ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯದ ಬಗ್ಗೆ ವೈದ್ಯರ ಮಾಹಿತಿ

|
Google Oneindia Kannada News

ನವದೆಹಲಿ, ಆಗಸ್ಟ್.13: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ. ವೆಂಟಿಲೇಟರ್ ನಲ್ಲಿಟ್ಟು ಚಿಕಿತ್ಸೆಯನ್ನು ಮುಂದುವರಿಸಲಾಗುತ್ತಿದೆ ಎಂದು ನವದೆಹಲಿಯ ಸೇನಾ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

ಒಂದು ಹಂತದಲ್ಲಿ ಕೋಮಾ ಸ್ಥಿತಿಗೆ ತಲುಪಿರುವ ಅವರಿಗೆ ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ಮುಂದುವರಿಸಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮದುಳಿನ ಶಸ್ತ್ರ ಚಿಕಿತ್ಸೆಯ ಬಳಿಕ ವೆಂಟಿಲೇಟರ್ ನಲ್ಲಿದ್ದ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ

ಕಳೆದ ಆಗಸ್ಟ್.10ರಂದು ನವದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾದ ಪ್ರಣಬ್ ಮುಖರ್ಜಿ ಅವರಿಗೆ ಮೊದಲು ಮೆದುಳಿದ ಶಸ್ತ್ರ ಚಿಕಿತ್ಸೆ ನಡೆಸಲಾಯಿತು. ಸೋಮವಾರ ರಾತ್ರಿಯಿಂದಲೇ ವೆಂಟಿಲೇಟರ್ ನಲ್ಲಿ ಇರಿಸಿ ಚಿಕಿತ್ಸೆ ಮುಂದುವರಿಸಿದರೂ ಯಾವುದೇ ರೀತಿ ಚೇತರಿಕೆ ಕಂಡು ಬಂದಿರಲಿಲ್ಲ.

Health Condition Of Former President Pranab Mukherjee Remains Unchanged

ಮಾಜಿ ರಾಷ್ಟ್ರಪತಿಗೆ ಕೊವಿಡ್-19 ಪಾಸಿಟಿವ್:

ಮೆದುಳಿನ ಶಸ್ತ್ರ ಚಿಕಿತ್ಸೆಗೆ ಒಳಗಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೂ ಒಳಪಡಿಸಲಾಗಿತ್ತು. ಈ ವೇಳೆ ಅವರಲ್ಲಿ ಕೊವಿಡ್-19 ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿತ್ತು.

English summary
Health Condition Of Former President Pranab Mukherjee Remains Unchanged.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X