ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐಸಿಯುದಲ್ಲಿ ಅರುಣ್ ಜೇಟ್ಲಿ: ಆಸ್ಪತ್ರೆಗೆ ಮೋದಿ, ಶಾ ಭೇಟಿ

|
Google Oneindia Kannada News

ನವದೆಹಲಿ, ಆಗಸ್ಟ್ 9: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಕೇಂದ್ರ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ಶುಕ್ರವಾರ ಬೆಳಿಗ್ಗೆ ದಾಖಲು ಮಾಡಲಾಗಿದೆ.

ಅವರನ್ನು ಆಸ್ಪತ್ರೆಯ ಕಾರ್ಡಿಯೋಥೊರಾಸಿಕ್ ಮತ್ತು ನ್ಯೂರೋಸೈನ್ಸ್ ಕೇಂದ್ರದಲ್ಲಿ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ 'ದಿ ಹಿಂದೂ' ವರದಿ ಮಾಡಿದೆ.

ಹೊಸ ಸರ್ಕಾರ ರಚನೆಗೂ ಮುನ್ನವೇ ಬಿಜೆಪಿಗೆ ಆಘಾತಕಾರಿ ಸುದ್ದಿ ಹೊಸ ಸರ್ಕಾರ ರಚನೆಗೂ ಮುನ್ನವೇ ಬಿಜೆಪಿಗೆ ಆಘಾತಕಾರಿ ಸುದ್ದಿ

ರಾಜ್ಯಸಭೆ ಸದಸ್ಯರಾಗಿರುವ ಅರುಣ್ ಜೇಟ್ಲಿ, ನಿತ್ರಾಣ ಮತ್ತು ಆಯಾಸದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ವೈದ್ಯಕೀಯ ತಪಾಸಣೆಗಾಗಿ ದಾಖಲು ಮಾಡಲಾಗಿದೆ. ಅವರನ್ನು ಐಸಿಯುದಲ್ಲಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Former Finance Minister Arun Jaitley Admitted To AIIMS

66 ವರ್ಷದ ಅರುಣ್ ಜೇಟ್ಲಿ ಅವರಿಗೆ ಎಂಡೋಕ್ರಿನೋಲಾಜಿಸ್ಟ್, ನೆಪ್ರೋಲಾಜಿಸ್ಟ್ ಮತ್ತು ಕಾರ್ಡಿಯಾಲಜಿಸ್ಟ್‌ಗಳ ತಂಡವು ಚಿಕಿತ್ಸೆ ನೀಡುತ್ತಿದೆ. ಆರೋಗ್ಯ ಸಚಿವ ಹರ್ಷವರ್ಧನ್ ಅವರು ಸಂಜೆ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರೂ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿದರು.

ಮಂತ್ರಿಸ್ಥಾನ ತ್ಯಾಗಕ್ಕೆ ಸಿದ್ಧರಾದ ಅರುಣ್ ಜೇಟ್ಲಿಯಿಂದ ಪ್ರಧಾನಿಗೆ ಪತ್ರ ಮಂತ್ರಿಸ್ಥಾನ ತ್ಯಾಗಕ್ಕೆ ಸಿದ್ಧರಾದ ಅರುಣ್ ಜೇಟ್ಲಿಯಿಂದ ಪ್ರಧಾನಿಗೆ ಪತ್ರ

ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಅರುಣ್ ಜೇಟ್ಲಿ ಅವರು ಕಳೆದ ವರ್ಷ ಮೂರು ತಿಂಗಳ ಕಾಲ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅನಾರೋಗ್ಯದ ಕಾರಣ ಅವರು ಮೋದಿ ನೇತೃತ್ವದ ಸರ್ಕಾರದ ಎರಡನೆಯ ಅವಧಿಯಲ್ಲಿ ಯಾವುದೇ ಸಚಿವ ಸ್ಥಾನದ ಜವಾಬ್ದಾರಿ ತೆಗೆದುಕೊಂಡಿರಲಿಲ್ಲ.

English summary
Former Union finance minister Arun Jaitley has been admitted to AIIMS on Friday morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X