ಗುರುಗಾಂವ್ ಘಟನೆಯಿಂದ ಶಾಲೆಗಳಿಗೆ ಬಿಗಿ ಕಾನೂನು ಜಾರಿ: ಕೇಂದ್ರ

Posted By:
Subscribe to Oneindia Kannada

ನವದೆಹಲಿ, ಸೆಪ್ಟೆಂಬರ್ 12: ಮಕ್ಕಳ ಮೇಲೆ ಇತ್ತೀಚೆಗೆ ಅವ್ಯಾಹತವಾಗಿ ನಡೆಯುತ್ತಿರುವ ದೌರ್ಜನ್ಯ ತಡೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಕುರಿತು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಜಂಟಿಯಾಗಿ ಸಭೆ ಕರೆದಿದೆ.

ರಯಾನ್ ಶಾಲೆ ವಿದ್ಯಾರ್ಥಿ ಹತ್ಯೆ: ಪ್ರಾಂಶುಪಾಲ ಸೇರಿ 4 ಬಂಧನ

ಸೆ.13 ರಂದು ನಡೆಯಲಿರುವ ಈ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮನೇಕಾ ಗಾಂಧಿ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವ್ಡೇಕರ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಗುರುಗಾಂವ್ ನ ರಯಾನ್ ಅಂತಾರಾಷ್ಟ್ರೀಯ ಶಾಲೆಯಲ್ಲಿ 7 ವರ್ಷದ ಮಗುವನ್ನು ಕತ್ತು ಸೀಳಿ ಕೊಲೆ ಮಾಡಿದ ಘಟನೆಯ ನಂತರ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಮಕ್ಕಳ ರಕ್ಷಣೆಯ ಕುರಿತು ಗಂಭೀರವಾಗಿ ಚಿಂತಿಸುತ್ತಿದೆ.

High level meeting to on saftey and protection of children by centre on Sep 13th

ಈ ಕುರಿತು ನವದೆಹಲಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಮನೇಕಾ ಗಾಂಧಿ, ಈ ಸಭೆಯಲ್ಲಿ ಪ್ರತಿಯೊಂದು ಶಾಲೆಯೂ ಅನುಸರಿಸಲೇಬೇಕಾದ ಕೆಲವು ನಿಯಮಗಳನ್ನು ಸರ್ಕಾರ ಜಾರಿಗೆ ತರಲಿದೆ ಎಂದು ಎಂದು ಹೇಳಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Ministry of Women and Child Development and the Ministry of Human Resource Development will hold a high-level meeting on the safety and protection of children in schools, on Sep 13th. This comes in the wake of the gruesome killing of a seven-year-old at the Ryan International School in Gurugram.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