ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಲಸಿಕೆ ದಾಖಲೆಗಳಿಂದ ಮೋದಿ ಚಿತ್ರ ಕೈಬಿಡಲು ಆರೋಗ್ಯ ಸಚಿವಾಲಯ ನಿರ್ಧಾರ

|
Google Oneindia Kannada News

ನವದೆಹಲಿ, ಮಾರ್ಚ್ 11: ಕೇಂದ್ರ ಸರ್ಕಾರದ ಹಲವು ಯೋಜನೆಗಳು ಹಾಗೂ ಕೊರೊನಾ ಲಸಿಕೆ ಪ್ರಮಾಣ ಪತ್ರದ ಮೇಲಿನ ಪ್ರಧಾನಿ ಮೋದಿ ಚಿತ್ರ ತೆಗೆದುಹಾಕಲು ಆರೋಗ್ಯ ಸಚಿವಾಲಯ ನಿರ್ಧರಿಸಿದೆ. ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಹಾಗೂ ಪುದುಚೇರಿಯಲ್ಲಿ ಕೊರೊನಾ ಲಸಿಕೆ ಪ್ರಮಾಣ ಪತ್ರದ ಮೇಲೆ ಮೋದಿ ಚಿತ್ರ ಬಳಸದಂತೆ ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈಚೆಗೆ ಕೊರೊನಾ ಲಸಿಕೆ ಪ್ರಮಾಣ ಪತ್ರದ ಮೇಲೆ ಮೋದಿ ಚಿತ್ರ ಬಳಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ತೃಣಮೂಲ ಕಾಂಗ್ರೆಸ್, ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಎಂದು ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು. ನರ್ಸ್‌ಗಳು, ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರ ಸೇವೆಯನ್ನು ಮೋದಿ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮಾರ್ಚ್ 3ರಂದು ದೂರು ನೀಡಿತ್ತು.

ಪಶ್ಚಿಮ ಬಂಗಾಳದಲ್ಲಿ ಲಸಿಕೆ ದಾಖಲೆಗಳಲ್ಲಿ ಪ್ರಧಾನಿ ಫೋಟೋ: ಚುನಾವಣಾ ಆಯೋಗಕ್ಕೆ ಟಿಎಂಸಿ ದೂರುಪಶ್ಚಿಮ ಬಂಗಾಳದಲ್ಲಿ ಲಸಿಕೆ ದಾಖಲೆಗಳಲ್ಲಿ ಪ್ರಧಾನಿ ಫೋಟೋ: ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

ಕೊವಿಡ್-19 ಲಸಿಕೆ ಸೇರಿದಂತೆ ಸರ್ಕಾರಿ ಯೋಜನೆಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾವಚಿತ್ರ ಹಾಕುವ ಮೂಲಕ ಅಧಿಕಾರ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಚುನಾವಣಾ ಆಯೋಗ ಈ ವಿಷಯದಲ್ಲಿ ಮಧ್ಯ ಪ್ರವೇಶಿಸಬೇಕು. ಪೆಟ್ರೋಲ್ ಬಂಕ್ ಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದ ಯೋಜನೆಗಳಲ್ಲಿ ಪ್ರಧಾನಿ ಮೋದಿ ಭಾವಚಿತ್ರವಿರುವ ಫ್ಲೆಕ್ಸ್‌ಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿತ್ತು.

Health Ministry To Remove Modi Picture From Vaccine Certificates

ಈ ದೂರನ್ನು ಪರಿಗಣಿಸಿದ್ದ ಚುನಾವಣಾ ಆಯೋಗ, ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ ನೀಡುತ್ತಿರುವ ಕೊರೊನಾ ಲಸಿಕೆ ಪ್ರಮಾಣ ಪತ್ರಗಳಲ್ಲಿ ಮೋದಿ ಚಿತ್ರ ತೆಗೆಯುವಂತೆ ಮಾರ್ಚ್ 6ರಂದು ಆರೋಗ್ಯ ಸಚಿವಾಲಯಕ್ಕೆ ಸೂಚಿಸಿತ್ತು. ಇದೀಗ ಚುನಾವಣಾ ಕೇಂದ್ರಿತ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್ ಪ್ರಮಾಣ ಪತ್ರಗಳ ಮೇಲೆ ಮೋದಿ ಚಿತ್ರ ಬಳಸದಂತೆ ನಿರ್ಧರಿಸಲಾಗಿದೆ.

English summary
Central Health Ministry has decides to remove PM Modi's Photo from Vaccine Certificates in Poll bound states,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X