ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ: ಏಮ್ಸ್ ಆಸ್ಪತ್ರೆಯಿಂದ ಮಾಹಿತಿ

|
Google Oneindia Kannada News

ದೆಹಲಿ, ಮೇ 11: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಅನಾರೋಗ್ಯ ಕಾರಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ಸೋಮವಾರ ಬೆಳಿಗ್ಗೆ ತಿಳಿಸಿವೆ.

ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಭಾನುವಾರ ಸಂಜೆ 87 ವರ್ಷದ ಮನಮೋಹನ್ ಸಿಂಗ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ವಿಶೇಷ ವಾರ್ಡ್ನಲ್ಲಿ ಚಿಕಿತ್ಸೆ ನೀಡುತ್ತಿರುವ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.

ಭಾನುವಾರ ಸಂಜೆ ಔಷಧಿ ನೀಡಿದ ಬಳಿಕ ಸಿಂಗ್ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ. ನಂತರ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. 2009ರಲ್ಲಿ ಮನಮೋಹನ್ ಸಿಂಗ್ ಅವರಿಗೆ ಹೃದಯದ ಬೈಪಾಸ್ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.

Former Indian Prime Minister Manmohan Singh Is Stable

ಅಂದ್ಹಾಗೆ, ಕಳೆದ ವಾರ ಕಾಂಗ್ರೆಸ್‌ ಆಡಳಿತ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಭೆ ನಡೆಸಿದ ವೇಳೆ, ಮನಮೋಹನ್ ಸಿಂಗ್ ಕೂಡ ಭಾಗಿಯಾಗಿದ್ದರು.

ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲುಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು

2004ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ದೇಶದ ಪ್ರಧಾನಮಂತ್ರಿಯಾದ ಡಾ.ಮನಮೋಹನ್ ಸಿಂಗ್, 10 ವರ್ಷಗಳ 2014ರವರೆಗೂ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಅದಕ್ಕೂ ಮೊದಲು ಕೇಂದ್ರದ ವಿತ್ತ ಸಚಿವರಾಗಿ ಅವರ ಕೊಡುಗೆ ಗಣನೀಯ.

English summary
Former PM Dr. Man mohan singh has been admitted to AIIMS in Delhi after complaining about chest pain. now He is under observation in the cardio-thoracic ward.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X