ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಸೇರ್ಪಡೆಯಾದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್

|
Google Oneindia Kannada News

ನವದೆಹಲಿ, ಮಾರ್ಚ್ 22: ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ನಿರೀಕ್ಷೆಯಂತೆಯೇ ಶುಕ್ರವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿರುವ ಗೌತಮ್ ಗಂಭೀರ್, ಈ ಹಿಂದಿನಿಂದಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪರ ನಿಲುವುಗಳನ್ನು ಪ್ರಕಟಿಸಿಕೊಂಡು ಬಂದಿದ್ದರು.

ಲೋಕಸಭೆ ಚುನಾವಣೆ ಸ್ಪರ್ಧೆಗೆ ಒಲ್ಲೆ ಎಂದ ವಿರೇಂದ್ರ ಸೆಹ್ವಾಗ್ ಲೋಕಸಭೆ ಚುನಾವಣೆ ಸ್ಪರ್ಧೆಗೆ ಒಲ್ಲೆ ಎಂದ ವಿರೇಂದ್ರ ಸೆಹ್ವಾಗ್

ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಂಭೀರ್ ಅವರು ಬಿಜೆಪಿಯನ್ನು ಅಧಿಕೃತವಾಗಿ ಸೇರಿಕೊಂಡರು. ಕೇಂದ್ರ ಸಚಿವರಾದ ಅರುಣ್ ಜೇಟ್ಲಿ ಮತ್ತು ರವಿಶಂಕರ್ ಪ್ರಸಾದ್ ಈ ಸಂದರ್ಭದಲ್ಲಿ ಹಾಜರಿದ್ದು, ಗಂಭೀರ್ ಅವರಿಗೆ ಹೂಗುಚ್ಛ ನೀಡಿ ಪಕ್ಷಕ್ಕೆ ಸ್ವಾಗತಿಸಿದರು.

ನವದೆಹಲಿಯ ಒಂದು ಕ್ಷೇತ್ರದಿಂದ ಗಂಭೀರ್ ಕಣಕ್ಕಿಳಿಯುವ ನಿರೀಕ್ಷೆಯಿದೆ. ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿತ್ತು. ಎರಡನೆಯ ಪಟ್ಟಿಯಲ್ಲಿ ಗಂಭೀರ್ ಅವರ ಹೆಸರನ್ನು ಪ್ರಕಟಿಸುವ ಸಾಧ್ಯತೆಯಿದೆ.

Gautam Gambhir joined BJP likely to contest in lok sabha elections 2019 from new delhi

ಇತ್ತೀಚೆಗಷ್ಟೇ ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದ ಗಂಭೀರ್, ಕ್ರಿಕೆಟ್‌ಗೆ ಸಂಬಂಧಿಸಿದ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಕಳೆದ ವಾರವಷ್ಟೇ ಅವರು ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕಾರ ಸ್ವೀಕರಿಸಿದ್ದರು.

English summary
Former Indian opener Gautam Gambhir on Friday joined BJP in the presence of Union ministers Arun Jaitley and ravi Shankar Prasad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X