಲ್ಲ; ಸುಪ್ರೀಂ
ನವದೆಹಲಿ, ಫೆಬ್ರವರಿ 17: ನ್ಯಾಯಾಧೀಶ ಸ್ಥಾನದಲ್ಲಿದ್ದವರು ತಮ್ಮ ಕಿರಿಯ ಅಧಿಕಾರಿ ಜೊತೆ ಚೆಲ್ಲಾಟವಾಡುವುದು ಸ್ವೀಕಾರಾರ್ಹ ನಡೆಯಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿಕೆ ನೀಡಿದೆ.
ನ್ಯಾಯಾಧೀಶರೊಬ್ಬರ ಮೇಲೆ ಕಿರಿಯ ಅಧಿಕಾರಿ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದು, ನ್ಯಾಯಾಧೀಶರ ಮೇಲೆ ವಿಭಾಗೀಯ ತನಿಖೆಗೆ ಮಧ್ಯ ಪ್ರದೇಶ ಹೈಕೋರ್ಟ್ ಆದೇಶಿಸಿದೆ. ಈ ಆದೇಶದ ವಿರುದ್ಧ ನಿವೃತ್ತ ನ್ಯಾಯಾಧೀಶರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಮಂಗಳವಾರ ಈ ಅರ್ಜಿಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿತ್ತು.
ಹೈಕೋರ್ಟ್ ನ್ಯಾಯಾಧೀಶರಾಗಿ ಬಡ್ತಿಯಾದ ಸಂದರ್ಭ ಈ ಆರೋಪ ಕೇಳಿಬಂದಿದೆ ಎಂದು ನಿವೃತ್ತ ನ್ಯಾಯಾಧೀಶರು ಉಲ್ಲೇಖಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ, ವಿ ರಾಮಸುಬ್ರಹ್ಮಣಿಯನ್ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಪ್ ಚಾಟ್ ಗಳನ್ನು ಪರಿಶೀಲಿಸಿದ್ದು, ಈ ಆರೋಪ ಆಕ್ಷೇಪಾರ್ಹ ಎಂದು ತಿಳಿಸಿದ್ದಾರೆ.

"ನ್ಯಾಯಾಧೀಶರಾದವರು ಕಿರಿಯ ಅಧಿಕಾರಿಯೊಂದಿಗೆ ಹೀಗೆ ಚೆಲ್ಲಾಟವಾಡುವುದು ಸ್ವೀಕಾರಾರ್ಹ ನಡೆಯಲ್ಲ" ಎಂದು ಪೀಠ ಹೇಳಿದ್ದು, ಈ ನಡೆಯನ್ನು ಮನ್ನಿಸಿದ್ದೇ ಆದರೆ ನ್ಯಾಯಾಂಗದ ಕಾರ್ಯನಿರ್ವಹಣೆಯಲ್ಲಿ ಕೆಲಸದ ವಾತಾವರಣವು ಅನುಕೂಲಕರವಾಗಿರಲು ಸಾಧ್ಯವೇ ಇಲ್ಲ" ಎಂದು ತಿಳಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಪ್ ಚಾಟ್ಗಳನ್ನು ಪರಿಶೀಲಿಸಲಾಗಿದೆ. ಅವು ಈ ಆರೋಪವನ್ನು ಸಾಬೀತುಪಡಿಸುವಂತಿವೆ. ನಿವೃತ್ತ ನ್ಯಾಯಾಧೀಶರು ಹೈ ಕೋರ್ಟ್ ಆದೇಶದ ವಿರುದ್ಧದ ಅರ್ಜಿಯನ್ನು ಹಿಂಪಡೆದುಕೊಂಡು ತನಿಖೆ ಎದುರಿಸುವುದು ಒಳ್ಳೆಯದು ಎಂದು ಪೀಠ ಸಲಹೆ ನೀಡಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications