ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಫೇಲ್‌ ಜೆಟ್‌ಗಳನ್ನು ನಿಗದಿತ ಅವಧಿಯಲ್ಲಿ ಪೂರೈಸಲಿದೆ ಫ್ರಾನ್ಸ್‌: ರಾಜನಾಥ್ ಸಿಂಗ್

|
Google Oneindia Kannada News

ಕೋವಿಡ್-19 ಸಾಂಕ್ರಾಮಿಕ ರೋಗದ ಸವಾಲುಗಳ ನಡುವೆಯೂ ಭಾರತಕ್ಕೆ ರಫೇಲ್ ಫೈಟರ್ ಜೆಟ್‌ಗಳನ್ನು ನಿಗದಿತ ಅವಧಿಯಲ್ಲಿ ಪೂರೈಸುವುದಾಗಿ ಫ್ರಾನ್ಸ್ ದೃಢಪಡಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಹೇಳಿದ್ದಾರೆ.

Recommended Video

ಸತ್ತ ನವಿಲಿನ‌ ಮೇಲೆ ರಾಷ್ಟ್ರೀಯ ಬಾವುಟ ಹೊದಿಸಿ ಗೌರವ ಸೂಚಿಸಿದ ಪೊಲೀಸರು | Oneindia Kannada

ಫ್ರಾನ್ಸ್‌ ಸಶಸ್ತ್ರ ಪಡೆಗಳ ಸಚಿವರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ನಂತರ, ಯುದ್ಧ ವಿಮಾನಗಳನ್ನು ಪೂರೈಸುವ ಒಪ್ಪಂದಕ್ಕೆ ಫ್ರಾನ್ಸ್‌ ಬದ್ಧವಾಗಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.

'ಫ್ರಾನ್ಸ್‌ ಸಚಿವೆ ಫ್ಲಾರೆನ್ಸ್‌ ಪಾರ್ಲಿ ಜೊತೆ ಇಂದು ದೂರವಾಣಿ ಮೂಲಕ ಮಾತುಕತೆ ನಡೆಸಿದೆ. ಕೊರೊನಾ ಪರಿಸ್ಥಿತಿ, ಪ್ರಾದೇಶಿಕ ಭದ್ರತೆ, ಭಾರತ-ಫ್ರಾನ್ಸ್‌ನಡುವಣ ದ್ವಿಪಕ್ಷೀಯ ಸಹಕಾರ ವೃದ್ಧಿಸುವ ಬಗ್ಗೆ ಮಾತುಕತೆ ನಡೆಸಿದ್ದೇನೆ ' ಎಂದು ರಾಜನಾಥ್‌ ಸಿಂಗ್ ಟ್ವೀಟ್ ಮಾಡಿದ್ದಾರೆ.

France Committed To Timely Delivery Of Rafale Jets Said Rajnath Singh

ಈ ಹಿಂದಿನ ಒಪ್ಪಂದದ ಪ್ರಕಾರ ನಾಲ್ಕು ರಫೇಲ್ ಯುದ್ಧ ವಿಮಾನಗಳು ಜುಲೈ ಅಂತ್ಯದ ವೇಳೆಗೆ ಭಾರತಕ್ಕೆ ಬರಬೇಕಿವೆ. ಮೇ ಅಂತ್ಯದೊಳಗೆ ಫ್ರಾನ್ಸ್‌ ಯುದ್ಧವಿಮಾನಗಳನ್ನು ಭಾರತಕ್ಕೆ ಕಳುಹಿಸಿಕೊಡಬೇಕೆಂದು ಈ ಹಿಂದೆ ನಿಗದಿಪಡಿಸಲಾಗಿತ್ತು. ಆದರೆ ಕೊರೊನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಉಭಯ ರಾಷ್ಟ್ರಗಳು ಎರಡು ತಿಂಗಳ ಮಟ್ಟಿಗೆ ಮುಂದೂಡಿದ್ದವು.

ಸುಮಾರು 36,000 ಕೋಟಿ ವೆಚ್ಚದಲ್ಲಿ 36 ರಫೇಲ್ ಯುದ್ಧ ವಿಮಾನಗಳನ್ನು ಖರೀದಿಸಲು ಭಾರತ 2016 ಸೆಪ್ಟೆಂಬರ್‌ನಲ್ಲಿ ಫ್ರಾನ್ಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿತ್ತು.

English summary
France has confirmed its commitment to ensuring timely delivery of Rafale fighter jets to India said Defence Minister Rajnath Singh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X