Just in: ಗುಜರಾತ್ ಕಳ್ಳಭಟ್ಟಿ ದುರಂತಕ್ಕೆ ರಾಹುಲ್ ಗಾಂಧಿ ಕಳವಳ
ನವದೆಹಲಿ, ಜುಲೈ, 29: ಇತ್ತೀಚಿನ ಗುಜರಾತ್ ಕಳ್ಳಭಟ್ಟಿ ದುರಂತದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜ್ಯದಲ್ಲಿ ಅಕ್ರಮ ಮದ್ಯ ಮತ್ತು ಮಾದಕ ವಸ್ತುಗಳ ವ್ಯವಹಾರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಈ ಪ್ರಕರಣದಲ್ಲಿ ಭಾಗಿಯಾಗಿರುವ "ಮಾಫಿಯಾ" ಗಳಿಗೆ ಆಡಳಿತ ಶಕ್ತಿಗಳು ರಕ್ಷಣೆ ನೀಡುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.
ಜುಲೈ 25 ರಂದು ವಿಷಕಾರಿ ಮದ್ಯ ಸೇವಿಸಿ ಗುಜರಾತ್‌ನ ಬೊಟಾಡ್ ಮತ್ತು ನೆರೆಯ ಅಹಮದಾಬಾದ್ ಜಿಲ್ಲೆಗಳ 42 ಜನರು ಸಾವನ್ನಪ್ಪಿದ್ದಾರೆ. ಜೊತೆಗ 97 ಮಂದಿ ಇನ್ನೂ ಭಾವನಗರ, ಬೊಟಾಡ್ ಮತ್ತು ಅಹಮದಾಬಾದ್‌ನ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ ಎಂದು ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ ಹೇಳಿದ್ದಾರೆ.

'ಡ್ರೈ ಸ್ಟೇಟ್' ಗುಜರಾತ್‌ನಲ್ಲಿ ಅಕ್ರಮ ಮದ್ಯ ಸೇವನೆಯಿಂದಾಗಿ ಹಲವು ಮನೆಗಳು ನಾಶವಾಗಿವೆ. ಅಲ್ಲಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್ ಕೂಡ ನಿರಂತರವಾಗಿ ವಶಪಡಿಸಿಕೊಳ್ಳಲಾಗುತ್ತಿದೆ' ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
"ಬಾಪು (ಮಹಾತ್ಮಾ ಗಾಂಧಿ) ಮತ್ತು ಸರ್ದಾರ್ (ವಲ್ಲಭಭಾಯಿ) ಪಟೇಲ್ ಅವರ ನಾಡಿನಲ್ಲಿ, ವಿವೇಚನೆಯಿಲ್ಲದೆ ಮದ್ಯದ ವ್ಯವಹಾರವನ್ನು ಮಾಡುತ್ತಿರುವ ಇವರು ಯಾರು?" ಎಂದು ಪ್ರಶನಿಸಿರುವ ಅವರು, ಇದು ಅತ್ಯಂತ ಕಳವಳಕಾರಿ ವಿಷಯವಾಗಿದೆ ಎಂದಿದ್ದಾರೆ.
ಜೊತೆಗೆ ಯಾವ ಆಡಳಿತ ಶಕ್ತಿಗಳು ಈ ಮಾಫಿಯಾಗಳಿಗೆ ರಕ್ಷಣೆ ನೀಡುತ್ತಿವೆ ಎಂದು ಪ್ರಶ್ನಿಸಿದ್ದಾರೆ.
Recommended Video
ಈ ಪ್ರಕರಣದಲ್ಲಿ ಅಕ್ರಮ ಮದ್ಯ ತಯಾರಿಸಿದವರು ಮತ್ತು ಜನರಿಗೆ ಅದನ್ನು ಮದ್ಯವನ್ನು ಮಾರಾಟ ಮಾಡಿದವರು ಸೇರಿದಂತೆ 15 ಪ್ರಮುಖ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಗುಜರಾತ್ ಗೃಹ ಇಲಾಖೆ ಗುರುವಾರ ಬೊಟಾಡ್ ಮತ್ತು ಅಹಮದಾಬಾದ್ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಆರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications