ನವದೆಹಲಿಯಲ್ಲಿ ಹೆಚ್.ಡಿ.ಕುಮಾರಸ್ವಾಮಿ-ಬಿಹಾರ ಸಿಎಂ ನಿತೀಶ್ ಕುಮಾರ್ ಮಹತ್ವದ ಭೇಟಿ

ನವದೆಹಲಿ, ಸೆ.6: ಬಿಜೆಪಿ ಜೊತೆ ಮೈತ್ರಿ ತೊರೆದು ಆರ್‌ಜೆಡಿ ಜೊತೆ ಸರ್ಕಾರ ರಚಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೆ ತೃತೀಯ ರಂಗದ ರಚನೆಯ ಕಾರ್ಯದಲ್ಲಿ ನಿರತರಾಗಿದ್ದಾರೆ. ಇತ್ತೀಚೆಗೆ ಅವರು ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಅವರನ್ನು ಭೇಟಿ ಮಾಡಿದ್ದಾರೆ. ಈ ಮಧ್ಯೆ ಸೋಮವಾರ ರಾತ್ರಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ನವದೆಹಲಿಯಲ್ಲಿ ಸೋಮವಾರ ಸಂಜೆ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರ ನಿವಾಸದಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಎಚ್‌ಡಿ ಕುಮಾರಸ್ವಾಮಿ ಕೆಲ ಕಾಲ ಮಾತುಕತೆ ನಡೆಸಿದರು. ಸಭೆಯಲ್ಲಿ ರಾಜ್ಯದ ಜೆಡಿಎಸ್‍ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ರಾಜ್ಯದ ಜೆಡಿಯು ಅಧ್ಯಕ್ಷ ಮಹಿಮಾ ಪಟೇಲ್ ಸಹ ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಕುಮಾರಸ್ವಾಮಿ ಅವರು, "ಜನತಾ ಪರಿವಾರ ಒಗ್ಗೂಡುವ ಬಗ್ಗೆ ಮಾತುಕತೆ ನಡೆಯಿತು. ಕೆಲ ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ನಂತರ ಮತ್ತೆ ಈ ಚರ್ಚೆಗೆ ಚಾಲನೆ ಸಿಕ್ಕಿದೆ. ಜಯಪ್ರಕಾಶ ನಾರಾಯಣ್ ಅವರಿಂದ ಪ್ರಾರಂಭವಾದ ಜನತಾ ಪರಿವಾರ ಮತ್ತೆ ಒಂದುಗೂಡಬೇಕಿದೆ. ಈಗ ದೇಶದಲ್ಲಿ ಬಲವಾದ ವಿಪಕ್ಷದ ಅವಶ್ಯಕತೆ ಇದೆ," ಎಂದು ಅವರು ಅಭಿಪ್ರಾಯಪಟ್ಟರು.

HD Kumaraswamy and Bihar CM Nitish Kumar meet in New Delhi

ಇತ್ತೀಚಿಗೆ ದೇಶದ ಉದ್ದಗಲಕ್ಕೂ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ಅದರಲ್ಲೂ ಪ್ರಮುಖವಾಗಿ ಬಿಹಾರದಲ್ಲಿ ಆದಂತಹ ಒಂದು ರಾಜಕೀಯದ ಒಂದು ಹೊಸ ಬೆಳವಣಿಗೆ ಎಲ್ಲರ ಗಮನ ಸೆಳೆದಿದೆ. ಜನತಾ ಪರಿವಾರ ಮತ್ತೆ ಒಂದಾಗಬೇಕೆಂಬ ಚರ್ಚೆಗಳು ನಡೆದಿವೆ. ನಿತೀಶ್‌ ಕುಮಾರ್‌ ಅವರು ಕೆಲ ಮಹತ್ವದ ವಿಷಯಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಪ್ರಾಥಮಿಕ ಹಂತದ ಚರ್ಚೆಗಳಾಗಿವೆ ಎಂದರು ಮಾಜಿ ಮುಖ್ಯಮಂತ್ರಿಗಳು.

ತಮ್ಮ ಭೇಟಿಗೂ ಮೊದಲು ನಿತೀಶ್ ಕುಮಾರ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಕೇಳಲಾದ ಪ್ರಶ್ನೆಗೆ, "ಮುಂದಿನ ದಿನಗಳಲ್ಲಿ ದೇಶದ ಹಿತದೃಷ್ಟಿಯಿಂದ ಏನೇನು ಬೆಳವಣಿಗೆ ಆಗಬೇಕು. ಆ ಬೆಳವಣಿಗೆಗಳು ಯಾವ ರೀತಿ ಆಗುತ್ತವೆ ಕಾದುನೋಡಿ" ಎಂದು ಅವರು ಮಾರ್ಮಿಕವಾಗಿ ಉತ್ತರಿಸಿದರು.

HD Kumaraswamy and Bihar CM Nitish Kumar meet in New Delhi

2018ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರಕಾರ ರಚನೆ ಮಾಡಿದಾಗ ಸುಮಾರು 23 ರಾಜ್ಯಗಳ ಪ್ರಮುಖ ನಾಯಕರುಗಳು ಸೇರಿ ಹಲವಾರು ರಾಜ್ಯಗಳ ಮುಖ್ಯಮಂತ್ರಿಗಳು ಆ ಪ್ರಮಾಣದ ಸಮಾರಂಭದಲ್ಲಿ ಸೇರಿದ್ದ ಅವತ್ತಿನ ಸನ್ನಿವೇಶ, ಒಂದು ಪರ್ಯಾಯ ಶಕ್ತಿಯಾಗಿ ಒಟ್ಟುಗೂಡಿಸಬೇಕೆಂದು ಆಸೆ ಇತ್ತು. ಆದರೆ, ಅದಕ್ಕೆ ಹಿನ್ನಡೆ ಆಯಿತು. ಈಗ ಬಿಹಾರದಲ್ಲಿ ಆಗಿರುವ ಬೆಳವಣಿಗೆಯಿಂದ ಯಾವ ರೀತಿ ಬದಲಾವಣೆ ಆಗುತ್ತದೆ ಎಂಬುದನ್ನು ಕಾದು ನೋಡೊಣ ಎಂದರು ಕುಮಾರಸ್ವಾಮಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+