ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕಾಂಗ್ರೆಸ್‌ಗೆ ಗುಲಾಂ ನಬಿ ಆಜಾದ್ ರಾಜೀನಾಮೆ!

|
Google Oneindia Kannada News

ನವದೆಹಲಿ, ಆಗಸ್ಟ್ 26: ಕಾಂಗ್ರೆಸ್‌ಗೆ ಭಾರಿ ಆಘಾತಕಾರಿಯಾಗಿ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಮಾಜಿ ಕೇಂದ್ರ ಸಚಿವ ಗುಲಾಂ ನಬಿ ಆಜಾದ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಗುಲಾಂ ನಬಿ ಆಜಾದ್ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ.

ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಗುಲಾಂ ನಬಿ ಆಜಾದ್ ಗುಡ್ ಬೈ!ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಗುಲಾಂ ನಬಿ ಆಜಾದ್ ಗುಡ್ ಬೈ!

ರಾಜೀನಾಮೆ ಪತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು "ಗಂಭೀರತೆಯಿಲ್ಲದ ಮತ್ತು ಅಪಕ್ವ" ಎಂದು ಕರೆದಿದ್ದಾರೆ. ಜೊತೆಗೆ ಪಕ್ಷದಲ್ಲಿನ "ಸಮಾಲೋಚನಾ ಕಾರ್ಯವಿಧಾನವನ್ನು ಹಾಳು ಮಾಡಲಾಗಿದೆ" ಎಂದು ಅಸಮಾಧಾನ ಹೊರಹಾಕಿದ್ದಾರೆ.

ದೀರ್ಘ ಪತ್ರದಲ್ಲಿ, ಸೋನಿಯಾ ಗಾಂಧಿ ಕೇವಲ ನಾಮಮಾತ್ರದ ವ್ಯಕ್ತಿ. ಆದರೆ, ಪ್ರಮುಖ ನಿರ್ಧಾರಗಳನ್ನು "ರಾಹುಲ್ ಗಾಂಧಿ ಅಥವಾ ಅವರ ಭದ್ರತಾ ಸಿಬ್ಬಂದಿ ಅಥವಾ ವೈಯಕ್ತಿಕ ಸಹಾಯಕರು ತೆಗೆದುಕೊಂಡಿದ್ದಾರೆ. 2014 ರ ರಾಷ್ಟ್ರೀಯ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ತಮ್ಮ ಮಗ ರಾಹುಲ್ ಕಾರಣ ಎಂದು ದೂಷಿಸಿದ್ದಾರೆ.

73 ವರ್ಷದ ಹಿರಿಯ ನಾಯಕ, ಕಾಂಗ್ರೆಸ್ ತನ್ನ ರಾಜಕೀಯ ಜಾಗವನ್ನು ಬಿಜೆಪಿ ಮತ್ತು ಪ್ರಾದೇಶಿಕ ಪಕ್ಷಗಳಿಗೆ ಬಿಟ್ಟುಕೊಟ್ಟಿದೆ ಎಂದು ಹೇಳಿದರು "ಏಕೆಂದರೆ ಕಳೆದ ಎಂಟು ವರ್ಷಗಳಲ್ಲಿ ನಾಯಕತ್ವವು ಗಂಭೀರತೆಯಿಲ್ಲದ ವ್ಯಕ್ತಿಯನ್ನು ಪಕ್ಷದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸಿದೆ".

Gulam Nabi Azad resigns from the primary membership of the Congress Party

"ದುರದೃಷ್ಟವಶಾತ್, ರಾಹುಲ್ ಗಾಂಧಿಯವರು ರಾಜಕೀಯಕ್ಕೆ ಪ್ರವೇಶಿಸಿದ ನಂತರ, ವಿಶೇಷವಾಗಿ ಜನವರಿ 2013 ರ ನಂತರ, ಅವರು ನಿಮ್ಮಿಂದ ಉಪಾಧ್ಯಕ್ಷರಾಗಿ ನೇಮಕಗೊಂಡಾಗ, ಮೊದಲು ಅಸ್ತಿತ್ವದಲ್ಲಿದ್ದ ಸಂಪೂರ್ಣ ಸಮಾಲೋಚನಾ ಕಾರ್ಯವಿಧಾನವನ್ನು ಅವರು ಕೆಡವಿ ಹಾಕಿದ್ದಾರೆ" ಎಂದು ಆಜಾದ್ ಬರೆದಿದ್ದಾರೆ.

