ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking News: ನವದೆಹಲಿಯಲ್ಲಿ ಪೆಟ್ರೋಲ್ ದರ 8 ರೂ. ಇಳಿಕೆ

|
Google Oneindia Kannada News

ನವದೆಹಲಿ, ಡಿಸೆಂಬರ್ 1: ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ದರ ಮತ್ತಷ್ಟು ಅಗ್ಗವಾಗಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆ(ವ್ಯಾಟ್) ಅನ್ನು 8 ರೂಪಾಯಿ ಕಡಿತಗೊಳಿಸಿದೆ. ವ್ಯಾಟ್ ತೆರಿಗೆ ನಂತರ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ದರ 95 ರೂಪಾಯಿಗೆ ಇಳಿಕೆಯಾಗಿದೆ.

ಕಳೆದ ತಿಂಗಳು ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತಗೊಳಿಸಿತ್ತು. ಇದರ ಬೆನ್ನಲ್ಲೇ ದೆಹಲಿ ಸರ್ಕಾರವು 8 ರೂಪಾಯಿ ವ್ಯಾಟ್ ಅನ್ನು ಕಡಿತಗೊಳಿಸುವುದರ ಮೂಲಕ ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದೆ.

ಡಿ.01: ಸತತ 27ನೇ ದಿನವೂ ಯಥಾಸ್ಥಿತಿ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ದರಡಿ.01: ಸತತ 27ನೇ ದಿನವೂ ಯಥಾಸ್ಥಿತಿ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ದರ

ದೆಹಲಿ ಸರ್ಕಾರವು ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಶೇಕಡಾ 30 ರಿಂದ 19.40 ಕ್ಕೆ ಇಳಿಸಿದ್ದು, ಪೆಟ್ರೋಲ್ ಬೆಲೆಯನ್ನು 103.97 ರಿಂದ 95.97 ಕ್ಕೆ ತೀವ್ರ ಇಳಿಕೆಗೆ ಕಾರಣವಾಯಿತು ಎಂಬುದು ಉಲ್ಲೇಖಾರ್ಹವಾಗಿದೆ.

 Delhi govt cuts VAT on petrol by Rs 8 per litre

ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಸ್ಥಿರ:

ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಂದು (ಡಿಸೆಂಬರ್ 01, ಬುಧವಾರ) ಸಹ ಯಾವುದೇ ಬದಲಾವಣೆ ಮಾಡಿಲ್ಲ. ಸತತ ಇಪ್ಪತ್ತೇಳನೇ ದಿನವೂ ಇಂಧನ ದರ ಸ್ಥಿರವಾಗಿದೆ. ಇತ್ತೀಚೆಗೆ ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಮಾಡಿದ್ದು, ಭಾರತದಲ್ಲಿ ಇಂಧನ ದರ ಭಾರಿ ಇಳಿಕೆ ಕಂಡಿದೆ. ನವೆಂಬರ್ 4ರಂದು ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಅನೇಕ ರಾಜ್ಯಗಳು ವ್ಯಾಟ್ ಅನ್ನು ಕಡಿಮೆ ಮಾಡಿತ್ತು.

ಕರ್ನಾಟಕದ ರಾಜಧಾನಿಯಲ್ಲಿ ಎಷ್ಟಿದೆ ಇಂಧನ ದರ?:

ಕರ್ನಾಟಕದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

English summary
Delhi govt cuts VAT on petrol by Rs 8 per litre. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X