ಗೌರಿ ಹತ್ಯೆ ಪ್ರಕರಣ: ಆರೋಪಿ ಮೋಹನ್ ವಿರುದ್ಧ ಕೋಕಾ ಕಾಯ್ದೆ ಮರುಸ್ಥಾಪಿಸಿದ ಸುಪ್ರೀಂ
ನವದೆಹಲಿ, ಅಕ್ಟೋಬರ್ 21: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಆರೋಪಿ ಮೋಹನ್ ನಾಯಕ್ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೆಸಿಒಸಿಎ) ಅಡಿಯಲ್ಲಿ ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಗುರುವಾರ ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಆರೋಪಿ ಮೋಹನ್ ನಾಯಕ್ ವಿರುದ್ಧದ ಈ ಕೋಕಾ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ಮರುಸ್ಥಾಪನೆ ಮಾಡಿದೆ.
ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ ಹಾಗೂ ಸಿ ಟಿ ರವಿಕುಮಾರ್‌ರನ್ನು ಒಳಗೊಂಡ ತ್ರಿಸದಸ್ಯರ ಸುಪ್ರೀಂಕೋರ್ಟ್ ನ್ಯಾಯಪೀಠವು, ಈ ಬಗ್ಗೆ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಈ ವರ್ಷದ ಏಪ್ರಿಲ್ 22 ರಂದು ರಾಜ್ಯ ಸರ್ಕಾರ ಹಾಗೂ ಗೌರಿ ಸಹೋದರಿ ಕವಿತಾ ಲಂಕೇಶ್ ಅರ್ಜಿ ವಿಚಾರಣೆಗೆ ಅನುಮತಿ ನೀಡಿತ್ತು.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ (ಕೋಕಾ) ಆರೋಪ ಕೈಬಿಟ್ಟಿರುವುದನ್ನು ಪ್ರಶ್ನಿಸಿ ಗೌರಿ ಲಂಕೇಶ್ ಸಹೋದರಿ, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪರಿಗಣಿಸಿ, ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಇತರರಿಗೆ ನೋಟಿಸ್ ನೀಡಿತ್ತು. ಆರೋಪಿ ವಿರುದ್ಧ ಕೋಕಾ ಆರೋಪ ಮರುಸ್ಥಾಪನೆ ಮಾಡುವ ಮೂಲಕ ಕವಿತಾ ಲಂಕೇಶ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದೆ.

ಮೋಹನ್ ನಾಯಕ್ ವಿರುದ್ಧದ ಕೋಕಾ ಕಾಯಿದೆ:
ಕರ್ನಾಟಕ ಹೈಕೋರ್ಟ್ ಬೆಂಗಳೂರು ಪೊಲೀಸ್ ಆಯುಕ್ತರು 2018ರಲ್ಲಿ ನೀಡಿದ್ದ ಆದೇಶ ಹಾಗೂ ಆ ಬಳಿಕದ ಪೂರಕ ಆರೋಪ ಪಟ್ಟಿಯನ್ನು 2021 ರ ಏಪ್ರಿಲ್ 22 ರಂದು ವಜಾ ಮಾಡಿತ್ತು. ಈ ಸಂಬಂಧ ಕವಿತಾ ಲಂಕೇಶ್ ಅರ್ಜಿ ಸಲ್ಲಿಸಿದ್ದರು. ಕರ್ನಾಟಕ ಹೈಕೋರ್ಟ್ ಆದೇಶದಂತೆ ಮೋಹನ್ ನಾಯಕ್ ವಿರುದ್ಧದ ಕೋಕಾ ಕಾಯಿದೆಯ ಕೆಸಿಒಸಿಎ ಸೆಕ್ಷನ್ 3 (1) (i), 3 (2), 3 (3) ಮತ್ತು 3 (4) ಅಡಿಯಲ್ಲಿ ನಿಗದಿಪಡಿಸಲಾಗಿದ್ದ ಆರೋಪಗಳನ್ನು ಕೈಬಿಡಲಾಗಿತ್ತು. ಈಗ ಮರುಸ್ಥಾಪನೆ ಮಾಡಲಾಗಿದೆ.
ಕವಿತಾ ಲಂಕೇಶ್ ಸಲ್ಲಿಸಿದ್ದ ಅರ್ಜಿಯಲ್ಲಿ, ಆರೋಪಿ ಮೋಹನ್ ನಾಯಕ್ ವಿರುದ್ಧ ಕೋಕಾ ಕಾಯ್ದೆಯಡಿ ಆರೋಪಗಳನ್ನು ಹೈಕೋರ್ಟ್ ರದ್ದುಪಡಿಸಿದ ಬಳಿಕ ಆತ ಕಳೆದ ಕೆಲ ತಿಂಗಳು ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾನೆ. ಈಗ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ಸಂಪೂರ್ಣವಾಗಿದೆ, ಆದೇಶ ನೀಡುವುದು ಬಾಕಿ ಉಳಿದಿದೆ ಎಂದು ಉಲ್ಲೇಖ ಮಾಡಲಾಗಿತ್ತು.
"ಮೋಹನ್ ನಾಯಕ್ ಅಪರಾಧಕ್ಕೆ ಮೊದಲು ಮತ್ತು ನಂತರ ಕೊಲೆಗಾರರಿಗೆ ಆಶ್ರಯ ನೀಡುವ ಸಹಾಯ ಮಾಡಿದ್ದಾನೆ. ಕೃತ್ಯ ಎಸಗಿದ ಬಳಿಕ ಹಲವಾರು ಪಿತೂರಿ, ಸಂಚು ರೂಪಿಸುವಲ್ಲಿ ತೊಡಗಿಕೊಂಡಿದ್ದ ಎಂಬುದು ತನಿಖೆ ದೃಢಪಡಿಸಿದೆ," ಎಂದು ಆರೋಪ ಮಾಡಿದ್ದಾರೆ. "ಆತ ನಿರಂತರವಾಗಿ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾನೆ ಎಂಬುವುದು ತನಿಖೆಯಲ್ಲಿ ಖಚಿತವಾಗಿದೆ. ಆತ ಆರಂಭದಿಂದಲೂ ಒಂದನೇ ಆರೋಪಿ ಅಮೋಲ್ ಕಾಳೆ ಜೊತೆ ಹಾಗೂ ಎಂಟನೇ ಆರೋಪಿ ಶಸ್ತ್ರಾಸ್ತ್ರ ತರಬೇತುದಾರ ರಾಜೇಶ್ ಡಿ ಬಂಗೇರ ಜೊತೆ ನಿಕಟ ಸಂಪರ್ಕದಲ್ಲಿದ್ದನು. ಆತ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ತನಿಖಾ ಸಂಸ್ಥೆ ಸಾಕಷ್ಟು ಸಾಕ್ಷ್ಯಗಳನ್ನು ಹೊಂದಿದೆ," ಎಂದು ಕೂಡಾ ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ.
ಇನ್ನು ಗೌರಿ ಹತ್ಯೆ ಮಾತ್ರವಲ್ಲದೆ ಅನೇಕ ಸಂಘಟಿತ ಅಪರಾಧಗಳನ್ನು ಎಸಗಿದ ಅಮೋಲ್ ಕಾಳೆ ನೇತೃತ್ವದ ಗುಂಪಿನೊಂದಿಗೆ ಮೋಹನ್ ನಾಯಕ್ ನಂಟು ಹೊಂದಿದ್ದಾನೆ ಎಂದು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ.
(ಒನ್‌ಇಂಡಿಯಾ ಸುದ್ದಿ)
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications