ದೆಹಲಿ: 79 ಸ್ಪರ್ಧಿಗಳ ಪೈಕಿ ಗೆದ್ದವರು ನಾಲ್ವರು ಮಾತ್ರ!

ನವದೆಹಲಿ, ಫೆಬ್ರವರಿ 11: ದೆಹಲಿ ವಿಧಾನಸಭೆ ಚುನಾವಣೆ 2020 ಫಲಿತಾಂಶದಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿದ್ದಾರೆ. ಪ್ರಾದೇಶಿಕ ಪಕ್ಷ ಎಎಪಿ ಎದುರು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಮಂಕಾಗಿವೆ. ಈ ಬಾರಿ 79 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದರು ಈ ಪೈಕಿ 4 ಅಭ್ಯರ್ಥಿಗಳು ಮಾತ್ರ ಗೆಲುವು ಸಾಧಿಸಿದ್ದಾರೆ.

ಈ ನಡುವೆ ಸತತ ಎರಡನೇ ಬಾರಿಗೆ ಬಿಜೆಪಿ ವಿರೋಧ ಪಕ್ಷ ಸ್ಥಾನವೂ ಸಿಗದಂಥ ಪರಿಸ್ಥಿತಿಗೆ ದೂಡಲ್ಪಟ್ಟಿದೆ. ಇನ್ನು ದೇಶದ ಪುರಾತನ ಪಕ್ಷ ಕಾಂಗ್ರೆಸ್ ಪರಿಸ್ಥಿತಿ ಶೋಚನೀಯವಾಗಿದ್ದು, ಹಲವಾರು ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದ್ದಲ್ಲದೆ, ಖಾತೆಯನ್ನು ತೆರೆಯುವಲ್ಲಿ ವಿಫಲವಾಗಿದೆ.

ಸತತ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಅರವಿಂದ್ ಕೇಜ್ರಿವಾಲ್ ಸಜ್ಜಾಗುತ್ತಿದ್ದಾರೆ.

Four Female candidates win Delhi Assembly Elections 2020

ದೆಹಲಿಯ 70 ಕ್ಷೇತ್ರಗಳಲ್ಲಿ 672 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದು, ಸುಮಾರ 1.4 ಕೋಟಿ ಮತಗಳು ಅವರ ಹಣೆಬರಹ ನಿರ್ಧರಿಸಲಿವೆ. 70 ಕ್ಷೇತ್ರಗಳ 2,688 ಮತಗಟ್ಟೆಗಳಲ್ಲಿ ಚುನಾವಣೆ ನಡೆಸಲಾಗಿತ್ತು.

ಗೆದ್ದ ಮಹಿಳಾ ಸ್ಪರ್ಧಿಗಳು:
ಆಮ್ ಆದ್ಮಿ ಪಕ್ಷದ ಅತಿಷಿ, ಪ್ರಮೀಳಾ ಟೋಕಸ್, ಪ್ರೀತಿ ತೋಮರ್ ಹಾಗೂ ರಾಜ್ ಕುಮಾರಿ ದಿಲ್ಲೋನ್ ಗೆಲುವು ಸಾಧಿಸಿದ ಮಹಿಳಾ ಸ್ಪರ್ಧಿಗಳಾಗಿದ್ದಾರೆ.

ಅತಿಷಿ ಅವರು ಕಲ್ಕಾಜಿ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನ ಶಿವಾನಿ ಛೋಪ್ರಾರನ್ನು 11,000ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಪ್ರಮೀಳಾ ಅವರು ಆರ್ ಕೆ ಪುರಂ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಎಎಪಿ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷವು 24 ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ.

2015ರಲ್ಲಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನಗಳನ್ನು ಆಮ್ ಆದ್ಮಿ ಪಕ್ಷ ಗೆದ್ದುಕೊಂಡಿತ್ತು. ಬಿಜೆಪಿ ಮೂರು ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಆದರೆ 2017ರಲ್ಲಿ ಮುನ್ಸಿಪಾಲ್ ಕಾರ್ಪೊರೇಷನ್ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಮತ್ತೆ ಲಯಕ್ಕೆ ಮರಳಿತ್ತು. ಆದರೆ, ಈ ಬಾರಿ ಕಳೆದ ಬಾರಿಗಿಂತ ಉತ್ತಮ ಎನ್ನಬಹುದಾದರೂ ಎರಡಂಕಿ ದಾಟುವುದು ಅನುಮಾನ. ಮ್ಯಾಜಿಕ್ ನಂಬರ್ 36 ದಾಟಿರುವ ಎಎಪಿ ಅಧಿಕಾರ ಸ್ಥಾಪಿಸುವತ್ತ ದಾಪುಗಾಲಿರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+