ಸಂಸತ್ತಿನ ಒಳಗೆ,ಹೊರಗೆ ರೈತರ ಸಮಸ್ಯೆ ಚರ್ಚಿಸಲು ಸಿದ್ಧ: ತೋಮರ್
ನವದೆಹಲಿ,ಫೆಬ್ರವರಿ 02: ಸಂಸತ್ತಿನ ಒಳಗೆ ಅಥವಾ ಸಂಸತ್ತಿನ ಹೊರಗೆ ಎಲ್ಲೇ ಆದರೂ ರೈತರ ಸಮಸ್ಯೆ ಕುರಿತು ಚರ್ಚಿಸಲು ಸರ್ಕಾರ ಸಿದ್ಧವಿದೆ ಎಂದು ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ದೆಹಲಿ ಗಡಿಯಲ್ಲಿ ರೈತರು ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.ಇಂದು ಲೋಕಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಪಕ್ಷ ಸದಸ್ಯರು ತೀವ್ರ ಪ್ರತಿಭಟನೆ ನಡೆಸಿದರು. ಪ್ರತಿಪಕ್ಷಗಳ ಕೋಲಾಹಲದಿಂದಾಗಿ ಸದನವನ್ನು ಎರಡು ಬಾರಿ ಮುಂದೂಡಲಾಯಿತು.
ರೈತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಪರಿಸ್ಥಿತಿ ಬ್ರಿಟಿಷ್ ಆಡಳಿತಕ್ಕೆ ಹೋಲುತ್ತದೆ ಎಂದು ಚೌಧರಿ ಆರೋಪಿಸಿದರು.

ಕಾಂಗ್ರೆಸ್, ಡಿಎಂಕೆ, ತೃಣಮೂಲ ಕಾಂಗ್ರೆಸ್, ಎಸ್‌ಪಿ ಮತ್ತು ಬಿಎಸ್‌ಪಿ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ಸದನದ ಬಾವಿಗೆ ನುಗ್ಗಿ ಪ್ರತಿಭಟನೆ ನಡೆಸಿದರು. ಸ್ಪೀಕರ್ ಓಂ ಬಿರ್ಲಾ ಅವರು ತಮ್ಮ ಸ್ಥಾನಗಳಿಗೆ ಹಿಂತಿರುಗುವಂತೆ ಮನವಿ ಮಾಡಿದರೂ ಕೇಳದಿದ್ದಾಗ ಕಲಾಪವನ್ನು ಎರಡು ಬಾರಿ ಮುಂದೂಡಿದರು.
ಸಂಜೆ ಐದು ಗಂಟೆಗೆ ಕಲಾಪ ಮತ್ತೆ ಆರಂಭವಾದಾಗ, ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ಮೋದಿ ಸರ್ಕಾರ ಸದಾ ಸಿದ್ಧವಾಗಿದೆ ಎಂದು ತೋಮರ್ ಹೇಳಿದರು.
ಸಂಸತ್ತಿನ ಒಳಗೆ ಮತ್ತು ಹೊರಗೆ ರೈತರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ಕೇಂದ್ರ ಸಚಿವ ತೋಮರ್ ಅವರು ವಿರೋಧ ಪಕ್ಷಗಳ ಘೋಷಣೆಗಳ ನಡುವೆಯೇ ಹೇಳಿದರು.












Click it and Unblock the Notifications