ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಗುಡುಗು, ಆಲಿಕಲ್ಲು ಸಹಿತ ಭಾರಿ ಮಳೆ

|
Google Oneindia Kannada News

ನವದೆಹಲಿ, ಮಾರ್ಚ್ 14: ದೆಲಿಯಲ್ಲಿ ಗುಡುಗು ಸಮೇತ ಆಲಿಕಲ್ಲು ಮಳೆ ಆರಂಭವಾಗಿದೆ.

ಸದಾ ಟ್ರಾಫಿಕ್‌ನಿಂದ ಗಿಜಿಗುಡುತ್ತಿರುವ ದೆಹಲಿಯಲ್ಲಿ ಮಳೆಯಿಂದಾಗಿ ಮತ್ತಷ್ಟು ಸಂಚಾರ ದಟ್ಟಣೆ ಉಂಟಾಗಿದೆ.

ಇದೀಗ ವಾರಾಂತ್ಯದಲ್ಲಿ ಹೊರಗಡೆ ಹೋಗದಂತೆ ಜನರ ಕಾಲನ್ನು ಮಳೆ ಕಟ್ಟಿ ಹಾಕಿದೆ. ಆಲಿಕಲ್ಲು ಮಳೆಯ ಫೋಟೊಗಳು ಫೇಸ್‌ಬುಕ್, ಟ್ವಿಟ್ಟರ್, ಇನ್‌ಸ್ಟಾಗ್ರಾಂನಲ್ಲಿ ಹರಿದಾಡುತ್ತಿದೆ.

rain

ಹಲವು ವರ್ಷಗಳ ಬಳಿಕ ಈ ರೀತಿ ಆಲಿಕಲ್ಲು ಮಳೆಯನ್ನು ದೆಹಲಿ ನೋಡುತ್ತಿದೆ ಎಂದು ಸೋಶಿಯಲ್ ಮೀಡಿಯಾಗಳಲ್ಲಿ ಜನರು ಬರೆದುಕೊಂಡಿದ್ದಾರೆ.

ದಾವಣಗೆರೆಯಲ್ಲಿ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆದಾವಣಗೆರೆಯಲ್ಲಿ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ

ಕೇಂದ್ರ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಮೋಡಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಿದೆ.

ಇನ್ನು ಕರ್ನಾಟಕದಲ್ಲಿ ಉತ್ತರ ಕರ್ನಾಟಕದ ಕಲಬುರಗಿ, ಬೀದರ್‌ನಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 37.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಬೆಳಗಾವಿ ಏರ್‌ಪೋರ್ಟ್‌ನಲ್ಲಿ ಕನಿಷ್ಠ ಉಷ್ಣಾಂಶ 17.2 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಬೆಂಗಳೂರಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

English summary
Many parts of Delhi, this afternoon, looked snowed in as busy roads were covered in hailstones.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X