ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ಟೋಬರ್ 29ರಿಂದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

|
Google Oneindia Kannada News

ನವದೆಹಲಿ, ಆಗಸ್ಟ್ 15: ದೆಹಲಿಯ ಸರ್ಕಾರಿ ಬಸ್‌ಗಳಲ್ಲಿ ಅಕ್ಟೋಬರ್ 29ರಿಂದ ಮಹಿಳೆಯರಿಗೆ ಉಚಿತ ಪ್ರಯಾಣಾವಕಾಶ ಕಲ್ಪಿಸಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ಅವರು ಈ ವಿಷಯ ತಿಳಿಸಿದರು. ಅಕ್ಟೋಬರ್ 29ರಿಂದ ದೆಹಲಿಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದರು.

ಮಹಿಳೆಯರಿಗೆ ಬಸ್, ಮೆಟ್ರೋ ಪ್ರಯಾಣ ಉಚಿತ: ಕೇಜ್ರಿವಾಲ್ ಹೊಸ ಪ್ಲ್ಯಾನ್ ಮಹಿಳೆಯರಿಗೆ ಬಸ್, ಮೆಟ್ರೋ ಪ್ರಯಾಣ ಉಚಿತ: ಕೇಜ್ರಿವಾಲ್ ಹೊಸ ಪ್ಲ್ಯಾನ್

ಕಳೆದ ಕೆಲವು ದಿನಗಳ ಹಿಂದಷ್ಟೇ ನಮ್ಮ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವುದಾಗಿ ಘೋಷಿಸಿದ್ದರು. ಅದಾದ ಬಳಿಕ 200 ಯೂನಿಟ್ ವರೆಗೆ ವಿದ್ಯುತ್ ಉಚಿತ ನಂತರ ಪ್ರತಿ ಯುನಿಟ್‌ಗೆ ಅರ್ಧ ದರ ಎಂದು ಘೋಷಿಸಿದ್ದರು.

 Free Travel Facilities For Woman In DTC Bus

ಇದೀಗ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶ ನೀಡುವ ಕುರಿತು ತಿಳಿಸಿದ್ದಾರೆ.''ರಕ್ಷಾ ಬಂಧನದ ಈ ಸುದಿನ, ನನ್ನ ತಂಗಿಯರಿಗೆ ಉಡುಗೊರೆ ಕೊಡಲು ಬಯಸುತ್ತೇನೆ, ಡಿಟಿಸಿ ಬಸ್‌ನಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು'' ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ಮುಂಬರುವ ಜೂನ್ ತಿಂಗಳಲ್ಲಿ ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ದೆಹಲಿಯಲ್ಲಿ 2015ರಿಂದ ಆಮ್‌ಆದ್ಮಿ ಪಕ್ಷ ಅಸ್ತಿತ್ವದಲ್ಲಿದೆ.

ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಯೋಜನೆಯಡಿಯಲ್ಲಿ ದೆಹಲಿ ಸರ್ಕಾರವು 700 ಕೋಟಿ ರೂಗಳನ್ನು ವೆಚ್ಚ ಮಾಡುತ್ತಿದೆ. ಸರ್ಕಾರವೇ ಟಿಕೆಟ್‌ಗಳನ್ನು ಖರೀದಿಸಲಿದೆ. ಈ ಎಲ್ಲಾ ನಿರ್ಧಾರಗಳನ್ನು ಕೇಳಿದ ಬಳಿಕ ಬಿಜೆಪಿಯು ದೆಹಲಿ ಮುಖ್ಯಮಂತ್ರಿ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದು ಗೇಲಿ ಮಾಡಿದ್ದಾರೆ.

English summary
Delhi Chief Minister Arvind Kejriwal Announced that Free Travel Facilities For Woman In DTC Bus From October 29.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X