ನವದೆಹಲಿ: ವಾರದಲ್ಲಿ ನಾಲ್ಕು ದಿನ ಕೊವಿಡ್-19 ಲಸಿಕೆ ವಿತರಣೆ

ನವದೆಹಲಿ, ಜನವರಿ.14: ಕೊರೊನಾವೈರಸ್ ಸೋಂಕಿನ ಲಸಿಕೆ ವಿತರಣೆ ಅಭಿಯಾನ ಆರಂಭಕ್ಕೆ ಇನ್ನೆರಡು ದಿನಗಳಷ್ಟೇ ಬಾಕಿ ಉಳಿದಿದೆ. ಜನವರಿ.16ರಿಂದ ದೇಶಾದ್ಯಂತ ಕೊವಿಡ್-19 ಲಸಿಕೆ ವಿತರಣೆ ಕಾರ್ಯ ಆರಂಭವಾಗಲಿದ್ದು, ನವದೆಹಲಿಯಲ್ಲಿ ಈಗಾಗಲೇ 81 ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಕಳುಹಿಸಿರುವ 2,74,000 ಡೋಸ್ ಕೊರೊನಾವೈರಸ್ ಲಸಿಕೆ ತಲುಪಿದೆ. 1,20,000 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಹಂತದಲ್ಲಿ ಉಚಿತವಾಗಿ ಕೊವಿಡ್-19 ಲಸಿಕೆಯನ್ನು ನೀಡಲಾಗುತ್ತದೆ.

ದೆಹಲಿಯಲ್ಲಿ ಗುರುತಿಸಿರುವ 81 ಕೊವಿಡ್-19 ಲಸಿಕೆ ಕೇಂದ್ರಗಳಲ್ಲಿ ಪ್ರತಿನಿತ್ಯ ಕನಿಷ್ಠ 100 ಮಂದಿಗೆ ಲಸಿಕೆಯನ್ನು ನೀಡಲಾಗುತ್ತದೆ. ಒಂದು ವಾರದಲ್ಲಿ ನಾಲ್ಕು ದಿನ ಅಂದರೆ ಸೋಮವಾರ, ಮಂಗಳವಾರ, ಗುರುವಾರ ಮತ್ತು ಶನಿವಾರ ಲಸಿಕೆಯನ್ನು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

Free Covid-19 Vaccine In Delhi: 4 Times Vaccination In A Week

ಕೊರೊನಾವೈರಸ್ ಲಸಿಕೆ ಕೇಂದ್ರಗಳ ಹೆಚ್ಚಳ:
ನವದೆಹಲಿಯಲ್ಲಿ ಕೊರೊನಾವೈರಸ್ ಲಸಿಕೆ ಕೇಂದ್ರಗಳ ಸಂಖ್ಯೆಯು ಸದ್ಯದ ಮಟ್ಟಿಗೆ 81 ಇದೆ. ಮುಂದಿನ ಕೆಲವು ದಿನಗಳಲ್ಲಿ ಈ ಲಸಿಕೆ ಕೇಂದ್ರಗಳ ಸಂಖ್ಯೆಯನ್ನು 175ಕ್ಕೆ ಏರಿಕೆ ಮಾಡಲಾಗುತ್ತದೆ. ಅದಾಗಿ ಸ್ವಲ್ಪ ದಿನಕ್ಕೆ ರಾಜ್ಯದಲ್ಲಿ 1000 ಲಸಿಕೆ ಕೇಂದ್ರಗಳನ್ನು ತೆರೆಯಲು ಸರ್ಕಾರವು ಯೋಜನೆ ರೂಪಿಸಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕೇಂದ್ರ ಸರ್ಕಾರ ನವದೆಹಲಿಯ ಎಲ್ಲ ಪ್ರಜೆಗಳಿಗೆ ಲಸಿಕೆ ನೀಡುವುದಕ್ಕೆ ನಿರಾಕರಿಸಿದರೆ ಯಾರೊಬ್ಬರೂ ಆತಂಕಪಡಬೇಕಿಲ್ಲ. ಕೊರೊನಾವೈರಸ್ ಲಸಿಕೆ ವಿತರಣೆ ವಿಚಾರದಲ್ಲಿ ಪ್ರಜೆಗಳು ಯಾವುದೇ ರೀತಿ ಗೊಂದಲಕ್ಕೀಡಾಗುವ ಅಗತ್ಯವಿಲ್ಲ. ರಾಜ್ಯ ಸರ್ಕಾರವು ತನ್ನ ಪ್ರಜೆಗಳಿಗೆ ಉಚಿತವಾಗಿ ಲಸಿಕೆ ನೀಡುವ ಹೊಣೆ ಹೊತ್ತುಕೊಳ್ಳಲಿದೆ ಎಂದು ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+