ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್-19 ಲಸಿಕೆ ಲಭ್ಯತೆ ಬಗ್ಗೆ ಡಾ. ಹರ್ಷವರ್ಧನ್ ಘೋಷಣೆ

|
Google Oneindia Kannada News

ನವದೆಹಲಿ, ಅಕ್ಟೋಬರ್.13: ಕೊರೊನಾವೈರಸ್ ಸೋಂಕಿನ ವಿರುದ್ಧ ಹೋರಾಡುವ ಲಸಿಕೆ ಯಾವಾಗ ಸಿಗುತ್ತದೆಯೋ ಎಂದು ಇಡೀ ಜಗತ್ತು ಎದುರು ನೋಡುತ್ತಿದೆ. ವಿಶ್ವದಲ್ಲೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಎರಡನೇ ರಾಷ್ಟ್ರ ಎನಿಸಿರುವ ಭಾರತದಲ್ಲಿ ಲಸಿಕೆ ವಿತರಣೆಗೆ ಯೋಜನೆ ರೂಪಿಸಲಾಗುತ್ತಿದೆ.

2021ರ ಆರಂಭದ ಹೊತ್ತಿಗೆ ಕೊರೊನಾವೈರಸ್ ಸೋಂಕಿಗೆ ಲಸಿಕೆ ಸಿಗುತ್ತದೆ. ದೇಶದಲ್ಲಿ ಲಸಿಕೆ ವಿತರಣೆಯನ್ನು ಹೇಗೆ ರೂಪಿಸಬೇಕು ಎಂಬುದರ ಬಗ್ಗೆ ತಜ್ಞರು ಪ್ರಸ್ತುತ ಯೋಜನೆಗಳನ್ನು ರೂಪಿಸುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

ಭಾರತದಲ್ಲಿ ಕೊವಿಡ್ ಲಸಿಕೆ ವಿತರಣೆಗೂ ಮುನ್ನ ಈ ವ್ಯವಸ್ಥೆ ಬೇಕೇ ಬೇಕುಭಾರತದಲ್ಲಿ ಕೊವಿಡ್ ಲಸಿಕೆ ವಿತರಣೆಗೂ ಮುನ್ನ ಈ ವ್ಯವಸ್ಥೆ ಬೇಕೇ ಬೇಕು

"ಮುಂದಿನ ವರ್ಷದ ಆರಂಭದಲ್ಲಿ ಒಂದಕ್ಕಿಂತ ಹೆಚ್ಚು ಮೂಲಗಳಿಂದ ಕೊರೊನಾವೈರಸ್ ಲಸಿಕೆ ಹೊಂದಿರಬೇಕು ಎಂದು ನಿರೀಕ್ಷಿಸುತ್ತಿದ್ದೇವೆ. ನಮ್ಮ ತಜ್ಞರ ತಂಡವು ಲಸಿಕೆ ವಿತರಣೆ ಹೇಗಿರಬೇಕು ಎಂದು ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದಾರೆ" ಎಂದು ಸಚಿವ ಹರ್ಷವರ್ಧನ್ ಹೇಳಿದ್ದಾರೆ.

Harsh Vardhan Makes Big Announcement Over Availability Of COVID-19 Vaccine In India

ಭಾರತದಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆ:

ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 71 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 55342 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 7175881ಕ್ಕೆ ಏರಿಕೆಯಾಗಿದೆ. ಒಂದೇ ದಿನ 706 ಮಂದಿ ಕೊವಿಡ್-19 ಸೋಂಕಿಗೆ ಬಲಿಯಾಗಿದ್ದು, ಈವರೆಗೂ ಮೃತಪಟ್ಟವರ ಸಂಖ್ಯೆಯು 109856ಕ್ಕೆ ಏರಿಕೆಯಾಗಿದೆ. 6227296 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ದೇಶದಲ್ಲಿ 838729 ಸಕ್ರಿಯ ಪ್ರಕರಣಗಳಿವೆ.

English summary
Harsh Vardhan Makes Big Announcement Over Availability Of COVID-19 Vaccine In India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X