ಜಿಹಾದಿ ಬರಹ ಅಳಿಸಿದ 32 ವೆಬ್ ತಾಣ ಅನ್‌ಬ್ಲಾಕ್
ನವದೆಹಲಿ, ಜ. 10: ಕರ್ನಾಟಕದಲ್ಲಿ ಮೆಹದಿ ಮಸ್ರೂರ್ ಬಿಸ್ವಾಸ್ ಟ್ವಿಟ್ಟರ್ ಮೂಲಕ ಐಎಸ್ಐಎಸ್ ಪರ ಉಗ್ರವಾದ ಹರಡುತ್ತಿದ್ದ ವಿಷಯ ಹೊರಬಂದ ನಂತರ ಜಿಹಾದ್ ಸಂದೇಶ ಹೊಂದಿದ್ದ ಹಲವು ವೆಬ್‌ಸೈಟ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿತ್ತು.
ಆದರೆ, ಈಗ ಈ ವೆಬ್‌ಸೈಟ್‌ಗಳು ಜಿಹಾದಿ ಸಂದೇಶಗಳನ್ನು ಅಳಿಸಿ ಹಾಕಿವೆ. ಇನ್ನು ಮುಂದೆ ಜಿಹಾದಿ ಬರಹಗಳು ಬರದಂತೆ ಎಚ್ಚರಿಕೆ ವಹಿಸುವುದಾಗಿ ತಿಳಿಸಿವೆ. ಆದ್ದರಿಂದ ಅವುಗಳ ಮೇಲಿದ್ದ ನಿಷೇಧವನ್ನು ಕೇಂದ್ರ ಸರ್ಕಾರ ತೆರವುಗೊಳಿಸಿದೆ. [ಇಂಟರ್ನೆಟ್ ಗೆ ಸೆನ್ಸಾರ್ ಸರಿಯೇ?]

ಈ ವೆಬ್‌ಸೈಟ್‌ಗಳು ಸರ್ಕಾರದ ಜೊತೆ ಸಹಕರಿಸುವುದಾಗಿ ತಿಳಿಸಿರುವ ಕಾರಣ ನಿಷೇಧ ತೆರವುಗೊಳಿಸಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಮಹಾರಾಷ್ಟ್ರ ಉಗ್ರ ನಿಗ್ರಹ ದಳದ ವರದಿಯ ಆಧಾರದಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆಗೆ ಪೂರಕವಾಗಿ ಟೆಲಿಕಾಂ ವಿಭಾಗದ ಕಾಯ್ದೆ 69ಎ ಅನ್ವಯ 32 ವೆಬ್‌ಸೈಟ್‌ಗಳನ್ನು ಬ್ಲಾಕ್ ಮಾಡಲಾಗಿತ್ತು. [ವೆಬ್ ತಾಣಗಳಿಗೆ ಬೀಗ ಹಾಕಿದ್ದು ಏಕೆ?]
"ಭಯೋತ್ಪಾದನೆ ನಿಗ್ರಹ ತಂಡದ ಸಲಹೆ ಮೇರೆಗೆ ವೆಬ್‌ಸೈಟ್‌ಗಳನ್ನು ಬ್ಲಾಕ್ ಮಾಡಲಾಗಿದೆ. ಭಾರತ ವಿರೋಧಿ ಸಂದೇಶಗಳು ಬರದಂತೆ ತಡೆಯುವುದು ಈ ಕ್ರಮದ ಉದ್ದೇಶ" ಎಂದು ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಅರವಿಂದ್ ಗುಪ್ತ ಕೇಂದ್ರ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದರು.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಏಪ್ರಿಲ್ 9ರ ದರಪಟ್ಟಿ












Click it and Unblock the Notifications