ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೆರೆ-ಬರದಿಂದ ತತ್ತರಿಸಿದ ಕರ್ನಾಟಕ: 2ಸಾವಿರ ಕೋಟಿ ನೀಡಲು ಮೋದಿಗೆ ಮೊರೆ

By Nayana
|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 10: ರಾಜ್ಯದ ನೆರೆ-ಬರ ವಿಚಾರದ ಕುರಿತು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ನಿಯೋಗ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದೆ.

ಮೋದಿ ಭೇಟಿ ಬಳಿಕ ಎಚ್‌ಡಿ ಕುಮಾರಸ್ವಾಮಿ ಮಾತನಾಡಿ, ರಾಜ್ಯದ 7 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿ ಪ್ರವಾಹಕ್ಕೆ ತುತ್ತಾಗಿದೆ, ಲಕ್ಷಾಂತರ ಮಂದಿ ಆಸ್ತಿಪಾಸ್ತಿಗಳನ್ನು ಕಳೆದುಕೊಂಡಿದ್ದಾರೆ. ಹಾಗೆಯೇ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂಗಾರು ಮಳೆಯಾಗದೆ ಬರ ಪರಿಸ್ಥಿತಿ ಎದುರಿಸುತ್ತಿರುವ ಕುರಿತು ವಿವರಣೆ ನೀಡಲಾಗಿದೆ ಎಂದರು.

ರಾಜ್ಯದಲ್ಲಿ ನೆರೆ-ಬರ: ಸಿಎಂ ನೇತೃತ್ವದ ನಯೋಗದಿಂದ ಮೋದಿ ಭೇಟಿ ರಾಜ್ಯದಲ್ಲಿ ನೆರೆ-ಬರ: ಸಿಎಂ ನೇತೃತ್ವದ ನಯೋಗದಿಂದ ಮೋದಿ ಭೇಟಿ

ಶೀಘ್ರವೇ ಕೇಂದ್ರದಿಂದ 2 ಸಾವಿರ ಕೋಟಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದೇವೆ, ಖುದ್ದಾಗಿ ಮಾಜಿ ಪ್ರಧಾನಿ ದೇವೇಗೌಡ ಅವರು ಮೋದಿಯವರ ಬಳಿ ಮಾತನಾಡಿದ್ದಾರೆ, ಅಧಿಕಾರಿಗಳ ತಂಡವನ್ನು ಕೇಂದ್ರದಿಂದ ಕಳುಹಿಸಿಕೊಡುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

HDK led state delegation sought PM Modi for Rs2k crores for flood and drought relief

ಕೊಡಗು ಮತ್ತು ನೆರೆಯ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಸತತ ಭಾರಿ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಉಂಟಾಗಿ ಜನ-ಜಾನುವಾರುಗಳು ಜೀವ ಕಳೆದುಕೊಂಡಿದ್ದು, ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ.

ಕೇರಳ ಪ್ರವಾಹ: ಎಂಟು ದಿನ ಜತೆಗಿದ್ದರೂ ಇವರ ಗುರುತು ಯಾರಿಗೂ ಸಿಗಲಿಲ್ಲ! ಕೇರಳ ಪ್ರವಾಹ: ಎಂಟು ದಿನ ಜತೆಗಿದ್ದರೂ ಇವರ ಗುರುತು ಯಾರಿಗೂ ಸಿಗಲಿಲ್ಲ!

ಆಗಸ್ಟ್ 2 ನೇ ವಾರದಲ್ಲಿ ಕಳೆದ 118 ವರ್ಷಗಳಲ್ಲೇ ದಾಖಲೆ ಮಳೆ ಸುರಿದಿದ್ದರಿಂದ ಅಪಾರ ನಷ್ಟ ಸಂಭವಿಸಿದ್ದು, ಕೃಷಿ, ತೋಟಗಾರಿಕೆ ಹಾಗೂ ವಾಣಿಜ್ಯಬೆಳೆಗಳಿಗೆ, ಮೂಲಸೌಕರ್ಯ, ಮನೆಗಳಿಗೆ ತೀವ್ರ ಹಾನಿಯುಂಟಾಗಿದೆ. ಅತಿವೃಷ್ಟಿಯಿಂದಾಗಿ ಈ ಜಿಲ್ಲೆಗಳಲ್ಲಿ ಒಟ್ಟು 3705.87 ಕೋಟಿ ರೂ. ನಷ್ಟವಾಗಿದೆ.

ಕೊಡಗಿನ ಮಳೆ ನಿಂತರೂ 726 ಕುಟುಂಬಗಳು ಇನ್ನೂ ನೆಲೆ ಕಂಡಿಲ್ಲ ಕೊಡಗಿನ ಮಳೆ ನಿಂತರೂ 726 ಕುಟುಂಬಗಳು ಇನ್ನೂ ನೆಲೆ ಕಂಡಿಲ್ಲ

ಎಂದು ಅಂದಾಜಿಸಲಾಗಿದೆ. ಪುನರ್ವಸತಿ ಮತ್ತು ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕೊಡಗು ಮತ್ತಿತರ ಜಿಲ್ಲೆಗಳಿಗೆ 2000 ರೂಪಾಯಿಗಳ ಪ್ಯಾಕೇಜ್ ಘೋಷಿಸಿ ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ನಿಯೋಗದ ಇತರ ಸದಸ್ಯರೊಂದಿಗೆ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.

HDK led state delegation sought PM Modi for Rs2k crores for flood and drought relief

ಕೊಡಗು ಮತ್ತು ನೆರೆಯ ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಸಂಭವಿಸಿದ ಹಾನಿಯನ್ನು ಸಮೀಕ್ಷೆ ಮಾಡಲು ಕೂಡಲೇ ಕೇಂದ್ರ ಸರ್ಕಾರವು ಅಧಿಕಾರಿಗಳ ಎರಡು ತಂಡಗಳನ್ನು ಕಳುಹಿಸುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ನೇತೃತ್ವದ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ಮಳೆಯಿಂದ ವಿವಿಧ ರಾಜ್ಯಗಳಲ್ಲಿ ಆಗಿರುವ ಹಾನಿಯ ಲೆಕ್ಕ ಕೊಟ್ಟ ಕೇಂದ್ರ ಗೃಹ ಇಲಾಖೆ ಮಳೆಯಿಂದ ವಿವಿಧ ರಾಜ್ಯಗಳಲ್ಲಿ ಆಗಿರುವ ಹಾನಿಯ ಲೆಕ್ಕ ಕೊಟ್ಟ ಕೇಂದ್ರ ಗೃಹ ಇಲಾಖೆ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಸಂಸದ ಪ್ರತಾಪ್ ಸಿಂಹ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಕಂದಾಯ ಸಚಿವ ಆರ್. ವಿ.ದೇಶಪಾಂಡೆ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮುಖ್ಯಮಂತ್ರಿಗಳೊಂದಿಗೆ ನಿಯೋಗದಲ್ಲಿ ಇದ್ದರು.

English summary
Chief minister H.D.Kumaraswamy led state delegation has sought prime minister Narendra Modi for Rs 2k crores for flood and drought relief in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X