ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ, ಸ್ಪಷ್ಟ ಸಂದೇಶ ರವಾನಿಸಿದ ಮೋದಿ
ನವದೆಹಲಿ, ಜುಲೈ 16 : ಗೋ ರಕ್ಷಣೆ ಹೆಸರಿಲ್ಲಿ ಹಿಂಸಾಚಾರ, ಹತ್ಯೆ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗೋ ರಕ್ಷಕರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ ಮಾಡುವುದನ್ನು ಕೇಂದ್ರ ಸರ್ಕಾರ ಸಹಿಸುವುದಿಲ್ಲ. ಕೂಡಲೇ ಇಂತಹ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ದೆಹಲಿಯಲ್ಲಿ ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಮೋದಿ ಅವರು ರಾಜ್ಯ ಸರ್ಕಾರಗಳಿಗೆ ಸೂಚಿಸಿದರು.

ಈ ಬಗ್ಗೆ ಕೇಂದ್ರ ಸಚಿವರಾದ ಅನಂತ್ ಕುಮಾರ್ ಹಾಗೂ ಮುಕ್ತಾರ್ ಅಬ್ಬಾಸ್ ನಖ್ವಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಗೋರಕ್ಷಣೆ ಹೆಸರಲ್ಲಿ ಹಿಂಸಾಚಾರಕ್ಕಿಳಿಯುವುದನ್ನು ಕೇಂದ್ರ ಸರ್ಕಾರ ಸಹಿಸುವುದಿಲ್ಲ.
ಗೋರಕ್ಷಣೆ ಹಿಂಸಾಚಾರಕ್ಕೆ ರಾಜಕೀಯ ಬಣ್ಣ ಬಳಿಯದಂತೆ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಮನವಿ ಮಾಡಿದರು, ಇಂತಹ ಕೃತ್ಯಗಳಿಂದ ದೇಶಕ್ಕಾಗುವ ಲಾಭವೇನೂ ಇಲ್ಲ ಎಂದು ಅವರು ಹೇಳಿದ್ದಾರೆ.
PM Modi directs State Govts. to fight against violence in name of cow vigilantism
— ANI Digital (@ani_digital) July 16, 2017
Read @ANI_news story | https://t.co/poKYYgEDAY pic.twitter.com/4yXzHFyLKw
Recommended Video

ಹಿಂಸಾಚಾರಿಗಳ ವಿರುದ್ಧ ಸೂಕ್ತ ಕ್ರಮ ಹಾಗೂ ತನಿಖೆ ನಡೆಸುವುದಾಗಿ ಕೇಂದ್ರ ಸರ್ಕಾರ ಆಶ್ವಾಸನೆ ನೀಡಿದೆ ಎಂದು ಅನಂತ್ ಕುಮಾರ್ ಹೇಳಿದರು.












Click it and Unblock the Notifications