ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೌರಿ ಹತ್ಯೆ ಪ್ರಕರಣ: ಆರೋಪಿ ಮೋಹನ್‌ ವಿರುದ್ಧ ಕೋಕಾ ಕಾಯ್ದೆ ಮರುಸ್ಥಾಪಿಸಿದ ಸುಪ್ರೀಂ

|
Google Oneindia Kannada News

ನವದೆಹಲಿ, ಅಕ್ಟೋಬರ್‌ 21: ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಆರೋಪಿ ಮೋಹನ್‌ ನಾಯಕ್‌ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೆಸಿಒಸಿಎ) ಅಡಿಯಲ್ಲಿ ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಗುರುವಾರ ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಆರೋಪಿ ಮೋಹನ್‌ ನಾಯಕ್‌ ವಿರುದ್ಧದ ಈ ಕೋಕಾ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ಮರುಸ್ಥಾಪನೆ ಮಾಡಿದೆ.

ಗೌರಿ ಲಂಕೇಶ್‌ ಸಹೋದರಿ ಕವಿತಾ ಲಂಕೇಶ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್‌, ದಿನೇಶ್‌ ಮಹೇಶ್ವರಿ ಹಾಗೂ ಸಿ ಟಿ ರವಿಕುಮಾರ್‌ರನ್ನು ಒಳಗೊಂಡ ತ್ರಿಸದಸ್ಯರ ಸುಪ್ರೀಂಕೋರ್ಟ್ ನ್ಯಾಯಪೀಠವು, ಈ ಬಗ್ಗೆ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಈ ವರ್ಷದ ಏಪ್ರಿಲ್‌ 22 ರಂದು ರಾಜ್ಯ ಸರ್ಕಾರ ಹಾಗೂ ಗೌರಿ ಸಹೋದರಿ ಕವಿತಾ ಲಂಕೇಶ್‌ ಅರ್ಜಿ ವಿಚಾರಣೆಗೆ ಅನುಮತಿ ನೀಡಿತ್ತು.

ಗೌರಿ ಹತ್ಯೆ ಪ್ರಕರಣ: ಕವಿತಾ ಲಂಕೇಶ್‌ ಅರ್ಜಿ ಪರಿಗಣಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದ ಸುಪ್ರಿಂಗೌರಿ ಹತ್ಯೆ ಪ್ರಕರಣ: ಕವಿತಾ ಲಂಕೇಶ್‌ ಅರ್ಜಿ ಪರಿಗಣಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದ ಸುಪ್ರಿಂ

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ (ಕೋಕಾ) ಆರೋಪ ಕೈಬಿಟ್ಟಿರುವುದನ್ನು ಪ್ರಶ್ನಿಸಿ ಗೌರಿ ಲಂಕೇಶ್‌ ಸಹೋದರಿ, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪರಿಗಣಿಸಿ, ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಇತರರಿಗೆ ನೋಟಿಸ್ ನೀಡಿತ್ತು. ಆರೋಪಿ ವಿರುದ್ಧ ಕೋಕಾ ಆರೋಪ ಮರುಸ್ಥಾಪನೆ ಮಾಡುವ ಮೂಲಕ ಕವಿತಾ ಲಂಕೇಶ್‌ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದೆ.

Gauri Lankesh murder case: SC restores KCOCA charges against accused

ಮೋಹನ್‌ ನಾಯಕ್‌ ವಿರುದ್ಧದ ಕೋಕಾ ಕಾಯಿದೆ:
ಕರ್ನಾಟಕ ಹೈಕೋರ್ಟ್ ಬೆಂಗಳೂರು ಪೊಲೀಸ್ ಆಯುಕ್ತರು 2018ರಲ್ಲಿ ನೀಡಿದ್ದ ಆದೇಶ ಹಾಗೂ ಆ ಬಳಿಕದ ಪೂರಕ ಆರೋಪ ಪಟ್ಟಿಯನ್ನು 2021 ರ ಏಪ್ರಿಲ್ 22 ರಂದು ವಜಾ ಮಾಡಿತ್ತು. ಈ ಸಂಬಂಧ ಕವಿತಾ ಲಂಕೇಶ್‌ ಅರ್ಜಿ ಸಲ್ಲಿಸಿದ್ದರು. ಕರ್ನಾಟಕ ಹೈಕೋರ್ಟ್ ಆದೇಶದಂತೆ ಮೋಹನ್‌ ನಾಯಕ್‌ ವಿರುದ್ಧದ ಕೋಕಾ ಕಾಯಿದೆಯ ಕೆಸಿಒಸಿಎ ಸೆಕ್ಷನ್ 3 (1) (i), 3 (2), 3 (3) ಮತ್ತು 3 (4) ಅಡಿಯಲ್ಲಿ ನಿಗದಿಪಡಿಸಲಾಗಿದ್ದ ಆರೋಪಗಳನ್ನು ಕೈಬಿಡಲಾಗಿತ್ತು. ಈಗ ಮರುಸ್ಥಾಪನೆ ಮಾಡಲಾಗಿದೆ.

