• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗತಿ ಶಕ್ತಿ ಯೋಜನೆಗೆ ಪ್ರಧಾನಿ ಮೋದಿ ಚಾಲನೆ, ಯೋಜನೆ ಬಗ್ಗೆ ಮಾಹಿತಿ

|
Google Oneindia Kannada News

ನವದೆಹಲಿ, ಅಕ್ಟೋಬರ್ 13: ಪ್ರಧಾನಿ ನರೇಂದ್ರ ಮೋದಿ ನೂತನ ಗತಿ ಶಕ್ತಿ ಯೋಜನೆಗೆ ಇಂದು ಚಾಲನೆ ನೀಡಿದ್ದಾರೆ.

ಇದು ಸುಮಾರು 100 ಲಕ್ಷ ಕೋಟಿ ಮೌಲ್ಯದ ಮೂಲಸೌಕರ್ಯ ಯೋಜನೆಗಳ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ. ಇದರ ಅಡಿಯಲ್ಲಿ, 16 ಸಚಿವಾಲಯಗಳು ಮತ್ತು ಇಲಾಖೆಗಳು ಆ ಎಲ್ಲ ಯೋಜನೆಗಳನ್ನು ಜಿಐಎಸ್ ಮೋಡ್‌ನಲ್ಲಿ ಇರಿಸಿದ್ದು, ಇವುಗಳನ್ನು 2024-25 ರೊಳಗೆ ಪೂರ್ಣಗೊಳಿಸಲಾಗುವುದು.

 ಆರ್ಥಿಕ ಬೆಳವಣಿಗೆ ಹೆಚ್ಚಿಸಲು 100 ಲಕ್ಷ ಕೋಟಿ ರೂ. ಮೊತ್ತದ 'ಗತಿ ಶಕ್ತಿ' ಯೋಜನೆ ಘೋಷಣೆ ಆರ್ಥಿಕ ಬೆಳವಣಿಗೆ ಹೆಚ್ಚಿಸಲು 100 ಲಕ್ಷ ಕೋಟಿ ರೂ. ಮೊತ್ತದ 'ಗತಿ ಶಕ್ತಿ' ಯೋಜನೆ ಘೋಷಣೆ

ಪಿಎಂ-ಗತಿಶಕ್ತಿ ಯೋಜನೆ ಬಹು-ಮಾದರಿ ಸಂಪರ್ಕವು ಜನರು, ಸರಕು ಮತ್ತು ಸೇವೆಗಳನ್ನು ಒಂದು ಸಾರಿಗೆ ವಿಧಾನದಿಂದ ಇನ್ನೊಂದಕ್ಕೆ ಸಾಗಿಸಲು ಸಮಗ್ರ ಮತ್ತು ತಡೆರಹಿತ ಸಂಪರ್ಕವನ್ನು ಒದಗಿಸುತ್ತದೆ. ಇದು ಮೂಲಸೌಕರ್ಯದ ಅಂತಿಮ ಗಮ್ಯಸ್ಥಾನ ಸಂಪರ್ಕವನ್ನು ಸುಗಮಗೊಳಿಸಲು ಮತ್ತು ಜನರಿಗೆ ಪ್ರಯಾಣದ ಸಮಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದು ಮುಂಬರುವ ಸಂಪರ್ಕ ಯೋಜನೆಗಳು, ಇತರೆ ವ್ಯಾಪಾರ ಕೇಂದ್ರಗಳು, ಕೈಗಾರಿಕಾ ಪ್ರದೇಶಗಳು ಮತ್ತು ಸುತ್ತಮುತ್ತಲಿನ ಪರಿಸರದ ಬಗ್ಗೆ ಜನರು ಮತ್ತು ವ್ಯಾಪಾರ ಸಮುದಾಯ ಜನರಿಗೆ ಮಾಹಿತಿಯನ್ನು ಒದಗಿಸಲಿದೆ. ಇದು ಹೂಡಿಕೆದಾರರಿಗೆ ತಮ್ಮ ವ್ಯಾಪಾರವನ್ನು ಸೂಕ್ತ ಸ್ಥಳಗಳಲ್ಲಿ ಯೋಜಿಸಲು ಸಹಾಯ ಮಾಡಲಿದೆ.

ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಯ ಮೂಲಕ ದೇಶದ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಗುರಿ ಹೊಂದಲಾಗಿದೆ. ಈ ಯೋಜನೆಯು ದೇಶದ ಮಾಸ್ಟರ್ ಪ್ಲಾನ್ ಮತ್ತು ಮೂಲಸೌಕರ್ಯದ ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈ ಯೋಜನೆಯ ಮೂಲಕ ಸ್ಥಳೀಯ ಉತ್ಪಾದಕರನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸುವ ಗುರಿ ಇದೆ. ಇದು ಕೈಗಾರಿಕೆಗಳ ಅಭಿವೃದ್ಧಿಗೆ ಕಾರಣವಾಗಲಿದೆ.

ಆಗಸ್ಟ್ 15 ರಂದು ಯೋಜನೆಯನ್ನು ಘೋಷಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಈ ಯೋಜನೆಯಲ್ಲಿ ರೈಲ್ವೆ, ರಸ್ತೆಗಳು ಮತ್ತು ಹೆದ್ದಾರಿಗಳು, ಪೆಟ್ರೋಲಿಯಂ ಮತ್ತು ಅನಿಲ, ವಿದ್ಯುತ್, ದೂರಸಂಪರ್ಕ, ಹಡಗು, ವಾಯುಯಾನ ಮತ್ತು ಕೈಗಾರಿಕಾ ಪಾರ್ಕ್ ಇಲಾಖೆಗಳು ಸೇರಿದಂತೆ ಕೇಂದ್ರ ಸರ್ಕಾರದ 16 ಇಲಾಖೆಗಳು ಒಳಗೊಳ್ಳಲಿವೆ ಎಂದು ಹೇಳಿದ್ದರು. ಕೇಂದ್ರದ ಎಲ್ಲಾ 16 ಇಲಾಖೆಗಳ ಉನ್ನತ ಅಧಿಕಾರಿಗಳ ನೆಟ್ವರ್ಕ್ ಪ್ಲಾನಿಂಗ್ ಗ್ರೂಪ್ ರಚಿಸಲಾಗುವುದು ಎಂದು ಅವರು ಹೇಳಿದ್ದರು.

