ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹತ್ರಾಸ್ ಘಟನೆ ಬಗ್ಗೆ ಸಿಎಂ ಅರವಿಂದ್ ಕೇಜ್ರಿವಾಲ್ ವಿಷಾದ

|
Google Oneindia Kannada News

ನವದೆಹಲಿ, ಅಕ್ಟೋಬರ್.02: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಘಟನೆಯು ತುಂಬಾ ನೋವಿನ ಸಂಗತಿಯಾಗಿದೆ ಎಂದು ನವದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿಷಾದ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಮೃತ ಯುವತಿ ಸಂಬಂಧಿಕರ ಜೊತೆಗೆ ಉತ್ತರಪ್ರದೇಶ ಸರ್ಕಾರ ಮತ್ತು ಪೊಲೀಸರು ನಡೆದುಕೊಂಡ ರೀತಿಯು ಸರಿಯಾಗಿಲ್ಲ ಎಂದು ದೂಷಿಸಿದ್ದಾರೆ.

ಹತ್ರಾಸ್‌ಗೆ ಹೊರಟಿದ್ದ ರಾಹುಲ್, ಪ್ರಿಯಾಂಕಾ ಬಂಧನಹತ್ರಾಸ್‌ಗೆ ಹೊರಟಿದ್ದ ರಾಹುಲ್, ಪ್ರಿಯಾಂಕಾ ಬಂಧನ

ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜೀವಿಸುತ್ತಿರುವುದನ್ನು ಎಲ್ಲರೂ ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಇಲ್ಲಿ ಪ್ರಜೆಗಳೇ ಪ್ರಭುಗಳು ಆಗಿರುತ್ತಾರೆ ಎನ್ನುವುದನ್ನು ಮರೆಯಬಾರದು. ಪ್ರಜೆಗಳ ತೀರ್ಮಾನವೇ ಅಂತಿಮವಾಗಿರುತ್ತದೆ. ಇಂಥ ವ್ಯವಸ್ಥೆಯಲ್ಲಿ ನೀವೇಲ್ಲ ಸೇವಕರೇ ಹೊತರೂ ಮಾಲೀಕರಲ್ಲ ಎಂಬುದನ್ನು ಮರೆತು ವರ್ತಿಸಕೂಡದು ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

Hathras Incident Is Very Painful And Govt Conduct With The Victims Family Is Not Right: CM Kejriwal

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ:

ಕಳೆದ ಸಪ್ಟೆಂಬರ್.14ರಂದು ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಹುಲ್ಲು ಕತ್ತರಿಸುತ್ತಿದ್ದ ಯುವತಿಯನ್ನು ಅಪಹರಿಸಿದ ದುಷ್ಕರ್ಮಿಗಳು ಅತ್ಯಾಚಾರ ನಡೆಸಿದ್ದರು. ಇಷ್ಟಕ್ಕೆ ಸುಮ್ಮನಾಗದೇ ಯುವತಿ ಕತ್ತು ಹಿಸುಕಿ, ನಾಲಗೆ ಕತ್ತರಿಸುವ ಮೂಲಕ ಕ್ರೌರ್ಯ ಮೆರೆದಿದ್ದರು. ಎರಡು ವಾರ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ದಲಿತ ಯುವತಿ ಮಂಗಳವಾರ ನವದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆದಲ್ಲಿ ಕೊನೆಯುಸಿರೆಳೆದಿದ್ದಳು. ಬುಧವಾರ ಮಧ್ಯರಾತ್ರಿ 2.30ರ ಸಂದರ್ಭದಲ್ಲಿ ಪೊಲೀಸರೇ ಯುವತಿಯ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ್ದರು.

English summary
Hathras Incident Is Very Painful And Govt Conduct With The Victim's Family Is Not Right: Says Delhi CM Arvind Kejriwal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X