ಕವಿತಾ ಲಂಕೇಶ್‌ ಸಲ್ಲಿಸಿದ್ದ ಅರ್ಜಿಯಲ್ಲಿ, ಆರೋಪಿ ಮೋಹನ್‌ ನಾಯಕ್‌ ವಿರುದ್ಧ ಕೋಕಾ ಕಾಯ್ದೆಯಡಿ ಆರೋಪಗಳನ್ನು ಹೈಕೋರ್ಟ್ ರದ್ದುಪಡಿಸಿದ ಬಳಿಕ ಆತ ಕಳೆದ ಕೆಲ ತಿಂಗಳು ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾನೆ. ಈಗ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ಸಂಪೂರ್ಣವಾಗಿದೆ, ಆದೇಶ ನೀಡುವುದು ಬಾಕಿ ಉಳಿದಿದೆ ಎಂದು ಉಲ್ಲೇಖ ಮಾಡಲಾಗಿತ್ತು.

ಸೆಪ್ಟೆಂಬರ್‌ 5 ಅನ್ನು 'ಗೌರಿ ಲಂಕೇಶ್‌ ದಿನ' ಎಂದು ಘೋಷಿಸಿದ ಕೆನಡಾದ ಬರ್ನಾಬಿ ನಗರಸೆಪ್ಟೆಂಬರ್‌ 5 ಅನ್ನು 'ಗೌರಿ ಲಂಕೇಶ್‌ ದಿನ' ಎಂದು ಘೋಷಿಸಿದ ಕೆನಡಾದ ಬರ್ನಾಬಿ ನಗರ

"ಮೋಹನ್‌ ನಾಯಕ್ ಅಪರಾಧಕ್ಕೆ ಮೊದಲು ಮತ್ತು ನಂತರ ಕೊಲೆಗಾರರಿಗೆ ಆಶ್ರಯ ನೀಡುವ ಸಹಾಯ ಮಾಡಿದ್ದಾನೆ. ಕೃತ್ಯ ಎಸಗಿದ ಬಳಿಕ ಹಲವಾರು ಪಿತೂರಿ, ಸಂಚು ರೂಪಿಸುವಲ್ಲಿ ತೊಡಗಿಕೊಂಡಿದ್ದ ಎಂಬುದು ತನಿಖೆ ದೃಢಪಡಿಸಿದೆ," ಎಂದು ಆರೋಪ ಮಾಡಿದ್ದಾರೆ. "ಆತ ನಿರಂತರವಾಗಿ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾನೆ ಎಂಬುವುದು ತನಿಖೆಯಲ್ಲಿ ಖಚಿತವಾಗಿದೆ. ಆತ ಆರಂಭದಿಂದಲೂ ಒಂದನೇ ಆರೋಪಿ ಅಮೋಲ್‌ ಕಾಳೆ ಜೊತೆ ಹಾಗೂ ಎಂಟನೇ ಆರೋಪಿ ಶಸ್ತ್ರಾಸ್ತ್ರ ತರಬೇತುದಾರ ರಾಜೇಶ್‌ ಡಿ ಬಂಗೇರ ಜೊತೆ ನಿಕಟ ಸಂಪರ್ಕದಲ್ಲಿದ್ದನು. ಆತ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ತನಿಖಾ ಸಂಸ್ಥೆ ಸಾಕಷ್ಟು ಸಾಕ್ಷ್ಯಗಳನ್ನು ಹೊಂದಿದೆ," ಎಂದು ಕೂಡಾ ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಇನ್ನು ಗೌರಿ ಹತ್ಯೆ ಮಾತ್ರವಲ್ಲದೆ ಅನೇಕ ಸಂಘಟಿತ ಅಪರಾಧಗಳನ್ನು ಎಸಗಿದ ಅಮೋಲ್‌ ಕಾಳೆ ನೇತೃತ್ವದ ಗುಂಪಿನೊಂದಿಗೆ ಮೋಹನ್‌ ನಾಯಕ್‌ ನಂಟು ಹೊಂದಿದ್ದಾನೆ ಎಂದು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ.

(ಒನ್‌ಇಂಡಿಯಾ ಸುದ್ದಿ)

English summary
Gauri Lankesh murder case: Supreme Court restores KCOCA charges against accused Mohan Nayak.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X