ಪಿಎಂ 'ಗತಿ ಶಕ್ತಿ' ಬಿಡುಗಡೆ ಕಾರ್ಯಕ್ರಮವು ನವದೆಹಲಿಯ ಪ್ರಗತಿ ಮೈದಾನದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಿತು. ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ, ಗತಿ ಶಕ್ತಿ ಮಾಸ್ಟರ್ ಪ್ಲಾನ್ ಮತ್ತು ಪ್ರಗತಿ ಮೈದಾನದಲ್ಲಿ ಹೊಸ ಪ್ರದರ್ಶನ ಸಂಕೀರ್ಣದ ಮಾದರಿಯನ್ನು ಪರಿಶೀಲಿಸಿದರು.

Gati Shakti: Modi Launches 100-Lakh Crore National Master Plan For Multi-Modal Connectivity

ಮುಂದಿನ 25 ವರ್ಷಗಳಿಗೆ ನಾವು ಅಡಿಪಾಯ ಹಾಕುತ್ತಿದ್ದೇವೆ. ಈ ರಾಷ್ಟ್ರೀಯ ಮಾಸ್ಟರ್ ಪ್ಲಾನ್ 21 ನೇ ಶತಮಾನದ ಅಭಿವೃದ್ಧಿ ಯೋಜನೆಗಳಿಗೆ 'ಗತಿಶಕ್ತಿ' ನೀಡುತ್ತದೆ ಮತ್ತು ಈ ಯೋಜನೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಲು ಸಹಾಯ ಮಾಡುತ್ತದೆ ಎಂದು ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಮೋದಿ ಹೇಳಿದ್ದಾರೆ.

ಈ ಯೋಜನೆಯು ಪ್ರಧಾನಿ ಮೋದಿಯವರ 'ಆತ್ಮನಿರ್ಭರ ಭಾರತ್' ದೃಷ್ಟಿಕೋನದ ಒಂದು ಪ್ರಮುಖ ಭಾಗವಾಗಿದೆ ಮತ್ತು ಮಹತ್ವಾಕಾಂಕ್ಷೆಯಿಂದ 1.5-ಟ್ರಿಲಿಯನ್ ಡಾಲರ್ ರಾಷ್ಟ್ರೀಯ ಮೂಲಸೌಕರ್ಯ ಪೈಪ್‌ಲೈನ್ ಅಡಿಯಲ್ಲಿ ಯೋಜನೆಗಳಿಗೆ ಹೆಚ್ಚಿನ ಶಕ್ತಿ ಮತ್ತು ವೇಗವನ್ನು ನೀಡುವ ಗುರಿ ಹೊಂದಿದೆ ಮತ್ತು 5-ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸುವ ಗುರಿಗೆ ಪ್ರಚೋದನೆ ನೀಡುತ್ತದೆ

ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಯ ವಿಶೇಷತೆ ಏನು?

- ಪಿಎಂ ಗತಿ ಶಕ್ತಿ ಯೋಜನೆ ಮೂಲಕ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲಾಗುವುದು.

- ಈ ಯೋಜನೆಯು ಮೂಲಭೂತ ಸೌಕರ್ಯಗಳ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ.

- ಸ್ಥಳೀಯ ಉತ್ಪಾದಕರನ್ನು ಜಾಗತಿಕವಾಗಿ ಸ್ಪರ್ಧಾತ್ಮಕಗೊಳಿಸಲಾಗುವುದು.

- ಹೊಸ ಆರ್ಥಿಕ ವಲಯಗಳನ್ನು ಸಹ ಯೋಜನೆಯಡಿ ಅಭಿವೃದ್ಧಿಪಡಿಸಲಾಗುವುದು.
- ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಯನ್ನು ಪ್ರಧಾನಿ ಮೋದಿಯವರು 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಘೋಷಿಸಿದ್ದರು.

- ಗತಿ ಶಕ್ತಿ ಯೋಜನೆಯ ಒಟ್ಟು ಬಜೆಟ್ ಅನ್ನು 100 ಲಕ್ಷ ಕೋಟಿಗಳಿಗೆ ನಿಗದಿಪಡಿಸಲಾಗಿದೆ.
- ಈ ಯೋಜನೆಯ ಮೂಲಕ ಸಮಗ್ರ ಮೂಲಸೌಕರ್ಯದ ಅಡಿಪಾಯವನ್ನು ಹಾಕಲಾಗುವುದು.

- ಆಧುನಿಕ ಮೂಲಸೌಕರ್ಯದೊಂದಿಗೆ ಮೂಲಸೌಕರ್ಯ ನಿರ್ಮಾಣದಲ್ಲಿ ಸಮಗ್ರ ವಿಧಾನವನ್ನು ಅಳವಡಿಸಿಕೊಳ್ಳಲಾಗುವುದು.

English summary
In a landmark event marking a milestone for the infrastructural landscape of India, Prime Minister Narendra Modi on Wednesday launched the ‘PM GatiShakti - National Master Plan’ for multi-modal connectivity to economic zones in the country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X