ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶದ ಪ್ರತಿಯೊಬ್ಬರಿಗೂ ಉಚಿತ ಕೊರೊನಾ ಲಸಿಕೆ: ಕೇಂದ್ರ ಸಚಿವ ಪ್ರತಾಪ್ ಸಾರಂಗಿ

|
Google Oneindia Kannada News

ನವದೆಹಲಿ, ಅಕ್ಟೋಬರ್ 26: ದೇಶದ ಎಲ್ಲಾ ಜನರಿಗೂ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಹೇಳಿದ್ದಾರೆ.

ಕಳೆದ ವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಹಾರದ ಜನತೆಗೆ ಉಚಿತ ಕೋವಿಡ್ ಲಸಿಕೆ ನೀಡುವುದಾಗಿ ಹೇಳಿದ್ದರು. ಇದು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಕಣ್ಣು ಕೆಂಪಾಗಿಸಿತ್ತು.

ಕೊವ್ಯಾಕ್ಸಿನ್ ಲಸಿಕೆ: ಮೂರನೇ ಹಂತದ ಮಾನವ ಪ್ರಯೋಗ ಆರಂಭಕೊವ್ಯಾಕ್ಸಿನ್ ಲಸಿಕೆ: ಮೂರನೇ ಹಂತದ ಮಾನವ ಪ್ರಯೋಗ ಆರಂಭ

ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರ ಕೋವಿಡ್ ಲಸಿಕೆ ವಿಚಾರವನ್ನು ರಾಜಕೀಯ ಲಾಭಕ್ಕೆ ಬಳಸುತ್ತಿದೆ ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಇದರ ಬೆನ್ನಲ್ಲೇ ತಮಿಳುನಾಡು ಸೇರಿ ಕೆಲವು ರಾಜ್ಯಗಳು ತಾವು ಉಚಿತ ಲಸಿಕೆ ಹಂಚುವುದಾಗಿ ಘೋಷಣೆ ಮಾಡಿದ್ದವು.

 Free Coronavirus Vaccine For Everyone In The Country: Union Minister Pratap Sarangi

ದೇಶದ ಪ್ರತಿ ವ್ಯಕ್ತಿಗೆ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ದೇಶದಲ್ಲಿ ಪ್ರತಿಯೊಬ್ಬರಿಗೆ ಲಸಿಕೆ ನೀಡಲು ಅಂದಾಜು 500 ರೂ.ಗಳನ್ನು ಖರ್ಚು ಮಾಡಲಾಗುವುದು ಎಂದು ಸಚಿವ ಪ್ರತಾಪ್ ಸಾರಂಗಿ ಹೇಳಿದ್ದಾರೆ.

ದೇಶದ ಎಲ್ಲಾ ಜನರಿಗೆ ಉಚಿತ ಲಸಿಕೆಗಳನ್ನು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಪ್ರತಿ ವ್ಯಕ್ತಿಗೆ ಲಸಿಕೆ ಹಾಕಲು ಅಂದಾಜು 500 ರೂ.ಗಳನ್ನು ಖರ್ಚು ಮಾಡಲಾಗುವುದು ಎಂದು ಬಾಲಂಗೋರ್ ನಲ್ಲಿ ನವೆಂಬರ್ 3ರ ವಿಧಾನಸಭಾ ಉಪ ಚುನಾವಣೆಯ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಾರಂಗಿ ಸುದ್ದಿಗಾರರಿಗೆ ತಿಳಿಸಿದರು.

Recommended Video

Corona ಓಡಿಸೋ ಸಮಯ ದೂರ ಇಲ್ಲಾ | Corona Vaccine | Oneindia Kannada

ತಮಿಳುನಾಡು, ಮಧ್ಯಪ್ರದೇಶ, ಅಸ್ಸಾಂ ಮತ್ತು ಪುದುಚೇರಿ ಸರ್ಕಾರಗಳು ಈಗಾಗಲೇ ತಮ್ಮ ರಾಜ್ಯಗಳ ಜನರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡುವುದಾಗಿ ಘೋಷಿಸಿದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೇಶದಾದ್ಯಂತ ಎಲ್ಲಾ ನಾಗರಿಕರಿಗೆ ಉಚಿತ ಲಸಿಕೆ ನೀಡುವಂತೆ ಒತ್ತಾಯಿಸಿದ್ದರು.

English summary
Union minister Pratap Sarangi said the coronavirus vaccine would be provided free to all the people of the country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X