ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ: ಜನವರಿ 23ರಂದು ಪರಾಕ್ರಮ ದಿವಸವಾಗಿ ಆಚರಣೆ

|
Google Oneindia Kannada News

ನವದೆಹಲಿ, ಜನವರಿ 19: ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಮತ್ತು ಆಜಾದ್ ಹಿಂದ್ ಫೌಜ್ ಸಂಸ್ಥಾಪಕ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆ ಆಚರಣೆಗೆ ಕೇಂದ್ರ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಇದೀಗ ಮಹತ್ವದ ಘೋಷಣೆ ಮಾಡಿದೆ. ಜನವರಿ ಪ್ರತಿ ವರ್ಷ ಜನವರಿ 23 ರಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು 'ಪರಾಕ್ರಮ ದಿವಸ'ವಾಗಿ ಆಚರಿಸಲಿದೆ.

ಈ ಕುರಿತು ಅಧಿಕೃತವಾಗಿ ಪ್ರಕಟಿಸಿರುವ ಸಂಸ್ಕೃತಿ ಸಚಿವಾಲಯ ನೇತಾಜಿ ಸುಭಾಷ್ ಚಂದ್ರ ಬೋಸ್‌ರ ಜನ್ಮದಿನಾಚರಣೆ ಆಚರಣೆ ಕುರಿತಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ.

ಡಿಸೆಂಬರ್ 21ರಂದು ಪ್ರಧಾನಿ ನರೇಂದ್ರ ಮೋದಿಯವರು ಈ ಕುರಿತು ಟ್ವೀಟ್ ಮಾಡಿದ್ದನ್ನು ನಾವು ಇಲ್ಲಿ ಸ್ಮರಿಸಬಹುದು. ''ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಶೌರ್ಯ ಎಲ್ಲರಿಗೂ ತಿಳಿದಿದೆ. ವಿದ್ವಾಂಸ, ಸೈನಿಕ ಮತ್ತು ರಾಜಕಾರಣಿಯಾಗಿದ್ದ ಬೋಸ್ ಅವರ 125ನೇ ಜಯಂತಿ ಆಚರಣೆಯನ್ನು ಶೀಘ್ರದಲ್ಲೇ ಆರಂಭಿಸುತ್ತೇವೆ. ಬೋಸ್ ಜನ್ಮದಿನಾಚರಣೆಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಈ ವಿಶೇಷ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸೋಣ'' ಎಂದು ಮೋದಿ ಟ್ವೀಟ್ ಮಾಡಿದ್ದರು.

Government Has Decided To celebrate the birthday of Netaji on 23rd January, as Parakram Diwas

ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಉನ್ನತ ಮಟ್ಟದ ಸಮಿತಿಯಲ್ಲಿ ತಜ್ಞರು, ಇತಿಹಾಸಕಾರರು, ಬರಹಗಾರರು, ನೇತಾಜಿ ಮತ್ತು ಐಎನ್‌ಎ ಸಹೋದ್ಯೋಗಿಗಳ ಕುಟುಂಬ ಸದಸ್ಯರು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ನೇತಾಜಿ ನೀಡಿದ ಕೊಡುಗೆಗೆ ಹೇಗೆ ಗೌರವ ಸಲ್ಲಿಸುವುದು ಎಂಬುದರ ಕುರಿತು ಚರ್ಚಿಸಲಾಯಿತು.

ಮಾಧ್ಯಮ ವರದಿಗಳ ಪ್ರಕಾರ, ನೇತಾಜಿ ಸುಭಾಷ್ ಚಂದ್ರ ಬೋಸ್‌ಗೆ ಸಂಬಂಧಿಸಿದ ಘಟನೆಗಳು ಅವರ ಜನ್ಮದಿನವಾದ ಜನವರಿ 23 ರಂದು ಪ್ರಾರಂಭವಾಗಲಿವೆ. ವರ್ಷಪೂರ್ತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಬೋಸ್ರ 125 ನೇ ಜನ್ಮದಿನಾಚರಣೆಯನ್ನು ಕೋಲ್ಕತ್ತಾದ ಐತಿಹಾಸಿಕ ವಿಕ್ಟೋರಿಯಾ ಸ್ಮಾರಕ ಸಭಾಂಗಣದಿಂದ ಜನವರಿ 23 ರಂದು ಪ್ರಾರಂಭಿಸಬಹುದು.

English summary
Government of India has decided to celebrate the birthday of Netaji Subhash Chandra Bose, on 23rd January, as 'Parakram Diwas' every year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X