ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಡಾ. ಸುಧಾಕರ್ ಮನವಿ
ನವದೆಹಲಿ, ಅಕ್ಟೋಬರ್ 08: ರಾಜ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಮನವಿ ಮಾಡಿದ್ದಾರೆ.
ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಎನ್‍ಎಚ್‍ಎಂ ಅಡಿ ಅನುದಾನ ನೀಡಲು ಕೇಂದ್ರ ಸರ್ಕಾರಕ್ಕೆ ಕೋರಲಾಗಿದೆ ಎಂದು ತಿಳಿಸಿದ್ದಾರೆ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೇಂದ್ರ ಆರೋಗ್ಯ ಸಚಿವರು, ರಾಜ್ಯ ಕೋವಿಡ್ ನಿರ್ವಹಣೆಯಲ್ಲಿ ಸಾಧಿಸಿರುವ ಪ್ರಗತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ 50 ಲಕ್ಷಕ್ಕೂ ಅಧಿಕ ಲಸಿಕೆ ಡೋಸ್ ಸಂಗ್ರಹವಿದೆ. ಮೊದಲ ಡೋಸ್ ನಲ್ಲಿ ಶೇ.82 ಹಾಗೂ ಎರಡೂ ಡೋಸ್ ನಲ್ಲಿ ಒಟ್ಟು ಶೇ.37 ರಷ್ಟು ಪ್ರಗತಿಯಾಗಿದೆ. ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಇದಕ್ಕಾಗಿ ಎನ್‍ಎಚ್‍ಎಂ ಅಡಿಯಲ್ಲಿ ಹೆಚ್ಚು ಅನುದಾನ ಬೇಕಿದೆ ಎಂದು ಕೋರಲಾಗಿದೆ.

ಇದಕ್ಕೆ ಸಕಾರಾತ್ಮಕವಾದ ಸ್ಪಂದನೆ ಸಿಕ್ಕಿದೆ. ಜಿಲ್ಲೆಗಳಲ್ಲಿ ತುರ್ತು ಘಟಕ, ದ್ವಿತೀಯ, ತೃತೀಯ ಹಂತದ ಆರೋಗ್ಯ ವ್ಯವಸ್ಥೆಯ ಬಲವರ್ಧನೆ ಬಗ್ಗೆಯೂ ಚರ್ಚಿಸಲಾಗಿದೆ. ರಾಜ್ಯದಲ್ಲಿ ಅತ್ಯುತ್ತಮ ಆರೋಗ್ಯ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ವಿವರಿಸಿದರು.
ಸಚಿವ ಡಾ.ಕೆ.ಸುಧಾಕರ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ, ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಮಕ್ಕಳಿಗೆ ನೀಡಲಾಗುವ ಲಸಿಕೆಗೆ ನಾವೂ ಕಾಯುತ್ತಿದ್ದೇವೆ. ಇದು ಇನ್ನೂ ಪ್ರಯೋಗದ ಹಂತದಲ್ಲಿದೆ ಎಂದು ತಿಳಿದುಬಂದಿದೆ. ಲಸಿಕೆ ತಯಾರಿಕಾ ಕಂಪನಿಗಳೊಂದಿಗೆ ಚರ್ಚಿಸಿದ ಬಳಿಕ ಕೇಂದ್ರ ಸರ್ಕಾರ ಈ ಬಗ್ಗೆ ಪ್ರಕಟಿಸಲಿದೆ.
ಹಬ್ಬಗಳ ಸಂದರ್ಭದಲ್ಲಿ ಕೋವಿಡ್ ನಿರ್ವಹಣೆಗೆ ಮಾರ್ಗಸೂಚಿ ನೀಡಲಾಗಿದೆ. ಕೊರೊನಾ ಪರೀಕ್ಷೆಯನ್ನು ನಿರಂತರವಾಗಿ ಮಾಡುತ್ತಿದ್ದು, ನಿತ್ಯ ಒಂದೂವರೆ ಲಕ್ಷ ಪರೀಕ್ಷೆ ನಡೆಯುತ್ತಿದೆ. ಪಾಸಿಟಿವಿಟಿ ದರ 0.4% ಗಿಂತಲೂ ಕಡಿಮೆ ಇದೆ. ಆದ್ದರಿಂದ ಹೆಚ್ಚು ಆತಂಕವಿಲ್ಲ ಎಂದರು.
-
Lockdown: ಭಾರತದಲ್ಲಿ ಲಾಕ್ಡೌನ್ ಇಲ್ಲ: ವದಂತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ -
Top 3 Job Sectors: 2026ರಲ್ಲಿ ಯಾವ ಕ್ಷೇತ್ರ ಆಯ್ಕೆ ಮಾಡಬೇಕು? ಟಾಪ್ 3 ಉದ್ಯೋಗ ವಲಯಗಳು -
ವಾಸ್ತು ಅನುಸರಿಸುವುದು ಏಕೆ ಮುಖ್ಯ? ತಿಳಿಯಿರಿ ಕಾರಣಗಳು -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ









Click it and Unblock the Notifications