ರಾಹುಲ್ ಗಾಂಧಿ ವಿರುದ್ಧ ಮಾಜಿ ಸಂಸದೆ ರಮ್ಯಾ ಕಿಡಿ!
ಬೆಂಗಳೂರು, ಆ. 24: ಆ ಒಂದು ಮಾತಿನಿಂದ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದ್ದಾರೆ. ಇದೀಗ ನಾನು ಹಾಗೆ ಮಾತನಾಡಿಲ್ಲ ಎಂದು ಸ್ಪಷ್ಟನೆಯನ್ನು ರಾಹುಲ್ ಗಾಂಧಿ ಕೊಟ್ಟಿದ್ದರೂ ಆಗಲೇ ಸಾಕಷ್ಟು ಬೆಳವಣಿಗೆಗಳು ಪಕ್ಷದಲ್ಲಿ ಆಗಿವೆ. ಒಂದು ಕಾಲದ ಅತ್ಯಂತ ಬೆಂಬಲಿಗರಾಗಿದ್ದವರೂ ರಾಹುಲ್ ಮಾತಿಗೆ ಕಿಡಿಕಿಡಿಯಾಗಿದ್ದಾರೆ. ಮಾಜಿ ಸಂಸದೆ ರಮ್ಯಾ ಅವರು ಕೂಡ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹಿರಿಯ ನಾಯಕರ ವಿರುದ್ಧ ಹೇಳಿಕೆ ಕೊಡುವ ಮೂಲಕ ತಪ್ಪು ಮಾಡಿದ್ದಾರೆಂದು ಮಾಜಿ ಸಂಸದೆ ರಮ್ಯಾ ಟ್ವೀಟ್ ಮಾಡಿದ್ದಾರೆ. ಬಿಜೆಪಿ ಜೊತೆಗೆ ಕಾಂಗ್ರೆಸ್ ಹಿರಿಯ ನಾಯಕರು ಸೇರಿಕೊಂಡಿದ್ದಾರೆ ಎಂದು ಹೇಳಿಕೆ ಕೊಟ್ಟಿರುವುದು ಸರಿಯಲ್ಲ. ಜೊತೆಗೆ ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಬರೆದಿರುವ ಪತ್ರವನ್ನು ಮಾಧ್ಯಮಗಳಿಗೆ ಸಿಗುವಂತೆ ಮಾಡಿರುವುದು ಕೂಡ ಸರಿಯಲ್ಲ ಎಂದು ರಮ್ಯಾ ಟ್ವೀಟ್‌ನಲ್ಲಿ ಹೇಳಿಕೊಂಡಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ಪ್ರತಿಕ್ಷಣದ ಚರ್ಚೆ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವುದು ಆಶ್ಚರ್ಯ ಮೂಡಿಸಿದೆ ಎಂದೂ ಅವರು ಟ್ವೀಟ್‌ನಲ್ಲಿ ಪ್ರಸ್ತಾಪ ಮಾಡಿದ್ದಾರೆ.













Click it and Unblock the Notifications