• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೇಕ್ ಇನ್ ಇಂಡಿಯಾ ಅಲ್ಲ, ರೇಪ್ ಇನ್ ಇಂಡಿಯಾ!

|

ದೆಹಲಿ, ಡಿಸೆಂಬರ್.10: ಭಾರತದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಮಿತಿಯೇ ಇಲ್ಲದಂತೆ ಆಗಿದೆ. ಮಹಿಳಾ ಸುರಕ್ಷತೆ ಬಗ್ಗೆ ಹಗಲು-ರಾತ್ರಿ ಯೋಚಿಸುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ವಿಚಾರ ಲೋಕಸಭೆಯಲ್ಲಿ ಸಾಕಷ್ಟು ಸದ್ದು ಮಾಡಿದೆ.

ಕಳೆದೊಂದು ವಾರಗಳಿಂದಲೂ ಚಳಿಗಾಲ ಅಧಿವೇಶನದಲ್ಲಿ ಒಬ್ಬೊಬ್ಬ ನಾಯಕರು ಮಹಿಳಾ ಸುರಕ್ಷತೆ ಬಗ್ಗೆ ಪ್ರಸ್ತಾಪಿಸುತ್ತಿದ್ದಾರೆ. ಡಿಸೆಂಬರ್.10 ರಂದು ನಡೆದ ಲೋಕಸಭಾ ಕಲಾಪದಲ್ಲಿ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ, ಈ ಬಗ್ಗೆ ಮಾತನಾಡಿದ್ದಾರೆ.

ಕಡೆಗೂ ಸುಟ್ಟು ಬೂದಿಯಾದಳು ಉನ್ನಾವ್ ಅತ್ಯಾಚಾರ ಸಂತ್ರಸ್ತೆ!

ಕೇಂದ್ರ ಸರ್ಕಾರ ಸಾಲು ಸಾಲು ಕಾಯ್ದೆಗಳಿಗೆ ತಿದ್ದುಪಡಿ ತರಲು ಹೊರಟಿದೆ. ಆದರೆ, ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಕಡಿವಾಣ ಇಲ್ಲದಂತೆ ಆಗಿದೆ. ಹೀಗಿದ್ದರೂ ಕೇಂದ್ರ ಸರ್ಕಾರವೇ ಆಗಲಿ, ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಯಾಕೆ ಈ ಕುರಿತು ಸೊಲ್ಲೆತ್ತುತ್ತಿಲ್ಲ ಎಂದು ಅಧೀರ್ ರಂಜನ್ ಚೌಧರಿ ಪ್ರಶ್ನೆ ಮಾಡಿದ್ದಾರೆ.

ರೇಪ್ ಇನ್ ಇಂಡಿಯಾ:

ಪ್ರಧಾನಮಂತ್ರಿ ನರೇಂದ್ರ ಮೋದಿ ಸಾಕಷ್ಟು ವಿಚಾರಗಳ ಬಗ್ಗೆ ಮಾತನಾಡುತ್ತಾರೆ. ವಿಪರ್ಯಾಸ ಎಂದರೆ ಅವರಿಗೆ ದೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯದ ಬಗ್ಗೆ ಮಾಹಿತಿ ಇಲ್ಲವೋ, ಅಥವಾ ಎಲ್ಲವೂ ಗೊತ್ತಿದ್ದು ಸುಮ್ಮನಾಗಿದ್ದಾರೋ ಗೊತ್ತಿಲ್ಲ ಎಂದು ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ. ಪ್ರಧಾನಿ ಮೋದಿ ವಿದೇಶಗಳಲ್ಲಿ ಮೇಕ್ ಇನ್ ಇಂಡಿಯಾ ಬಗ್ಗೆ ಭಾಷಣ ಮಾಡುತ್ತಾರೆ. ಇತ್ತೀಚಿನ ಬೆಳವಣಿಗೆಗಳನ್ನು ನೋಡುತ್ತಿದ್ದರೆ, ಮೇಕ್ ಇನ್ ಇಂಡಿಯಾಗಿಂತಲೂ ದೇಶವೂ ರೇಪ್ ಇನ್ ಇಂಡಿಯಾಗೆ ಹೆಚ್ಚು ಸುದ್ದಿ ಆಗುತ್ತಿದೆ ಎಂದು ಟೀಕಿಸಿದ್ದಾರೆ.

English summary
Prime Minister Narendra Modi Speaks On Everything, Is Silent On Crimes Against Women Issue. - Adhir Ranjan Chaudhary.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X