ಮೇಲ್ಜಾತಿಗೂ ಮೀಸಲಾತಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ
Recommended Video

ಮೇಲ್ಜಾತಿಗೂ ಮೀಸಲಾತಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ | Oneindia Kannada
ನವದೆಹಲಿ, ಜನವರಿ 11: ಮೇಲ್ಜಾತಿಯಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ಮಹತ್ವದ ನಿರ್ಣಯವನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೂ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10 ರಷ್ಟು ಮೀಸಲಾತಿ ನೀಡುವ ಕೇಂದ್ರ ಸಂಪುಟ ಸಭೆಯ ನಿರ್ಣಯವನ್ನು ಲೋಕಸಭೆ ಮತ್ತು ರಾಜ್ಯ ಸಭೆಯಲ್ಲೂ ಅಂಗೀಕರಿಸಲಾಗಿತ್ತು. ಈ ಸಂಬಂಧ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನೂ ಮಂಡಿಸಲಾಗಿತ್ತು.
ಈ ಮೀಸಲಾತಿ ನಿರ್ಣಯದಿಂದ ಸಂವಿಧಾನವನ್ನು ಉಲ್ಲಂಘಿಸಲಾಗಿದೆ ಎಂದು ದೂರು ಅರ್ಜಿ ಸಲ್ಲಿಸಲಾಗಿದ್ದು, ವಿಚಾರಣೆ ಎಂದು ನಡೆಯಲಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಿಲ್ಲ.

ಕೇಂದ್ರ ಸರ್ಕಾರದ ಈ ನಿರ್ಣಯದಿಂದ ವಾರ್ಷಿಕ ಆದಾಯ 8 ಲಕ್ಷ ರೂ.ಗಿಂತ ಕಡಿಮೆ ಇರುವ ಬ್ರಾಹ್ಮಣ, ರಜಪೂತ್, ಠಾಕೂರ್, ಬನಿಯಾ ,ಪಟೇಲ್, ಗುಜ್ಜರ್ ಹಾಗೂ ಜಾಟ್ ಜಾತಿಗಳಿಗೆ ಈ ಮೀಸಲಾತಿ ಸೌಲಭ್ಯ ಸಿಗಲಿದೆ.












Click it and Unblock the Notifications