ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಐವರಿಗೆ ದೇಶ ಬಿಡಲು ಸೂಚನೆ

|
Google Oneindia Kannada News

ನವದೆಹಲಿ, ಮಾರ್ಚ್ 3: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಐವರು ವಿದೇಶಿಯರಿಗೆ ಭಾರತವನ್ನು ಬಿಟ್ಟು ಹೋಗುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿ ನಿಯಮಗಳ ಉಲ್ಲಂಘನೆ ಮಾಡಿದವರ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ.

ಲೋಕಸಭೆಯಲ್ಲಿ ಈ ಕುರಿತು ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಸಿಎಎ ವಿರೋಧಿ ಪ್ರತಿಭಟನೆಯಲ್ಲಿ 5 ವಿದೇಶಿಗಳು ಭಾಗಿಯಾಗಿದ್ದರು. ಈ ಮೂಲಕ ಅವರು ವೀಸಾ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ.

protest

ಆದ್ದರಿಂದ ಅವರನ್ನು ದೇಶ ಬಿಡುವಂತೆ ಸೂಚನೆ ನೀಡಲಾಗುವುದು ಎಂದು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ್ದಾರೆ.

ದೆಹಲಿ ಹಿಂಸಾಚಾರ; ಚರಂಡಿಯಲ್ಲಿ 11 ಶವಗಳು ಪತ್ತೆದೆಹಲಿ ಹಿಂಸಾಚಾರ; ಚರಂಡಿಯಲ್ಲಿ 11 ಶವಗಳು ಪತ್ತೆ

ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಭಾರತದ ನಿಯಮಗಳ ವಿರುದ್ಧವಾಗಿದೆ. ಹಾಗಾಗಿ ಭಾರತವು ಬಿಟ್ಟು ಕೂಡಲೇ ಹೊರಡಿ ಎಂದು ಹೇಳಿದೆ.

ಸಿಎಎ ಪ್ರಕಾರ 2014 ಡಿಸೆಂಬರ್ 31ರೊಳಗೆ ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದಿಂದ ಬಂದ ಹಿಂದೂ, ಸಿಖ್, ಬೌದ್ಧರು, ಜೈನ, ಪಾರ್ಸಿ ಹಾಗೂ ಕ್ರಿಶ್ಚಿಯನ್ ಸಮುದಾಯವರನ್ನು ಅಕ್ರಮ ವಲಸಿಗರು ಎಂದು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಲಾಗಿದೆ.

English summary
Five foreigners were asked to leave India for violating visa norms by participating in anti-citizenship law protests, the Lok Sabha was informed on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X