'ಸಾಮಾನ್ಯ ವಾಟ್ಸಾಪ್ ಬಳಕೆದಾರರು ಹೊಸ ಐಟಿ ನಿಯಮಗಳ ಬಗ್ಗೆ ಭಯಪಡಬೇಕಾಗಿಲ್ಲ' : ರವಿಶಂಕರ್
ನವದೆಹಲಿ, ಮೇ 27: ಗೌಪ್ಯತೆಯ ಹಕ್ಕನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ ಹಾಗೂ ಗೌರವಿಸುತ್ತದೆ. ವಾಟ್ಸಾಪ್‌ನ ಸಾಮಾನ್ಯ ಬಳಕೆದಾರರು ಹೊಸ ಐಟಿ ನಿಯಮದ ಬಗ್ಗೆ ಭಯಪಡಬೇಕಾಗಿಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ಹೇಳಿದ್ದಾರೆ.
ಸರ್ಕಾರದ ಹೊಸ ಐಟಿ ನಿಯಮಗಳು ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ಅಸಂವಿಧಾನಿಕ ಎಂದು ಆರೋಪಿಸಿ ಫೇಸ್‌ಬುಕ್ ಒಡೆತನದ ವಾಟ್ಸಾಪ್ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಕೇಂದ್ರದ ಹೊಸ ಐಟಿ ನಿಯಮಗಳನ್ನು ಪ್ರಶ್ನಿಸಿದೆ.
ಈ ಬೆಳವಣಿಗೆಯ ಬಳಿಕ ಈ ಬಗ್ಗೆ ಸ್ಪಷ್ಟನೆ ನೀಡಿ ಟ್ವೀಟ್ ಮಾಡಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಗೌಪ್ಯತೆಯ ಹಕ್ಕನ್ನು ಸರ್ಕಾರ ಸಂಪೂರ್ಣವಾಗಿ ಪರಿಗಣಿಸುತ್ತದೆ ಹಾಗೂ ಗೌರವಿಸುತ್ತದೆ. ವಾಟ್ಸಾಪ್‌ನ ಸಾಮಾನ್ಯ ಬಳಕೆದಾರರು ಹೊಸ ನಿಯಮಗಳ ಬಗ್ಗೆ ಭಯಪಡಬೇಕಾಗಿಲ್ಲ. ನಿಯಮಗಳಲ್ಲಿ ಉಲ್ಲೇಖಿಸಲಾದ ನಿರ್ದಿಷ್ಟ ಅಪರಾಧಗಳಿಗೆ ಸಂಬಂಧಿಸಿದ ಸಂದೇಶವನ್ನು ಯಾರು ಮೊದಲು ಹಂಚಿಕೊಂಡಿದ್ದಾರೆ ಎಂಬುದನ್ನು ಕಂಡುಹಿಡಿಯುವುದು ಇದರ ಹಿಂದಿನ ಉದ್ದೇಶವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಭಾರತದ ಸಾರ್ವಭೌಮತ್ವ, ಸಮಗ್ರತೆ ಮತ್ತು ಸುರಕ್ಷತೆ, ಸಾರ್ವಜನಿಕ ಸುವ್ಯವಸ್ಥೆ, ಅತ್ಯಾಚಾರ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಅಪರಾಧಗಳಿಗೆ ಸಂಬಂಧಿಸಿದ ಈಗಾಗಲೇ ಚಲಾವಣೆಯಲ್ಲಿರುವ ಆಕ್ರಮಣಕಾರಿ ಸಂದೇಶದ ಮೊದಲ ಮೂಲವನ್ನು ಬಹಿರಂಗಪಡಿಸುವ ನಿಟ್ಟಿನಲ್ಲಿ ಈ ಹೊಸ ಐಟಿ ನಿಯಮಗಳು ರೂಪಿಸಲಾಗಿದೆ. ಅದೂ ಕೂಡಾ ಅಪರಾಧ ಕೃತ್ಯ ಎಸಗಿದವರ ಮೂಲ ಪತ್ತೆ ಹೆಚ್ಚಲು ಇತರ ಯಾವುದೇ ದಾರಿಯಿಲ್ಲ ಎಂಬ ಪರಿಸ್ಥಿತಿಯಲ್ಲಿ ಮಾತ್ರ ಈ ಹೊಸ ನಿಯಮದಡಿ ಮೂಲ ಪತ್ತೆಹಚ್ಚಲಾಗುತ್ತದೆ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸಮಸ್ಯೆಯನ್ನು ಬಗೆಹರಿಸಲು ಲಕ್ಷಾಂತರ ಭಾರತೀಯ ಬಳಕೆದಾರರಿಗೆ ಸಹಾಯವಾಗಲು ಹೊಸ ನಿಯಮಗಳ ಪ್ರಕಾರ ಸಾಮಾಜಿಕ ಮಾಧ್ಯಮ ಕಂಪೆನಿಗಳು ಭಾರತ ಮೂಲದ ಕುಂದುಕೊರತೆ ಪರಿಹಾರ ಅಧಿಕಾರಿ, ನೋಡಲ್ ಅಧಿಕಾರಿ ಹಾಗೂ ಮತ್ತೋರ್ವ ಅಧಿಕಾರಿಯನ್ನು ನೇಮಿಸುವ ಅಗತ್ಯವಿದೆ ಎಂದು ಕೇಂದ್ರ ಸಚಿವರು ಟ್ವೀಟ್‌ನಲ್ಲಿ ಮಾಹಿತಿ ನೀಡಿದ್ದಾರೆ.
ಹೊಸ ನಿಯಮಗಳನ್ನು ಸಾಮಾಜಿಕ ಮಾಧ್ಯಮಗಳ ದುರುಪಯೋಗ ತಡೆಯಲು ಮಾತ್ರ ರೂಪಿಸಲಾಗಿದೆ. ಪ್ರಶ್ನೆಗಳನ್ನು ಕೇಳುವ ಹಕ್ಕು ಜನರಿಗಿದೆ, ಸರ್ಕಾರ ಟೀಕೆಗಳನ್ನು ಸ್ವಾಗತಿಸುತ್ತದೆ. ಸಾಮಾಜಿಕ ಮಾಧ್ಯಮದ ಸಾಮಾನ್ಯ ಬಳಕೆದಾರರು ಸಾಮಾಜಿಕ ಮಾಧ್ಯಮದ ಮೂಲಕ ದೌರ್ಜನ್ಯಕ್ಕೆ ಒಳಗಾದಾಗ ಈ ನಿಯಮಗಳು ಕಾರ್ಯ ರೂಪಕ್ಕೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ.
ಹೊಸ ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳು, 2021 ರ ಫೆಬ್ರವರಿ 25 ರಂದು ಸರ್ಕಾರ ಘೋಷಿಸಿದೆ. ಮೇ 25 ರೊಳಗೆ ಮಾನದಂಡಗಳನ್ನು ಅನುಸರಿಸಲು ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್‌ನಂತಹ ದೊಡ್ಡ ಸಾಮಾಜಿಕ ಮಾಧ್ಯಮ ವೇದಿಕೆಗಳು ಪಾಲಿಸಬೇಕಾಗಿತ್ತು. ಆದರೆ ಈ ನಿಯಮ ಜನ ಸಾಮಾನ್ಯರ ಗೌಪ್ಯತೆಗೆ ಅಪಾಯ ಎಂದು ವಾಟ್ಸಾಪ್ ತನ್ನ ಅರ್ಜಿಯಲ್ಲಿ ಹೈಕೋರ್ಟ್‌ಗೆ ಹೇಳಿದೆ.
(ಒನ್ಇಂಡಿಯಾ ಸುದ್ದಿ)
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications