ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎನ್‌ಸಿಪಿ ಸೇರ್ಪಡೆಗೊಂಡ ಕಾಂಗ್ರೆಸ್ ಮಾಜಿ ನಾಯಕ ಪಿ.ಸಿ. ಚಾಕೋ

|
Google Oneindia Kannada News

ನವದೆಹಲಿ, ಮಾರ್ಚ್ 16: ಕಳೆದ ವಾರವಷ್ಟೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದ ಹಿರಿಯ ನಾಯಕ ಪಿ.ಸಿ ಚಾಕೋ ಮಂಗಳವಾರ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಸೇರ್ಪಡೆಯಾಗಿದ್ದಾರೆ.

"ಕಾಂಗ್ರೆಸ್‌ನಲ್ಲಿರುವುದು ಕಷ್ಟವೆನಿಸುತ್ತಿದೆ. ನಾನು ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತಿದ್ದೇನೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದೇನೆ. ಪಕ್ಷಕ್ಕಾಗಿ ಶ್ರಮ ಪಟ್ಟಿದ್ದೇನೆ. ಆದರೆ ಕೇರಳ ಕಾಂಗ್ರೆಸ್‌ ತಂಡದೊಂದಿಗೆ ಕೆಲಸ ಮಾಡುವುದು ಕಷ್ಟಕರವಾಗುತ್ತಿದೆ. ಪಕ್ಷದಲ್ಲಿ ಗುಂಪುಗಾರಿಕೆ ಹೆಚ್ಚಾಗಿದೆ" ಎಂದು ಹೇಳಿ ಕಳೆದ ವಾರ ರಾಜೀನಾಮೆ ನೀಡಿದ್ದರು.

ಪಂಚ ರಾಜ್ಯಗಳ ಚುನಾವಣೆಯ ಹೊತ್ತಿನಲ್ಲಿ ಕಾಂಗ್ರೆಸ್ಸಿಗೆ ಭಾರೀ ಆಘಾತಪಂಚ ರಾಜ್ಯಗಳ ಚುನಾವಣೆಯ ಹೊತ್ತಿನಲ್ಲಿ ಕಾಂಗ್ರೆಸ್ಸಿಗೆ ಭಾರೀ ಆಘಾತ

ಕೇರಳ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿಯೇ ಚಾಕೋ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ಕಣ್ಣು ಕೆಂಪಾಗಿಸಿತ್ತು.

Former Congress Leader PC Chacko Joins NCP

ಮಂಗಳವಾರ ಸಂಜೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಚಾಕೋ ಭೇಟಿ ಮಾಡಿದ್ದು, ತಾವು ಅಧಿಕೃತವಾಗಿ ಎನ್‌ಸಿಪಿ ಸೇರುತ್ತಿರುವುದಾಗಿ ಘೋಷಿಸಿದ್ದಾರೆ.

140 ಸದಸ್ಯ ಬಲದ ಕೇರಳ ವಿಧಾನಸಭೆಗೆ ಏಪ್ರಿಲ್ 6 ರಂದು ಚುನಾವಣೆ ನಡೆಯಲಿದೆ. ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

English summary
Senior leader PC Chacko, who resigned from Congress last week announced he is formally joining Sharad Pawar-led Nationalist Congress Party (NCP) on tuesday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X