ಸಿಬಿಐ ಮುಖ್ಯಸ್ಥರ ಹುದ್ದೆ: ಮಹಿಳೆ ಸೇರಿದಂತೆ ಪಟ್ಟಿಯಲ್ಲಿ 11 ಹೆಸರು
Recommended Video

ನವದೆಹಲಿ, ಜನವರಿ 31: ತೀವ್ರ ವಿವಾದದಲ್ಲಿ ಸಿಲುಕಿರುವ ಸಿಬಿಐ ಮುಖ್ಯಸ್ಥರ ಹುದ್ದೆಗೆ ನರೇಂದ್ರ ಮೋದಿ ಅವರ ಸರ್ಕಾರ 11 ಐಪಿಎಸ್ ಅಧಿಕಾರಿಗಳ ಹೆಸರುಗಳನ್ನು ಬುಧವಾರ ಅಂತಿಮಗೊಳಿಸಿದೆ.
ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಒಳಗೊಂಡ ಆಯ್ಕೆ ಸಮಿತಿ ಫೆ. 1ರಂದು ಸಭೆ ನಡೆಸಿ ಮುಖ್ಯಸ್ಥರನ್ನು ಆಯ್ಕೆ ಮಾಡುವ ನಿರೀಕ್ಷೆಯಿದೆ.
ಸಿಬಿಐ ನಿರ್ದೇಶಕರ ಜತೆಗಿನ ಜಗಳ ಮತ್ತು ಲಂಚ ಪಡೆದ ಆರೋಪದಡಿ ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದ್ದ ವಿಶೇಷ ನಿರ್ದೇಶಕ ರಾಕೇಶ್ ಅಸ್ಥಾನಾ ಅವರ ಹೆಸರೂ ಪಟ್ಟಿಯಲ್ಲಿದೆ.

1982-1985ರ ಅವಧಿಯ ಬ್ಯಾಚ್‌ಗಳ ಐಪಿಎಸ್ ಅಧಿಕಾರಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ.
ಪಶ್ಚಿಮ ಬಂಗಾಳ ಮೂಲದವರಾದ ಮಧ್ಯಪ್ರದೇಶ ಕೇಡರ್‌ನ 1983ರ ಬ್ಯಾಚ್ ಅಧಿಕಾರಿ ರೀನಾ ಮಿತ್ರಾ ಅವರ ಹೆಸರು ಮುಂಚೂಣಿಯಲ್ಲಿದೆ ಎನ್ನಲಾಗಿದೆ. ಒಂದು ವೇಳೆ ರೀನಾ ಅವರನ್ನು ಆಯ್ಕೆ ಮಾಡಿದರೆ, ಸಿಬಿಐನ ಮುಖ್ಯಸ್ಥರಾಗಲಿರುವ ಮೊದಲ ಮಹಿಳೆ ಎನಿಸಿಕೊಳ್ಳಲಿದ್ದಾರೆ.
ಕೇಂದ್ರ ಗೃಹ ಸಚಿವಾಲಯದಲ್ಲಿ ವಿಶೇಷ ಕಾರ್ಯದರ್ಶಿಯಾಗಿರುವ (ಆಂತರಿಕ ಭದ್ರತೆ) ಅವರು ಸಿಬಿಐನಲ್ಲಿ ಐದು ವರ್ಷ ಅನುಭವ ಹೊಂದಿದ್ದು, ಯಾವುದೇ ವಿವಾದ ಹೊಂದಿರದ ಕಳಂಕ ರಹಿತ ದಾಖಲೆ ಹೊಂದಿದ್ದಾರೆ.
ಸಿಬಿಐನಲ್ಲಿ ಕೆಲಸ ಮಾಡಿದ ಅನುಭವದ ಆಧಾರದಲ್ಲಿ 11 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಗೃಹಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ರಾಕೇಶ್ ಅಸ್ಥಾನಾ ಅವರು 1984ನೇ ಬ್ಯಾಚ್ ಅಧಿಕಾರಿಯಾಗಿದ್ದು, ಸಿಬಿಐನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಹೀಗಾಗಿ ಅವರ ಹೆಸರು ಪಟ್ಟಿಯಲ್ಲಿದೆ. ಆದರೆ, ಅವರನ್ನು ಸರ್ಕಾರ ಆಯ್ಕೆ ಮಾಡುವುದು ಅನುಮಾನ. ಏಕೆಂದರೆ, ಈಗಾಗಲೇ ವಿವಾದದಿಂದಾಗಿ ಕಸಿವಿಸಿ ಅನುಭವಿಸಿರುವ ಸರ್ಕಾರ ಮತ್ತೆ ಮುಜುಗರಕ್ಕೆ ಸಿಲುಕಲು ಬಯಸಲಾರದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications