ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಚೇತರಿಕೆ ಇಲ್ಲ: ಆಸ್ಪತ್ರೆ
ನವದೆಹಲಿ, ಆಗಸ್ಟ್ 15: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಇಲ್ಲ ಎಂದು ಸೇನಾ ಆಸ್ಪತ್ರೆ ತಿಳಿಸಿದೆ.
Recommended Video
Independence Day Midst Corona, Modi flag hoisting scenes from Red fort | Oneindia Kannada
ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಸೋಮವಾರ ಅವರು ಮೆದುಳಿನ ಶಸ್ತ್ರ ಚಿಕಿತ್ಸೆಗೂ ಒಳಪಡಿಸಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಹೀಗಾಗಿ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ (ವೆಂಟಿಲೇಟರ್) ಅಳವಡಿಸಿ ಚಿಕಿತ್ಸೆ ಮುಂದುವರೆಸಲಾಗಿದೆ. ನುರಿತ ವೈದ್ಯರ ತಂಡ ಪ್ರಣಬ್ ಮುಖರ್ಜಿ ಅವರ ಚಿಕಿತ್ಸೆ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಎರಡು ದಿನಗಳ ಹಿಂದೆ ಪ್ರಣಬ್ ಮುಖರ್ಜಿ ಸಾವನ್ನಪ್ಪಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಬಳಿಕ ಅವರ ಪುತ್ರ ಸ್ಪಷ್ಟನೆ ನೀಡಿ ನನ್ನ ತಂದೆ ಜೀವಂತವಾಗಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಹೇಳಿದ್ದರು.
ಕಳೆದ ಆಗಸ್ಚ್ 10ರಂದು ಪ್ರಣಬ್ ಮುಖರ್ಜಿ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿತ್ತು












Click it and Unblock the Notifications