ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಮ್ಲಜನಕ ಅಭಾವದಿಂದ ಹರಿಯಾಣದ ಆಸ್ಪತ್ರೆಯಲ್ಲಿ ನಾಲ್ವರು ಸೋಂಕಿತರ ಸಾವು

|
Google Oneindia Kannada News

ಹರಿಯಾಣ, ಏಪ್ರಿಲ್ 26: ಹರಿಯಾಣದ ಖಾಸಗಿ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ ನಾಲ್ವರು ಕೊರೊನಾ ಸೋಂಕಿತರು ಮೃತಪಟ್ಟಿರುವ ಘಟನೆ ನಡೆದಿದೆ.

ಆಸ್ಪತ್ರೆಯಲ್ಲಿ ಆಮ್ಲಜನಕದ ಅಭಾವದಿಂದಾಗಿ ತೀವ್ರ ನಿಗಾ ಘಟಕದಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ವಾರ್ಡ್‌ನಲ್ಲಿದ್ದ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಆಮ್ಲಜನಕದ ಅಭಾವವಿತ್ತು. ಆಮ್ಲಜನಕ ಪೂರೈಕೆಯಾಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಪ್ರಯೋಜನವಾಗಿಲ್ಲ ಎಂದು ಆಸ್ಪತ್ರೆ ವ್ಯವಸ್ಥಾಪಕರು ತಿಳಿಸಿದ್ದಾರೆ.

Four Patients Dies Due To Oxygen Shortage At Haryana Hospital

ಆಸ್ಪತ್ರೆಯಲ್ಲಿ 114 ಮಂದಿ ಕೊರೊನಾ ರೋಗಿಗಳಿದ್ದು, ದಿನನಿತ್ಯ 300 ವೈದ್ಯಕೀಯ ಆಮ್ಲಜನಕ ಸಿಲಿಂಡರ್‌ಗಳನ್ನು ಬಳಕೆ ಮಾಡಲಾಗುತ್ತಿದೆ.

ಆಮ್ಲಜನಕ ಕೊರತೆಯಿಂದ ರೋಗಿಗಳು ಸಾವನ್ನಪ್ಪುತ್ತಿದ್ದರೂ ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿ ರೋಗಿಗಳ ಸಂಬಂಧಿಕರು ಆಸ್ಪತ್ರೆ ಹೊರಗೆ ಪ್ರತಿಭಟನೆ ನಡೆಸಿದರು. ಘಟನೆ ಕುರಿತು ಜಿಲ್ಲಾಡಳಿತ ತನಿಖೆ ಕೈಗೊಂಡಿದೆ.

ರಾಜ್ಯ ಪೊಲೀಸ್ ವರಿಷ್ಠರ ಕಚೇರಿಯಲ್ಲಿ ಕೊರೊನಾಗೆ ಮೂರನೇ ಬಲಿ!ರಾಜ್ಯ ಪೊಲೀಸ್ ವರಿಷ್ಠರ ಕಚೇರಿಯಲ್ಲಿ ಕೊರೊನಾಗೆ ಮೂರನೇ ಬಲಿ!

ಆಸ್ಪತ್ರೆಗೆ ನಿರಂತರವಾಗಿ ಆಮ್ಲಜನಕ ಪೂರೈಸಲಾಗುತ್ತಿತ್ತು. ಈ ಘಟನೆ ಕುರಿತು ತನಿಖೆ ಕೈಗೊಳ್ಳಲಾಗಿದೆ ಎಂದು ರೆವಾರಿ ಜಿಲ್ಲಾಧಿಕಾರಿ ನರ್ನೌಲ್ ಅಜಯ್ ತಿಳಿಸಿದ್ದಾರೆ.

ವೈದ್ಯಕೀಯ ಆಮ್ಲಜನಕಕ್ಕೆ ಬೇಡಿಕೆ ಹೆಚ್ಚಾದಂತೆ ಹರಿಯಾಣ ಸರ್ಕಾರ ಎಲ್ಲಾ ಆಮ್ಲಜನಕ ಉತ್ಪಾದಕರು ಹಾಗೂ ಸರಬರಾಜು ಮಾಡುವವರಿಗೆ, ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆ ಮಾಡುವುದನ್ನು ನಿಷೇಧಿಸಿದೆ.

English summary
Four patients in private hospital dies due to oxygen shortage at Haryana hospital
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X