ಎಲ್ಲಾ ಹಿರಿಯ ಮತ್ತು ಅನುಭವಿ ನಾಯಕರನ್ನು ಬದಿಗೆ ಸರಿಸಲಾಗಿದೆ ಎಂದು ಆರೋಪಿಸಿದ್ದಾರೆ.

"ಆದ್ದರಿಂದ ಬಹಳ ವಿಷಾದ ಮತ್ತು ಅತ್ಯಂತ ಭಾರವಾದ ಹೃದಯದಿಂದ ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನೊಂದಿಗೆ ನನ್ನ ಅರ್ಧ ಶತಮಾನದ ಹಳೆಯ ಒಡನಾಟವನ್ನು ಕಡಿದುಕೊಳ್ಳಲು ನಿರ್ಧರಿಸಿದೆ" ಎಂದು ನೋವಿನಿಂದ ರಾಜೀನಾಮೆ ಪತ್ರ ಬರೆದಿದ್ದಾರೆ.

"2014 ರಿಂದ ನಿಮ್ಮ ಸಾರಥ್ಯದಲ್ಲಿ ಮತ್ತು ನಂತರ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ, ಕಾಂಗ್ರೆಸ್ ಎರಡು ಲೋಕಸಭಾ ಚುನಾವಣೆಗಳನ್ನು ಅವಮಾನಕರ ರೀತಿಯಲ್ಲಿ ಸೋತಿದೆ. 2014-2022 ರ ನಡುವೆ ನಡೆದ 49 ವಿಧಾನಸಭಾ ಚುನಾವಣೆಗಳಲ್ಲಿ 39 ರಲ್ಲಿ ಸೋತಿದೆ. ಪಕ್ಷವು ಕೇವಲ ನಾಲ್ಕು ರಾಜ್ಯಗಳ ಚುನಾವಣೆಗಳನ್ನು ಗೆದ್ದಿದೆ ಮತ್ತು ಆರು ಸಂದರ್ಭಗಳಲ್ಲಿ ಸಮ್ಮಿಶ್ರ ಸರಕಾರ ನಡೆಸುವ ಪರಿಸ್ಥಿತಿಗೆ ಬಂದಿದೆ. ದುರದೃಷ್ಟವಶಾತ್, ಇಂದು ಕಾಂಗ್ರೆಸ್ ಕೇವಲ ಎರಡು ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿದೆ" ಎಂದಿದ್ದಾರೆ.

ಆಜಾದ್ ಅವರು G-23 ಗುಂಪಿನ ಪ್ರಮುಖ ಸದಸ್ಯರಾಗಿದ್ದಾರೆ. 2020 ರಲ್ಲಿ ಸೋನಿಯಾ ಗಾಂಧಿಗೆ ಪತ್ರ ಬರೆದು ಸಂಘಟನೆಯ ಸಂಪೂರ್ಣ ಕೂಲಂಕುಷ ಪರೀಕ್ಷೆ ಮತ್ತು ಪೂರ್ಣ ಸಮಯ, ಸಾಮೂಹಿಕ ನಾಯಕತ್ವಕ್ಕೆ ಕರೆ ನೀಡಿದರು.

ಆ ಪತ್ರದ ನಂತರ, ತನ್ನ ಮೇಲೆ ಆಕ್ರಮಣ, ನಿಂದನೆ ಮತ್ತು ಅತ್ಯಂತ ಅಸಭ್ಯ ರೀತಿಯಲ್ಲಿ ಅವಮಾನಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅಣಕು ಶವಸಂಸ್ಕಾರವನ್ನು ನಡೆಸಲಾಯಿತು. ಇದರ ಹಿಂದಿರುವವರನ್ನು "ರಾಹುಲ್ ಗಾಂಧಿಯವರು ವೈಯಕ್ತಿಕವಾಗಿ ಗೌರವಿಸಿದರು" ಎಂದು ಆಜಾದ್ ಅಸಮಾಧಾನ ಹೊರಹಾಕಿದ್ದಾರೆ.

ಇತ್ತಿಚೆಗೆ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್, ನೇಮಕವಾದ ಕೆಲವೇ ಗಂಟೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್‌ನ ರಾಜಕೀಯ ವ್ಯವಹಾರಗಳ ಸಮಿತಿ ಮತ್ತು ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಂದೇ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಾಭಿಪ್ರಾಯವಿದೆ ಎಂಬ ವದಂತಿಗಳಿಗೆ ಪುಷ್ಠಿ ನೀಡಿತ್ತು.

English summary
Congress leader Ghulam Nabi Azad resigns from all positions including primary membership of Congress Party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X