ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುಪ್ರೀಂ ಕೋರ್ಟ್ ಪ್ರಶ್ನಿಸಿದ ನಂತರ ಕೇಂದ್ರದಿಂದ ಉಚಿತ ಲಸಿಕೆ: ಕಾಂಗ್ರೆಸ್ ಟೀಕೆ

|
Google Oneindia Kannada News

ನವದೆಹಲಿ, ಜೂನ್ 8: ಕೇಂದ್ರ ಸರ್ಕಾರದ ಲಸಿಕೆ ನೀತಿಯನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದ ನಂತರ 18 ವರ್ಷಕ್ಕಿಂತ ಹೆಚ್ಚಿನ ಎಲ್ಲರಿಗೂ ಉಚಿತ ಲಸಿಕೆಯನ್ನು ನೀಡುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

"ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರು ದೇಶದ ಪ್ರತಿಯೊಬ್ಬರಿಗೂ ಉಚಿತ ಲಸಿಕೆಗಳನ್ನು ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆದರೆ ಸರ್ಕಾರ ಈ ಒತ್ತಾಯಕ್ಕೆ ಪ್ರತಿಕ್ರಿಯೆಯನ್ನು ನೀಡಲಿಲ್ಲ" ಎಂದು ಕಾಂಗ್ರೆಸ್‌ನ ಮುಖ್ಯ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲ ಪ್ರತಿಕ್ರಿಯಿಸಿದ್ದಾರೆ.

18-44 ವರ್ಷದ 3.04 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ 18-44 ವರ್ಷದ 3.04 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ

"ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಸುಪ್ರೀಂ ಕೋರ್ಟ್ ಮತ್ತು ದೇಶದ ಹಲವಾರು ನ್ಯಾಯಾಲಯಗಳು ಪ್ರಶ್ನೆಯನ್ನು ಮಾಡಿದೆ. ಅದಾದ ನಂತರ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವ ಕಾಂಗ್ರೆಸ್‌ನ ಬೇಡಿಕೆಗಳನ್ನು ಸರ್ಕಾರ ಒಪ್ಪಿಕೊಂಡಿದೆ" ಎಂದು ಸುರ್ಜೇವಾಲ ಹೇಳಿಕೆಯನ್ನು ನೀಡಿದ್ದಾರೆ.

Free vaccine after Supreme Court interfere: Congress

ಸೋಮವಾರ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಭಾಷಣವನ್ನು ಮಾಡಿದ್ದು ಈ ಸಂದರ್ಭದಲ್ಲಿ ಈ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆಯನ್ನು ನೀಡಲು ರಾಜ್ಯ ಸರ್ಕಾರಗಳಿಗೆ ಕೇಂದ್ರವೇ ಲಸಿಕೆಯನ್ನು ಪೂರೈಸಲಿದೆ. ಜೂನ್ 21 ರಿಂದ ಇದು ಆರಂಭವಾಗಲಿದೆ ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಈ ಮಹತ್ವದ ನಿರ್ಧಾರದ ಬಗ್ಗೆ ಕಾಂಗ್ರೆಸ್ ಈ ಪ್ರತಿಕ್ರಿಯೆ ನೀಡಿದೆ.

ಇನ್ನು ಲಸಿಕೆ ವಿಚಾರವಾಗಿ ಕಾಂಗ್ರೆಸ್ ಕೇಂದ್ರ ಸರ್ಕಾರದ ಮೇಲೆ ತೀವ್ರ ಟೀಕೆಯನ್ನು ಮುಂದುವರಿಸಿದೆ. 2020ರ ಮೇ ತಿಂಗಳಿನಿಂದ ಜನವರಿ 2021ರ ವರೆಗೆ ಲಸಿಕೆ ಖರೀದಿಸುವ ಬಗ್ಗೆ ಕ್ರಮಕೈಗೊಳ್ಳಲಿಲ್ಲ. ಜೂನ್ 7ರವರೆಗೂ ಎಲ್ಲರಿಗೂ ಉಚಿತ ಲಸಿಕೆ ಘೋಷಣೆ ಮಾಡದೆ ಲಕ್ಷಾಂತರ ಜನರು ಜೀವ ಕಳೆದುಕೊಳ್ಳುವಂತಾ ಪಾಪವನ್ನು ಬಿಜೆಪಿ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. "ಕಳೆದ ಆರು ತಿಂಗಳಿನಲ್ಲಿ ಲಸಿಕೆ ವಿಚಾರವಾಗಿ ಮೂರು ವಿಭಿನ್ನ ನಿರ್ಧಾರಗಳನ್ನು ತೆಗೆದುಕೊಂಡಿದೆ. ಅದಾದ ನಂತರ ಸುಪ್ರೀಂ ಕೋರ್ಟ್ ಹಾಗೂ ಬೇರೆ ಕೋರ್ಟ್‌ಗಳು ಗೊಂದಲದ ಲಸಿಕಾ ನೀತಿಯ ಬಗ್ಗೆ ಪ್ರಶ್ನೆಯನ್ನು ಮಾಡಿದೆ" ಎಂದಿದ್ದಾರೆ.

English summary
Free vaccine after Supreme Court interfere: Congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X