ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರ್ಥಿಕ ಕುಸಿತ: ಕೇಂದ್ರ ಸರ್ಕಾರದ ಮೇಲೆ ನಂಬಿಕೆ ಇದೆ ಎಂದ ಕೇಜ್ರಿವಾಲ್

|
Google Oneindia Kannada News

Recommended Video

ಮೋದಿ ಬಗ್ಗೆ ಕೇಜ್ರಿವಾಲ್ ಹೇಳಿದ ಮಾತು ಕೇಳಿ ಎಲ್ಲರೂ ಶಾಕ್..? | arvind kejriwal

ನವದೆಹಲಿ, ಆಗಸ್ಟ್ 24: ದೇಶದಾದ್ಯಂತ ಆತಂಕ ಮೂಡಿಸಿರುವ ಆರ್ಥಿಕ ಕುಸಿತದ ಸಮಸ್ಯೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂಬ ಸಂಪೂರ್ಣ ನಂಬಿಕೆ ಇದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಆರ್ಥಿಕತೆಗೆ ಜೀವ ತುಂಬಲು ಹಲವು ಘೋಷಣೆ ಮಾಡಿದ ನಿರ್ಮಲಾ ಸೀತಾರಾಮನ್ಆರ್ಥಿಕತೆಗೆ ಜೀವ ತುಂಬಲು ಹಲವು ಘೋಷಣೆ ಮಾಡಿದ ನಿರ್ಮಲಾ ಸೀತಾರಾಮನ್

ದೆಹಲಿಯಲ್ಲಿ ಶುಕ್ರವಾರ ಕಾರ್ಯಕ್ರಮವೊಂದರ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಆರ್ಥಿಕತೆಯನ್ನು ಸರಿದಾರಿಗೆ ತರಲು ಇಡೀ ದೇಶ ಒಂದಾಗಿ ನಿಲ್ಲಬೇಕಾಗಿರುವ ಸಮಯ ಎಂದು ಹೇಳಿದರು.

'ನನಗೆ ಈ ಸಂದರ್ಭದಲ್ಲಿ ಸಂಪೂರ್ಣ ಭರವಸೆ ಇದೆ. ಆರ್ಥಿಕ ಕುಸಿತದ ಬಿಕ್ಕಟ್ಟನ್ನು ಸರಿಪಡಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ. ಈಗ ಇಡೀ ದೇಶ ಒಗ್ಗಟ್ಟಾಗಿ ನಿಂತು ಆರ್ಥಿಕತೆಯನ್ನು ಸರಿಪಡಿಸುವ ಕಾಲ' ಎಂದು ಅಭಿಪ್ರಾಯಪಟ್ಟರು.

Have Full Faith On Central Government: Arvind Kejriwal Economic Slowdown

'ಆರ್ಥಿಕತೆಯನ್ನು ಸರಿಪಡಿಸಲು ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳಲಿ ಅದಕ್ಕೆ ದೆಹಲಿ ಸರ್ಕಾರವು ಸಂಪೂರ್ಣ ಬೆಂಬಲ ನೀಡಲಿದೆ. ಉದ್ಯೋಗ ನಷ್ಟದ ಬಗ್ಗೆ ನಾನು ವೈಯಕ್ತಿಕವಾಗಿ ಆತಂಕಕ್ಕೆ ಒಳಗಾಗಿದ್ದೇನೆ' ಎಂದು ಹೇಳಿದರು.

'ಇದು ಅತ್ಯಂತ ಕಳವಳಕಾರಿ ಸಂಗತಿ. ಅದರಲ್ಲಿಯೂ ಮುಖ್ಯವಾಗಿ ಆಟೊಮೊಬೈಲ್ ಉದ್ಯಮ, ಜವಳಿ, ರಿಯಲ್ ಎಸ್ಟೇಟ್ ಮತ್ತು ಇತರೆ ವಲಯಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿವೆ. ಈ ವಲಯಗಳಲ್ಲಿನ ಆರ್ಥಿಕ ಬಿಕ್ಕಟ್ಟು ತೀವ್ರವಾಗಿವೆ' ಎಂದು ತಿಳಿಸಿದರು.

English summary
Delhi Chief Minister Arvind Kejriwal said that, he has full faith on the central government that will take concrete steps on economic slowdown.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X