• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ಕೋವಿಡ್ ಪಾಸಿಟಿವ್

|

ನವದೆಹಲಿ, ಏಪ್ರಿಲ್ 19: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಲ್ಲಿ ಕೋವಿಡ್ ಪಾಸಿಟಿವ್ ಇರುವುದು ಸೋಮವಾರ ಪತ್ತೆಯಾಗಿದೆ. ಮನಮೋಹನ್ ಸಿಂಗ್ ಅವರಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನಮೋಹನ್ ಸಿಂಗ್ ಅವರಲ್ಲಿ ವೈರಸ್‌ನ ಪ್ರಭಾವ ಯಾವ ಮಟ್ಟಕ್ಕಿದೆ ಮತ್ತು ಅವರ ಆರೋಗ್ಯ ಸ್ಥಿತಿ ಹೇಗಿದೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ.

ಕೊರೊನಾ ನಿಯಂತ್ರಣಕ್ಕೆ ಪಂಚಸೂತ್ರ; ಪ್ರಧಾನಿಗೆ ಮನಮೋಹನ್ ಸಿಂಗ್ ಪತ್ರ!

ಇದಕ್ಕೂ ಮುನ್ನ ಮನಮೋಹನ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲಸಿಕೆ ಕಾರ್ಯಕ್ರಮ, ಔಷಧಗಳ ಪೂರೈಕೆಯ ಹೆಚ್ಚಳ ಸೇರಿದಂತೆ ಕೋವಿಡ್ ಬಿಕ್ಕಟ್ಟಿನ ಹೋರಾಟ ಎದುರಿಸಲು ಐದು ಪ್ರಮುಖ ಕ್ರಮಗಳ ಸಲಹೆ ನೀಡಿ ಪತ್ರ ಬರೆದಿದ್ದರು.

'ಭಾರತದಲ್ಲಿ ಮುಂದಿನ ಆರು ತಿಂಗಳ ಅವಧಿಯಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಮೇಲೆ ಹೆಚ್ಚಿನ ನಿಗಾ ವಹಿಸಬೇಕಿದೆ. ಪಾರದರ್ಶಕ ವಿಧಾನದಲ್ಲಿ ಕೊವಿಡ್-19 ಲಸಿಕೆ ವಿತರಣೆ ಮತ್ತು ಸರಬರಾಜು ಪ್ರಕ್ರಿಯೆಯನ್ನು ನೋಡಿಕೊಳ್ಳುವಂತೆ ಸಲಹೆ ನೀಡಿದ್ದರು.

ಮನ್ ಮೋಹನ್ ಸಿಂಗ್
Know all about
ಮನ್ ಮೋಹನ್ ಸಿಂಗ್

ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ 45 ವರ್ಷಕ್ಕಿಂತ ಕಡಿಮೆ ವಯಸ್ಸಿದ್ದರೂ ಸಹ ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ನೀಡುವಲ್ಲಿ ಆದ್ಯತೆ ನೀಡಬೇಕು. ಕೊರೊನಾವೈರಸ್ ಲಸಿಕೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಕಂಪನಿಗಳಿಗೆ ಅನುದಾನವನ್ನು ನೀಡಬೇಕು. ಇದರ ಜೊತೆಗೆ ಲಸಿಕೆ ಉತ್ಪಾದಿಸುವ ಕಂಪನಿಗಳಿಗೆ ರಿಯಾಯಿತಿ ಹಾಗೂ ಪರವಾನಗಿ ಹಂಚಿಕೆ ಮಾಡುವಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪತ್ರದ ಮೂಲಕ ಸಲಹೆ ನೀಡಿದ್ದರು.

English summary
Former PM Dr Manmohan Singh tested positive for Covid-19, admitted to AIIMS.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X