ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ.ಕೆ ಶಿವಕುಮಾರ್ ಭೇಟಿ ಮಾಡಲಿರುವ ಎಚ್‌ಡಿ ಕುಮಾರಸ್ವಾಮಿ

|
Google Oneindia Kannada News

Recommended Video

HD Kumaraswamy will Meet DK Shivakumar Today | Oneindia Kannada

ನವದೆಹಲಿ, ಅಕ್ಟೋಬರ್ 21: ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇಂದು ನವದೆಹಲಿಯ ತಿಹಾರ್ ಜೈಲಿನಲ್ಲಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಲಿದ್ದಾರೆ.

ಸಮ್ಮಿಶ್ರ ಸರ್ಕಾರ ಇನ್ನೇನು ಬಿದ್ದೇ ಹೋಗುತ್ತದೆ ಎನ್ನುವ ಸಂದರ್ಭದಲ್ಲಿ ಎಚ್‌ ಕುಮಾರಸ್ವಾಮಿ ಅವರ ಪರ ಶಿವಕುಮಾರ್ ನಿಂತಿದ್ದರು.

ಡಿಕೆ ಶಿವಕುಮಾರ್ ತಾಯಿ, ಪತ್ನಿಗೆ ರಿಲೀಫ್ ನೀಡಿದ ದೆಹಲಿ ಹೈಕೋರ್ಟ್ಡಿಕೆ ಶಿವಕುಮಾರ್ ತಾಯಿ, ಪತ್ನಿಗೆ ರಿಲೀಫ್ ನೀಡಿದ ದೆಹಲಿ ಹೈಕೋರ್ಟ್

ಜೈಲಿಗೆ ಹೋದ ಬಳಿಕ ಇಬ್ಬರ ಮೊದಲ ಭೇಟಿ ಇದಾಗಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಭೇಟಿ ನಡೆಯುವ ಸಾಧ್ಯತೆ ಇದ್ದು, ಮಾಜಿ ಸಚಿವರಾದ ಸಾರಾ ಮಹೇಶ್ ಮತ್ತು ಸಿ ಎಸ್ ಪುಟ್ಟರಾಜು ಎಚ್‌ಡಿ ಕುಮಾರಸ್ವಾಮಿ ಅವರಿಗೆ ಸಾಥ್ ಕೊಡಲಿದ್ದಾರೆ.

ಇಡಿ ಸಮನ್ಸ್ ರದ್ದು ಕೋರಿ ಗೌರಮ್ಮ ಸಲ್ಲಿಸಿದ್ದ ಅರ್ಜಿ ವಿಚಾರಣೆ

ಇಡಿ ಸಮನ್ಸ್ ರದ್ದು ಕೋರಿ ಗೌರಮ್ಮ ಸಲ್ಲಿಸಿದ್ದ ಅರ್ಜಿ ವಿಚಾರಣೆ

ಇಡಿ ಕೊಟ್ಟಿರುವ ಸಮನ್ಸ್ ರದ್ದು ಕೋರಿ ಡಿಕೆಶಿ ತಾಯಿ ಗೌರಮ್ಮ ಮತ್ತು ಪತ್ನಿ ಉಷಾ ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ದೆಹಲಿ ಹೈಕೋರ್ಟಿನಲ್ಲಿ ನಡೆಯಲಿದೆ. ಕಳೆದ ಸಲ ವಿಚಾರಣೆ ನಡೆದಿದ್ದಾಗ ಕೊಟ್ಟಿದ್ದ ಸಮನ್ಸ್‍ನ್ನು ವಾಪಸ್ ಪಡೆದು ಒಂದು ವಾರದೊಳಗೆ ಹೊಸದಾಗಿ ಸಮನ್ಸ್ ಕೊಡೋದಾಗಿ ಇಡಿ ಹೇಳಿತ್ತು.

ಗೌರಮ್ಮ ನೀಡಿದ್ದ ಕಾರಣಗಳಿವು

ಗೌರಮ್ಮ ನೀಡಿದ್ದ ಕಾರಣಗಳಿವು

ತಮಗೆ 85 ವರ್ಷ ವಯಸ್ಸಾಗಿದ್ದು, ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲು ಅಧಿಕಾರ ಇಲ್ಲ ಅನ್ನೋದು ಡಿಕೆಶಿ ತಾಯಿ ವಾದವಾಗಿತ್ತು. ಇತ್ತ ದೆಹಲಿ ಬದಲು ಬೆಂಗಳೂರಲ್ಲೇ ವಿಚಾರಣೆಗೆ ಹಾಜರಾಗಲು ಅವಕಾಶ ಕೊಡಬೇಕು ಎಂದು ಡಿಕೆಶಿ ಪತ್ನಿ ಹೇಳಿದ್ದರು.

ತಾತ್ಕಾಲಿಕ ರಿಲೀಫ್ ನೀಡಿದ್ದ ದೆಹಲಿ ಹೈಕೋರ್ಟ್

ತಾತ್ಕಾಲಿಕ ರಿಲೀಫ್ ನೀಡಿದ್ದ ದೆಹಲಿ ಹೈಕೋರ್ಟ್

ಡಿಕೆ ಶಿವಕುಮಾರ್ ತಾಯಿ ಹಾಗೂ ಪತ್ನಿಗೆ ದೆಹಲಿ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿತ್ತು. ಇನ್ನು ಹತ್ತು ದಿನಗಳ ಕಾಲ ಡಿಕೆ ಶಿವಕುಮಾರ್ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಅವರನ್ನು ಇಡಿ ಹತ್ತು ದಿನಗಳ ಕಾಲ ವಿಚಾರಣೆ ನಡೆಸದಿರಲು ಹೈಕೋರ್ಟ್ ಸೂಚನೆ ನೀಡಿದೆ.

ಡಿಕೆಶಿ ಕುಟುಂಬ ಸದಸ್ಯರ ನಡುವೆ ಹಣಕಾಸಿನ ವ್ಯವಹಾರ

ಡಿಕೆಶಿ ಕುಟುಂಬ ಸದಸ್ಯರ ನಡುವೆ ಹಣಕಾಸಿನ ವ್ಯವಹಾರ

ಡಿ. ಕೆ. ಶಿವಕುಮಾರ್ ಕುಟುಂಬ ಸದಸ್ಯರ ನಡುವೆಯೇ ಹಲವು ಹಣಕಾಸಿನ ವ್ಯವಹಾರ ನಡೆದಿದೆ. ಡಿ. ಕೆ. ಶಿವಕುಮಾರ್‌ಗೆ ಉಷಾ 2.60 ಕೋಟಿ ಸಾಲ ನೀಡಿದ್ದಾರೆ. ಮಾವ ಕೆಂಪೇಗೌಡರಿಂದ 5.42 ಕೋಟಿ, ಅತ್ತೆ ಗೌರಮ್ಮರಿಂದ 15.86 ಕೋಟಿ ಸಾಲ ಪಡೆದಿದ್ದಾರೆ. ಹಣದ ವ್ಯವಹಾರದ ಬಗ್ಗೆ ಮಾಹಿತಿ ಪಡೆಯಲು ಇಡಿ ನೋಟಿಸ್ ನೀಡಿತ್ತು.

ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಪತ್ನಿ ಮತ್ತು ತಾಯಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್ ಬಂಧನವಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

English summary
Former Chief Minister HD Kumaraswamy will meet DK Shivakumar at Tihar Jail in New Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X