ರಾಹುಲ್ ಗಾಂಧಿ ಭೇಟಿಯಾಗಿ ಸಿದ್ದು ವಿರುದ್ಧ ದೂರು ನೀಡಿದ ಗೌಡ್ರು!
Recommended Video
ನವದೆಹಲಿ, ಜೂನ್ 11: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಜೆಡಿಎಸ್ ಸುಪ್ರಿಮೋ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಸೋಮವಾರ ನವದೆಹಲಿಯಲ್ಲಿ ಭೇಟಿಯಾಗಿದ್ದು ಯಾಕೆ ಎಂಬ ಬಗ್ಗೆ ಕುತೂಹಲ ಸೃಷ್ಟಿಯಾಗಿದೆ.
ದೇವೇಗೌಡ ಅವರು ರಾಹುಲ್ ಗಾಂಧಿ ಆವರನ್ನು ಭೇಟಿ ಮಾಡಿ ರಾಜ್ಯ ಕಾಂಗ್ರೆಸ್ ನ ಕೆಲವು ನಾಯಕರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.
ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದ ಕಳಪೆ ಪ್ರದರ್ಶನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು ದೇವೇಗೌಡರು ರಾಹುಲ್ ಗಾಂಧಿ ಅವರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಸಚಿವ ಸಂಪುಟದ ನಿರ್ಧಾರಗಳ ಬಗ್ಗೆ ಕೆಲವು ಕಾಂಗ್ರೆಸ್ ನ ಹಿರಿಯ ನಾಯಕರೇ ಟೀಕೆ ಮಾಡುತ್ತಿರುವ ಬಗ್ಗೆಯೂ ಅವರು ಬೇಸರ ವ್ಯಕ್ತಪಡಿಸಿದರು.
ಸಚಿವ ಸಂಪುಟ ವಿಸ್ತರಣೆಯ ಬಗ್ಗೆಯೇ ಪ್ರಮುಖವಾಗಿ ಚರ್ಚೆ ನಡೆದಿದೆ ಎನ್ನಲಾಗಿದ್ದು, ಹಿರಿಯ ನಾಯಕರಾದ ರಾಮಲಿಂಗಾ ರೆಡ್ಡಿ ಮತ್ತು ರೋಷನ್ ಬೇಗ್ ಸಂಪುಟ ವಿಸ್ತರಣೆಯ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನದ ಹೇಳಲಿಕೆ ನೀಡಿದ್ದರ ಬಗ್ಗೆ ಕಾಗ್ರೆಸ್ ನಾಯಕರ ಗಮನ ಸೆಳೆದರು ಎನ್ನಲಾಗಿದೆ.












Click it and Unblock the Notifications