• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮದುವೆ ಕಾರ್ಯದ ದಿನ ವರನ ಮೇಲೆ ಗುಂಡಿನ ದಾಳಿ: ಬೆಚ್ಚಿಬಿತ್ತು ದೆಹಲಿ!

|

ನವದೆಹಲಿ, ನವೆಂಬರ್ 20: ಮದುವೆಯ ಸಂಭ್ರಮದಲ್ಲಿದ್ದ ವರನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ರಾಜಧಾನಿ ದೆಹಲಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಇನ್ನೇನು ತಾಳಿ ಕಟ್ಟಬೇಕು ಅನ್ನವಷ್ಟರಲ್ಲಿ ಪ್ರಿಯಕರನ ಎಂಟ್ರಿ, ಮುಂದೇನಾಯ್ತು?

ದೆಹಲಿಯ ಮದನಗಿರ್ ಎಂಬಲ್ಲಿ ಮದುವೆಕಾರ್ಯಗಳು ನಡೆಯುತ್ತಿದ್ದ ಸಮಯದಲ್ಲೇ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ಆರಂಭಿಸಿದ್ದರು. ಸೋಮವಾರ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ವರನನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿದೆ.

ರಿಜಿಸ್ಟರ್ ಮ್ಯಾರೇಜ್ ಆಗಿದ್ದರೂ ಮತ್ತೊಂದು ಮದುವೆ ಮಹೂರ್ತ, ಆಮೇಲಿನ ಕತೆ ಗೊತ್ತಾ?

ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಗುಂಡು ಹಾರಿಸಿದ ನಂತರ ದುಷ್ಕರ್ಮಿಗಳು ಪರಾರಿಯಾಗಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದೇಣು ಮರ್ಯಾದಾ ಹತ್ಯೆಯ ಸಂಚಾ ಅಥವಾ ವೈಯಕ್ತಿಕ ದ್ವೇಷಕ್ಕಾಗಿ ನಡೆದಿದ್ದಾ ಎಂಬ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

English summary
A 25-year old groom was shot by two unidentified bike-borne miscreants in south Delhis Madangir area during his wedding procession on late Monday night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X