Get Updates
Get notified of breaking news, exclusive insights, and must-see stories!

ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ನಿಧನ

ನವದೆಹಲಿ, ಜುಲೈ 20: ದೆಹಲಿಯ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್(81) ಅವರು ಶನಿವಾರ ಮಧ್ಯಾಹ್ನ ನಿಧನರಾಗಿದ್ದಾರೆ. ದೀರ್ಘಕಾಲದಿಂದ ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಸಂಸದೆ, ಮೂರು ಬಾರಿ ಸಿಎಂ, ಕೇರಳದ ಮಾಜಿ ರಾಜ್ಯಪಾಲೆಯಾಗಿದ್ದ ಶೀಲಾ ದೀಕ್ಷಿತ್ ಅವರನ್ನು ಮತ್ತೊಮ್ಮೆ ಸಕ್ರಿಯ ರಾಜಕೀಯಕ್ಕೆ ಕರೆ ತಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಿಸಲಾಗಿತ್ತು. ಆದರೆ, ಲೋಕಸಭೆ ಚುನಾವಣೆ 2019ರಲ್ಲಿ ಕಾಂಗ್ರೆಸ್ಸಿಗೆ ಬಲ ತುಂಬಲು ಯತ್ನಿಸಲಾಗಿತ್ತು. ಆದರೆ, ಆಮ್ ಆದ್ಮಿ ಪಕ್ಷದ ಜೊತೆಗಿನ ಮೈತ್ರಿ ಭಿನ್ನಾಭಿಪ್ರಾಯದಿಂದ ದೆಹಲಿಯಲ್ಲಿ ಕಾಂಗ್ರೆಸ್ ಎಲ್ಲಾ 7 ಕ್ಷೇತ್ರಗಳಲ್ಲಿ ಸೋಲು ಅನುಭವಿಸಿತ್ತು.

Former Delhi Chief Minister Sheila Dikshit passes away

ಶೀಲಾ ದೀಕ್ಷಿತ್ ಅವರು 1984 ಮತ್ತು 1989 ಅವಧಿಯಲ್ಲಿ ಉತ್ತರಪ್ರದೇಶದ ಕನೌಜ್ ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ನಂತರ 1998 ರಿಂದ 2013ರವರೆಗೆ ಮೂರು ಬಾರಿ ದೆಹಲಿ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು. ಆದರೆ, ವಿಧಾನಸಭೆ ಚುನಾವಣೆಯಲ್ಲಿ ಶೀಲಾ ದೀಕ್ಷಿತ್ ಅವರು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ವಿರುದ್ಧ ಭಾರಿ ಸೋಲು ಅನುಭವಿಸಿದ್ದರು.

ಶೀಲಾ ದೀಕ್ಷಿತ್ ಅವರ ನಿಧನಕ್ಕೆ ಪ್ರಧಾನಿ ಮೋದಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಗಣ್ಯಾತಿಗಣ್ಯರು ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+