ಇನ್ಮುಂದೆ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ

ನವದೆಹಲಿ, ಅಕ್ಟೋಬರ್ 28: ನಾಳೆಯಿಂದ ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ಸೋಮವಾರ ಈ ಕುರಿತು ಮಾತನಾಡಿರುವ ಅರವಿಂದ್ ಕೇಜ್ರಿವಾಲ್ , ಭಾಯ್ದೂಜ್ ಹಬ್ಬದ ಪ್ರಯುಕ್ತ ಮಂಗಳವಾರ ಮಹಿಳೆಯರಿಗೆ ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರ ಭದ್ರತೆಗಾಗಿ 13 ಸಾವಿರ ಬಸ್‌ ಮಾರ್ಷಲ್‌ಗಳನ್ನು ನೇಮಿಸಲಾಗಿದೆ. ಈ ಹಿಂದೆಯೇ ಅರವಿಂದ್ ಕೇಜ್ರಿವಾಲ್ ಅವರು ಮಹಿಳೆಯರಿಗೆ ಉಚಿತ ಬಸ್‌ ಪ್ರಾಣ ಕಲ್ಪಿಸುವ ಕುರಿತು ಭರವಸೆ ನೀಡಿದ್ದರು. ಆಗಸ್ಟ್ 29ರಂದು ದೆಹಲಿ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮತಿಯೂ ದೊರೆತಿತ್ತು.

Free Bus Service For Women In Delhi

ಸಾರಿಗೆ ಇಲಾಖೆಗೆ 479 ಕೋಟಿ ರೂ ನೀಡಲು ಸಂಪುಟ ಒಪ್ಪಿಗೆ ನೀಡಿತ್ತು. ದೆಹಲಿ ಸಂಪುಟವು ಅಕ್ಟೋಬರ್29ರಿಂದ ದೆಹಲಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಒಪ್ಪಿಗೆ ಸೂಚಿಸಿದೆ.

ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದು ಅರವಿಂದ್ ಕೇಜ್ರಿವಾಲ್ ಈ ನೂತನ ಯೋಜನೆ ಬಗ್ಗೆ ಮಾಹಿತಿ ನೀಡಿದ್ದರು. ಕೇವಲ ಬಸ್‌ಗಳಷ್ಟೇ ಅಲ್ಲದೆ ಮೆಟ್ರೋದಲ್ಲೂ ಕೂಡ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+