2021ರ ಆರಂಭದಲ್ಲಿ ಭಾರತಕ್ಕೆ ಕೊರೊನಾ ಲಸಿಕೆ ಸಿಗುವ ನಿರೀಕ್ಷೆ: ಹರ್ಷವರ್ಧನ್

ನವದೆಹಲಿ, ಸೆಪ್ಟೆಂಬರ್ 17: ಭಾರತಕ್ಕೆ 2021ರ ಆರಂಭದಲ್ಲಿ ಕೊರೊನಾ ಲಸಿಕೆ ಲಭ್ಯವಾಗುವ ನಿರೀಕ್ಷೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಈ ಕುರಿತು ಹರ್ಷವರ್ಧನ್ ಈ ಹೇಳಿಕೆ ನೀಡಿದ್ದಾರೆ. ನಿತ್ಯ ಸರಾಸರಿ 90 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಈ ನಡುವೆ ಲಸಿಕೆ ಕಂಡು ಹಿಡಿಯಲು ಸಂಶೋಧನೆಗಳೂ ಕೂಡ ತೀವ್ರಗೊಂಡಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ತಜ್ಞರ ತಂಡ ಸಂಶೋಧನೆ ನಡೆಸುತ್ತಿದೆ. ನಮ್ಮಲ್ಲಿ ಸುಧಾರಿತ ಯೋಜನೆಗಳಿದ್ದು, ಮುಂದಿನ ವರ್ಷದ ಆರಂಬದ ವೇಳೆಗೆ ಭಾರತದಲ್ಲಿ ಲಸಿಕೆ ಲಭ್ಯವಾಗುವ ನಿರೀಕ್ಷೆಗಳಿವೆ ಎಂದು ಹೇಳಿದ್ದಾರೆ.

Harsh Vardhan Says Hopeful Of Coronavirus Vaccine In India By Beginning Of 2021

ಬಹುತೇಕ ರಾಷ್ಟ್ರಗಳು ಸತತ ಯತ್ನಗಳನ್ನು ನಡೆಸುತ್ತಿದ್ದು, ಇದೇ ವೇಳೆ ಭಾರತದಲ್ಲಿ ಲಸಿಕೆ ಬಿಡುಗಡೆ ಕುರಿತು ಕೇಂದ್ರ ಸರ್ಕಾರ ಮಹತ್ವದ ಸುಳಿವು ನೀಡಿದೆ. ಲಸಿಕೆ ಕಂಡು ಹಿಡಿಯಲು ಇತರೆ ರಾಷ್ಟ್ರಗಳಂತೆ ಭಾರತ ಕೂಡ ಸತತ ಪ್ರಯತ್ನಗಳನ್ನು ನಡೆಸುತ್ತಿದೆ.

ಈಗಾಗಲೇ ದೇಶದಲ್ಲಿ ಕೊರೊನಾ ಸೋಂಕು ಸಂಖ್ಯೆ 51 ಲಕ್ಷ ಗಡಿದಾಟಿದ್ದು ಸಾವಿನ ಸಂಖ್ಯೆ ಕೂಡ 83 ಸಾವಿರ ಗಡಿ ದಾಟಿದೆ. ಕೊರೊನಾ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ.

ಈ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಸಚಿವ ರಾಜ್ಯಸಭೆಯಲ್ಲಿ ದೇಶದ ಕೊರೊನಾ ಪರಿಸ್ಥಿತಿ ಕುರಿತಂತೆ ಪ್ರತಿಕ್ರಿಯೆ ನೀಡಿದ್ದು, ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.

Recommended Video

      ಚಳಿಗಾಲದಲ್ಲು ಯುದ್ಧ ಮಾಡೋಕೆ Ready ..China ನಾ ಸುಮ್ನೆ ಬಿಡಲ್ಲಾ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+